ರಾಜ್ಯದಲ್ಲಿ ಮುಂಗಾರು ವಿಫಲ: ಆರಂಭಿಕ 50 ಲಕ್ಷ ಟನ್ ಬೆಳೆ ಉತ್ಪಾದನೆ ನಷ್ಟ, ಅಧಿಕವಾಗುವ ಭೀತಿ

Date:

ರಾಜ್ಯಾದ್ಯಂತ ಮುಂಗಾರು ಬಿತ್ತನೆ ಅವಧಿಯ ಮೊದಲ ಎರಡು ತಿಂಗಳು ಮುಗಿದಿದ್ದು, ಬಿತ್ತನೆಯ ಮೇಲೆ ತೀವ್ರ ದುಷ್ಪರಿಣಾಮ ಬೀರಿದೆ. ಮುಂಗಾರು ವಿಫಲದಿಂದಾಗಿ ರಾಜ್ಯವು ಕನಿಷ್ಠ 50 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯ ಆರಂಭಿಕ ಅಂದಾಜು ನಷ್ಟವನ್ನು ಎದುರಿಸುತ್ತಿದ್ದು, ಈ ತಿಂಗಳೂ ಕೂಡ ಮಳೆಯ ಕೊರತೆ ಮುಂದುವರಿದರೆ, ಬೆಳೆ ಉತ್ಪಾದನೆ ನಷ್ಟವು ಮತ್ತಷ್ಟು ಹೆಚ್ಚಾಗುತ್ತದೆ. ಕರ್ನಾಟಕವು ಈ ಬಾರಿ ಸುಮಾರು 150 ಲಕ್ಷ ಟನ್ ವಾರ್ಷಿಕ ಆಹಾರ ಧಾನ್ಯ ಉತ್ಪಾದನಾ ಗುರಿಯನ್ನು ನಿಗದಿಪಡಿಸಿತ್ತು ಎಂದು ಅಧಿಕಾರಿಗಳು ಮತ್ತು ಕೃಷಿ ತಜ್ಞರು ಹೇಳಿದ್ದಾರೆ.

- Advertisement -

ಆದಾಗ್ಯೂ, ಆಗಸ್ಟ್ ಮೊದಲ ವಾರದ ಹೊತ್ತಿಗೆ, ಮುಂಗಾರು ವಿಫಲವಾಗಿರುವುದರಿಂದ ಉತ್ಪಾದನೆಯು ಸುಮಾರು 50 ಲಕ್ಷ ಟನ್‌ಗಳಷ್ಟು ಕಡಿಮೆಯಾಗಬಹುದು. ಇದರಿಂದ ಗುರಿಯ ಸುಮಾರು ಶೇ.30ರಷ್ಟು ನಷ್ಟವಾಗುವು ಸಾಧ್ಯತೆ ಇದೆ ಎಂದು ಅಂದಾಜಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಆಗಸ್ಟ್ ಅಂತ್ಯದವರೆಗೆ ಮಳೆಯ ಕೊರತೆ ಮುಂದುವರಿದರೆ, ಆಹಾರ ಧಾನ್ಯಗಳ 75 ಲಕ್ಷ ಟನ್‌ವರೆಗೆ ಉತ್ಪಾದನಾ ನಷ್ಟ ಹೆಚ್ಚಾಗಬಹುದು. ಪರಿಣಾಮ ಬೀರುವ ಪ್ರಮುಖ ಬೆಳೆಗಳಲ್ಲಿ ಮೆಕ್ಕೆಜೋಳ, ಹತ್ತಿ, ಜೋಳ ಮತ್ತು ರಾಗಿ ಬೆಳೆಗಳೂ ಸೇರಿವೆ. ಎಲ್ ನಿನೋ ಪರಿಣಾಮವು ಜನವರಿ 2027 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಇದು ಹೆಚ್ಚಿನ ಶಾಖದ ಅಲೆಗಳಿಗೆ ಮತ್ತು ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಗೆ ಕಾರಣವಾಗುತ್ತದೆ” ಎಂದು ಎಂದು ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಮತ್ತು ರಾಜ್ಯ ಸರ್ಕಾರದ ಮಾಜಿ ಕೃಷಿ ಸಲಹೆಗಾರ ಎ ಬಿ ಪಾಟೀಲ್ ಹೇಳಿದ್ದಾರೆ.

“ಇದು ಪ್ರತಿಯಾಗಿ, ಆವಿಯಾಗುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ಮಣ್ಣಿನ ತೇವಾಂಶವನ್ನು ಕಡಿಮೆ ಮಾಡುತ್ತದೆ. ಇದು ಬರ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತದೆ. ಆದಾಗ್ಯೂ, ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಮುಂದಿನ ಒಂದು ಅಥವಾ ಎರಡು ತಿಂಗಳಲ್ಲಿ ಕರ್ನಾಟಕದ ಮೇಲೆ ಮಳೆಯನ್ನು ತರಬಹುದು. ಇದರಿಂದಾಗಿ ಸ್ವಲ್ಪ ಮಟ್ಟಿಗೆ ಬೆಳೆಗಳನ್ನು ಸುಧಾರಿಸಬಹುದು” ಎಂದು ಹೇಳಿದರು.

