ಕಾರಾಗೃಹಗಳ ಭದ್ರತೆಗೆ ಆಧುನಿಕ ತಂತ್ರಜ್ಞಾನ; ₹20 ಕೋಟಿ ವೆಚ್ಚದಲ್ಲಿ ಉಪಕರಣಗಳ ಖರೀದಿ

Date:

ರಾಜ್ಯದ ಕಾರಾಗೃಹಗಳಲ್ಲಿ ಮೊಬೈಲ್‌, ಮಾದಕವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 2026-27ನೇ ಸಾಲಿನ ಬಜೆಟ್‌ ಘೋಷಣೆಯಂತೆ ‘ಆಪರೇಷನ್‌ ಶುದ್ಧೀಕರಣ’ದ ಅಡಿಯಲ್ಲಿ ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಅತ್ಯಾಧುನಿಕ ಭದ್ರತಾ ತಂತ್ರಜ್ಞಾನ ಅಳವಡಿಸಲು ₹20 ಕೋಟಿ ವೆಚ್ಚದ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

- Advertisement -

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾರಾಗೃಹಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಆಧುನಿಕ ತಂತ್ರಜ್ಞಾನದ ನೆರವು ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಯೋಜನೆಯಡಿ Artificial Intrusion Detection System, ಸಿಸಿಟಿವಿ ಕ್ಯಾಮೆರಾಗಳು, ಬಾಡಿವೋರ್ನ್ ಕ್ಯಾಮೆರಾಗಳು, Infrared (IR) ಸಿಸಿಟಿವಿ ಕ್ಯಾಮೆರಾಗಳು ಹಾಗೂ X-Ray Baggage Scanner‌ಗಳು ಸೇರಿದಂತೆ ವಿವಿಧ ಅತ್ಯಾಧುನಿಕ ಭದ್ರತಾ ತಪಾಸಣಾ ಉಪಕರಣಗಳನ್ನು ಖರೀದಿಸಲಾಗುತ್ತದೆ.

ಕಾರಾಗೃಹಗಳೊಳಗೆ ಮೊಬೈಲ್‌ ಫೋನ್‌, ಮಾದಕವಸ್ತುಗಳು ಹಾಗೂ ಇತರೆ ನಿಷೇಧಿತ ವಸ್ತುಗಳ ಅಕ್ರಮ ಪ್ರವೇಶ ಮತ್ತು ಬಳಕೆಯನ್ನು ತಡೆಯುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಕಾರಾಗೃಹಗಳಲ್ಲಿನ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಹಾಗೂ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಈ ತಂತ್ರಜ್ಞಾನಗಳು ನೆರವಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Gen Z ಚಳವಳಿ ಕುರಿತು RSS ಬೈಠಕ್‌ನಲ್ಲಿ ಆತಂಕ: ವ್ಯವಸ್ಥೆಯ ವೈಫಲ್ಯವನ್ನು ಒಪ್ಪಿಕೊಂಡ ಸಂಘ

ಇತ್ತೀಚಿನ ದಿನಗಳಲ್ಲಿ ಕಾರಾಗೃಹಗಳೊಳಗೆ ಮೊಬೈಲ್‌ ಫೋನ್‌ ಸೇರಿದಂತೆ ನಿಷೇಧಿತ ವಸ್ತುಗಳ ಬಳಕೆ ಮತ್ತು ಅಕ್ರಮ ಚಟುವಟಿಕೆಗಳ ಕುರಿತು ಹಲವು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ಕ್ರಮ ಮಹತ್ವ ಪಡೆದಿದೆ.

‘ಆಪರೇಷನ್‌ ಶುದ್ಧೀಕರಣ’ದಡಿ ಅತ್ಯಾಧುನಿಕ ಭದ್ರತಾ ಉಪಕರಣಗಳ ಅಳವಡಿಕೆಯು ಕಾರಾಗೃಹಗಳಲ್ಲಿನ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದರ ಜತೆಗೆ ಕೈದಿಗಳು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಹೆಚ್ಚಿಸಲು ಪರಿಣಾಮಕಾರಿಯಾಗಿ ನೆರವಾಗಲಿದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...