GST ಜಾರಿ ಮಾಡಿ ಭಾರತೀಯರ ತಲೆಗೆ ಟೋಪಿ ಹಾಕುತ್ತಿರುವ ಮೋದಿ: ಸಿಎಂ ಸಿದ್ದರಾಮಯ್ಯ

Date:

Advertisements

ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.

ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST ಶೇ. 18, ಶೇ. 28 ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಳಂದ’ ಕ್ಷೇತ್ರದ ಆಕ್ಷೇಪಕ್ಕೆ ಅರೆಬರೆ ಉತ್ತರಕೊಟ್ಟ ಚುನಾವಣಾ ಆಯೋಗ

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದೂ: ಸಿಎಂ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದೂ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X