ಕೆಲವೆಡೆ ಮುಂಗಾರು ಚುರುಕು: ಕೆಆರ್‌ಎಸ್‌, ಹೇಮಾವತಿ, ಆಲಮಟ್ಟಿಗೆ ಹೆಚ್ಚಿದ ಒಳಹರಿವು

Date:

ಪಶ್ಚಿಮ ಘಟ್ಟಗಳು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.

- Advertisement -

ಹಾಸನದಲ್ಲಿ ಮಳೆ ಮುಂದುವರೆದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯುಸೆಕ್ ಒಳಹರಿವಿದ್ದು, 300 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕಾಗಿರುವುದರಿಂದ ಮಂಡ್ಯದ ಕೃಷ್ಣರಾಜಸಾಗರ ಡ್ಯಾಮ್‌ ನೀರಿನ ಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬೆಳಿಗ್ಗೆ 5,734 ಕ್ಯೂಸೆಕ್ ಇದ್ದ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ.

ಕೆಆರ್‌ಎಸ್‌ ಅಣೆಕಟ್ಟೆಗೆ ಮಂಗಳವಾರದಿಂದ 5,734 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ಕಳೆದ ಎರಡು ದಿನಗಳಿಂದ ನೀರಿನ ಪ್ರಮಾಣ ತುಸು ಹೆಚ್ಚಾಗಿದೆ. ಜುಲೈ 5ರಂದು ಒಳಹರಿವಿನ ಪ್ರಮಾಣ 1,449 ಕ್ಯುಸೆಕ್‌ ಇದ್ದು, ನೀರಿನ ಮಟ್ಟ 80.90 ಅಡಿ(ಗರಿಷ್ಠ 124.80) ಗಳಷ್ಟಿತ್ತು. 124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 49.452 ಟಿಎಂಸಿ ಆಗಿದ್ದು, ಸದ್ಯ 12.485 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ನಾಲೆ ಮತ್ತು ಕುಡಿಯುವ ಉದ್ದೇಶಕ್ಕೆ 777 ಕ್ಯುಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿದ್ದೀರಾ? ಕೃಷ್ಣಾ ಕಣಿವೆಯಲ್ಲಿ ಭಾರೀ ಮಳೆ; ಆಲಮಟ್ಟಿ ಒಳಹರಿವು ಹೆಚ್ಚಳ ಸಾಧ್ಯತೆ

ಕೊಡಗು ಜಿಲ್ಲೆಯ ಹಲವೆಡೆ ಮಳೆ ಬಿರುಸಾಗಿದ್ದು, ಸುಂಟಿಕೊಪ್ಪ, ವಿರಾಜಪೇಟೆ, ಸಿದ್ದಾಪುರ, ಮಡಿಕೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಹಾರಂಗಿ ಜಲಾಶಯದ ಒಳ ಹರಿವು ಈ ವರ್ಷ ಇದೇ ಮೊದಲ ಬಾರಿಗೆ ಸಾವಿರ ಕ್ಯುಸೆಕ್ ದಾಟಿದೆ. ಸದ್ಯ 1,113 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ.

ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶದ ಮಳೆಯಿಂದಾಗಿ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯಕ್ಕೂ ಒಳಹರಿವು ದಾಖಲಾಗುತ್ತಿದೆ.

ಮುಂಗಾರು ಮಳೆ ಅಭಾವದಿಂದ ರಾಜ್ಯದ ಬಹುತೇಕ ಜಲಾಶಯಗಳಿಗೆ ಇನ್ನೂ ಸಮರ್ಪಕ ಒಳಹರಿವು ಆರಂಭವಾಗದ ಹಿನ್ನೆಲೆಯಲ್ಲಿ, ಆಲಮಟ್ಟಿ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಜನ-ಜಾನುವಾರುಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಬೇಕು ಎಂದು ಸರಕಾರಸೂಚನೆ ನೀಡಿದೆ ಎಂದು ಆಲಮಟ್ಟಿ ಅಣೆಕಟ್ಟು ವೃತ್ತದ ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...