ಆಗಸ್ಟ್ 6ರಿಂದ ಮುಂಗಾರು ಅಧಿವೇಶನ: ಸಿಎಂ ಡಿ ಕೆ ಶಿವಕುಮಾರ್

Date:

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 6ರಿಂದ ಆರಂಭವಾಗಲಿದೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಘೋಷಣೆ ಮಾಡಿದ್ದಾರೆ.

- Advertisement -

ಸಚಿವ ಸಂಪುಟ ಸಭೆ ಯಾವಾಗ, ದೆಹಲಿಗೆ ಹೋಗುವುದು ಯಾವಾಗ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನೂ ಓದಿ: ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ: ಚಲುವರಾಯಸ್ವಾಮಿ

ಈ ಸಂದರ್ಭದಲ್ಲೇ ಕಾವೇರಿ ವಿಚಾರವಾಗಿ ಮಾತನಾಡಿದ್ದಾರೆ. “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ” ಎಂದು ಸಿಎಂ ಡಿಕೆಶಿ ತಿಳಿಸಿದರು.

ಮಂಡ್ಯ ಶಾಸಕರು ಕಾವೇರಿ ನೀರು ಬಿಡುವಂತೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ಮಂಡ್ಯದವರು, ಶ್ರೀರಂಗಪಟ್ಟಣದವರು, ಜಿಲ್ಲಾ ಸಚಿವರು ಬಂದು ಭೇಟಿ ಮಾಡಿದ್ದರು. ಸಭೆ ಬಳಿಕ ತೀರ್ಮಾನ ತಿಳಿಸುತ್ತೇವೆ” ಎಂದು ಹೇಳಿದರು.

ಕೆಪಿಎಸ್‌ಸಿ ಅಧ್ಯಕ್ಷರ ಅಮಾನತ್ತಿನ ಬಗ್ಗೆ ಪ್ರತಿಕ್ರಿಯಿಸಿ, “ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಅವರ ನಂತರ ಯಾರು ಹಿರಿಯರು ಇದ್ದಾರೋ ಅವರಿಗೆ ಜವಾಬ್ದಾರಿ ನೀಡುವಂತೆ ನಿರ್ದೇಶನ ನೀಡಿದ್ದೇನೆ” ಎಂದರು.

ಇನ್ನು “ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿ‌ನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ” ಎಂದರು.

“ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

“ಮಾಜಿ ಸಂಸದರಾದ ಹೆಚ್ ಹನುಮಂತಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿದ್ದರು. ರೈಲ್ವೇ ಆಯೋಗಕ್ಕೆ ಅಧ್ಯಕ್ಷರಾಗಿದ್ದರು. 45 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದರು. ನಮ್ಮ ಪಕ್ಷದ ಉಪಾಧ್ಯಕ್ಷರಾಗಿ, ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ನಾನು, ಕೆಪಿಸಿಸಿ ಅದ್ಯಕ್ಷರಾದ ಬಿ ಕೆ ಹರಿಪ್ರಸಾದ್, ಡಿಸಿಎಂ ಪರಮೇಶ್ವರ್, ಸಚಿವರಾದ ಮುನಿಯಪ್ಪ ಅವರು ಅವರಿಗೆ ಅಂತಿಮ ನಮನ ಸಲ್ಲಿಸಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯ ಹಾಗೂ ರಾಷ್ಟ್ರದ ಸಮಸ್ಯೆಗಳಿಗೆ ಮಾರ್ಗದರ್ಶನ ಕೊಟ್ಟ ಹಿರಿಯ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...