ಕೆಎಸ್‌ಎನ್‌ಡಿಎಂಸಿಯ ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು, “ಈ ವರ್ಷ ಮಳೆ ಕೊರತೆಯಿಂದಾಗಿ ಭತ್ತದ ಉತ್ಪಾದನೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ. ಜೂನ್ ಮತ್ತು ಜುಲೈನಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದ್ದು, ಕೆಲವೆಡೆ ಒಳಹರಿವೂ ಬಂದಿಲ್ಲ” ಎಂದು ಗಮನಸೆಳೆದರು.

“ಕೃಷ್ಣ ರಾಜ ಸಾಗರ (ಕೆಆರ್‌ಎಸ್) ಮತ್ತು ತುಂಗಭದ್ರಾ ಜಲಾಶಯಗಳಿಂದ ನೀರಾವರಿಗಾಗಿ ಇನ್ನೂ ನೀರು ಬಿಡುಗಡೆ ಮಾಡಲಾಗಿಲ್ಲ. ಮಳೆಯ ಕೊರತೆ ಮತ್ತು ಬರ ಪರಿಸ್ಥಿತಿಗಳು ಕಂಡುಬರುತ್ತಿರುವುದರಿಂದ, ಕುಡಿಯುವ ನೀರನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು” ಹೇಳಿದರು.

“ಸಾಮಾನ್ಯವಾಗಿ, ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಜೂನ್ ಮತ್ತು ಜುಲೈ ವೇಳೆಗೆ ಭತ್ತದ ಬಿತ್ತನೆ ಪೂರ್ಣಗೊಳ್ಳುತ್ತಿತ್ತು. ಆದರೆ ಈ ವರ್ಷ ಆ ಕಾರ್ಯ ಚಟುವಟಿಕೆಗಳು ನಡೆದಿಲ್ಲ. ರಾಗಿಯಂತಹ ಬೆಳೆಗಳಿಗಿಂತ ಭತ್ತಕ್ಕೆ ಗಮನಾರ್ಹವಾಗಿ ಹೆಚ್ಚಿನ ನೀರು ಬೇಕಾಗುತ್ತದೆ. ಮೂರು ತಿಂಗಳ ಬೆಳೆ ಚಕ್ರದಲ್ಲಿ ಭತ್ತದ ಬೆಳೆಗೆ ಸುಮಾರು 1200 ರಿಂದ 1500 ಮಿ.ಮೀ. ನೀರು ಬೇಕಾಗುತ್ತದೆ. ಆದರೆ ರಾಗಿಗೆ ಸುಮಾರು 300 ಮಿ.ಮೀ. ನೀರು ಬೇಕಾಗುತ್ತದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ತುಂಗಭದ್ರಾ ಕಾಲುವೆಗಳಿಗೆ 90 ದಿನ ನೀರು ಹರಿಸಲು ನಿರ್ಧಾರ: ರೈತರ ಮೊಗದಲ್ಲಿ ಮಂದಹಾಸ

ಕೃಷಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, “ರಾಜ್ಯವು ತೀವ್ರ ಬರಗಾಲವನ್ನು ನಿರೀಕ್ಷಿಸುತ್ತಿದ್ದು, ಇದು ಆಹಾರ ಧಾನ್ಯ ಉತ್ಪಾದನೆಯ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆಯಿದೆ. ಆಗಸ್ಟ್ ಅಂತ್ಯದ ವೇಳೆಗೆ ನಮಗೆ ಸ್ಪಷ್ಟ ಚಿತ್ರಣ ಸಿಗುತ್ತದೆ. ಉತ್ಪಾದನಾ ನಷ್ಟವು ವಾರ್ಷಿಕ ಗುರಿಯಾದ 150 ಲಕ್ಷ ಟನ್‌ನ ಶೇ.60ರಷ್ಟು ದಾಟಬಹುದೆಂದು ನಾವು ನಿರೀಕ್ಷಿಸುತ್ತೇವೆ” ಎಂದು ಹೇಳಿದರು.

ಪ್ರಸ್ತುತ ಕೃಷಿ ಸಚಿವರು ಇಲ್ಲದಿರುವುದರಿಂದ, ಕೃಷಿ ಸಚಿವರ ಅನುಪಸ್ಥಿತಿಯಲ್ಲಿ, ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪ್ರಮಾಣವನ್ನು ನಿರ್ಣಯಿಸುವಂತೆ ಡಿ ಕೆ ಶಿವಕುಮಾರ್ ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...