ಮೋದಿ ಭ್ರಷ್ಟರಲ್ಲ ಎಂದರೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕ್ರಮ ಏಕಿಲ್ಲ: ವಿ ಎಸ್‌ ಉಗ್ರಪ್ಪ

Date:

  • ಮೋದಿ ಅವರಿಗೆ ದಮ್ಮು‌, ತಾಕತ್ತು ಇದ್ದರೆ ಕ್ರಮ ಜರುಗಿಸಲಿ
  • ಭ್ರಷ್ಟಾಚಾರ ಯಾರೆ ಮಾಡಿದರೂ ಕಾನೂನಿನಡಿ ಕ್ರಮ‌ ಆಗಬೇಕು 

ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟರಲ್ಲ‌‌ ಎಂದರೆ ಯಾಕೆ‌ ಯಡಿಯೂರಪ್ಪ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ಮೋದಿ ಅವರಿಗೆ ದಮ್ಮು‌, ತಾಕತ್ತು ಇದ್ದರೆ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಕ್ರಮ ಜರುಗಿಸಲಿ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಆಗ್ರಹಿಸಿದರು.

- Advertisement -

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರ ಮನೆಯಲ್ಲಿ 354 ಕೋಟಿಗೂ ಹೆಚ್ಚು ಹಣ ಸಿಕ್ಕಿದ್ದು, ಭ್ರಷ್ಟಾಚಾರ ಯಾರೆ ಮಾಡಿದರೂ ಕಾನೂನಿನ ಅಡಿಯಲ್ಲಿ ಕ್ರಮ‌ ಕೈಗೊಳ್ಳಬೇಕು. ತಪ್ಪು ಯಾರೇ ಮಾಡಿದರೂ ತಪ್ಪೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

“2021ರ ಯಡಿಯೂರಪ್ಪ‌ ಅವರ ನೇತೃತ್ವದ ಸರ್ಕಾರದಲ್ಲಿ. 566 ಕೋಟಿ ವೆಚ್ಚದಲ್ಲಿ‌‌ ಬಿಡಿಎ ಮನೆಗಳ‌‌ ನಿರ್ಮಾಣಕ್ಕೆ ಕ್ಲಿಯರೆನ್ಸ್ ಕೊಡುವುದಕ್ಕೆ ಎಚ್‌ಡಿಎಫ್‌ಸಿ ಬ್ಯಾಂಕಿನಿಂದ ಆರ್‌ಟಿಜಿಎಸ್ ಮೂಲಕ ಯಡಿಯೂರಪ್ಪ‌ ಅವರ ಕುಟುಂಬದವರ ಖಾತೆಗಳಿಗೆ ರಾಮಲಿಂಗಂ ಎಂಬ ಕಂಪನಿ ಹೆಸರಿನಲ್ಲಿ ಹಣ‌ ವರ್ಗಾವಣೆ‌ ಆಗಿತ್ತು. ಆ ಹಣವನ್ನ ಕೋಲ್ಕತ್ತಾ ಮೂಲದ 7 ಶೆಲ್ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಲಾಗಿತ್ತು. ಆ ಶೆಲ್ ಕಂಪನಿಗಳು ಕಾರ್ಪೊರೇಷನ್ ಬ್ಯಾಂಕ್ ಮೂಲಕ ಯಡಿಯೂರಪ್ಪ‌ನವರ ಕುಟುಂಬಕ್ಕೆ ಸೇರಿದ 2 ಕಂಪನಿಗಳಿಗೆ ಹಣ ವರ್ಗಾವಣೆ ಮಾಡಿದ್ದವು. ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರು ಎ1, ಅವರ ಪುತ್ರ ಎ2, ಅಳಿಯ ಶಶಿದರ್ ಮರಡಿ ಎ3, ಮೊಮ್ಮಗ ಸಂಜಯ್ ಶ್ರೀ ಎ4, ದುಡ್ಡು ಕೊಟ್ಟ ಚಂದ್ರಕಾಂತ ರಾಮಲಿಂಗಂ ಎ5 ಹೀಗೆ ಮುಂತಾದವರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಮೋದಿ ಮೌನ ಮುರಿಯಲಿ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಸುಂಬೆಯನ್ನೂ ನಾಚಿಸಿದ ಕುಮಾರಸ್ವಾಮಿ

“ದೇಶದ ಎಲ್ಲಾ ಭ್ರಷ್ಟರ ವಿರುದ್ಧ‌ ತನಿಖೆ ಆಗಬೇಕು. ಕರ್ನಾಟಕ, ತೆಲಂಗಾಣ‌, ಒಡಿಸ್ಸಾ, ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖಂಡರನ್ನ ಮಾತ್ರ ಗುರಿ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಐಟಿ ದಾಳಿಗಳು‌‌ ನಡೆಯುತ್ತಿವೆ. ಬಿಜೆಪಿ ಪಕ್ಷದಲ್ಲಿ ಯಾರು ಭ್ರಷ್ಟರೇ ಇಲ್ಲವೇ” ಎಂದು ಪ್ರಶ್ನಿಸಿದರು.

“ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಮಾಡಿಸಲು ಯಾವ ಪ್ರಯತ್ನವನ್ನು ಮಾಡುತ್ತಲೇ ಇಲ್ಲ. ಡಬಲ್ ಇಂಜಿನ್ ಸರ್ಕಾರ ಎನ್ನುತ್ತಾರೆ. ರೈತರ ಹಿತ ಕಾಯಲು ಪ್ರಧಾನ ಮಂತ್ರಿ ಅವರಿಗೆ ಒತ್ತಡ ತರಬಹುದಿತ್ತ, ಆದರೆ ಅಧಿಕಾರಕ್ಕಾಗಿ‌ ಕಚ್ಚಾಟ ಮಾಡುತ್ತ ಕಾಲ ಕಳೆಯುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಬಿಜೆಪಿ ಬಿ ಟೀಮ್ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಎ ಟೀಮ್ ಗಿಂತ ಬಿ ಟೀಮ್ ಸ್ಟ್ರಾಂಗ್ ಎಂದು ತೋರಿಸಲು ಕಾಂಗ್ರೆಸ್ ಪಕ್ಷದ ಮೇಲೆ ಇಲ್ಲಸಲ್ಲದ ಆರೋಪ‌ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ. ಲೋಕಸಭೆ ಚುನಾವಣೆ ನಂತರ 50 ಜನ ಶಾಸಕರು ಪಕ್ಷಾಂತರ ಮಾಡುತ್ತಾರೆ ಎಂದು‌‌‌ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ಸಿನ ಎಲ್ಲಾ ಶಾಸಕರು ಪಕ್ಷಕ್ಕೆ‌ ಬದ್ಧರಾಗಿದ್ದಾರೆ. ಮುಳುಗುತ್ತಿರುವ ಹಡಗು ಬಿಜೆಪಿಗೆ ಯಾರು ಹೋಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...