ಜು.12ರ ಬಳಿಕ ಆರಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ: ಹವಾಮಾನ ಇಲಾಖೆ

Date:

ಜುಲೈ 12ರ ನಂತರದ ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನ ಭಾಗದ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಜುಲೈ 12ರ ಬಳಿಕ ಕರಾವಳಿ ಕರ್ನಾಟಕದ ಮೂರೂ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಲಘುವಾದ ಅಥವಾ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿಯೂ ಜುಲೈ 13 ರಿಂದ 15ರ ಅವಧಿಯಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಮಳೆ ಇನ್ನಷ್ಟು ಕಡಿಮೆ: ಮುಂಗಾರು ಮುನ್ಸೂಚನೆ ಪರಿಷ್ಕರಿಸಿದ ಹವಾಮಾನ ಇಲಾಖೆ

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜುಲೈ 12ರಂದು ಮಳೆಯಾಗುವ ಸಾಧ್ಯತೆಯಿದೆ. ಜುಲೈ 13ರಿಂದ 15ರವರೆಗೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ (ಮಳೆ ಕೊರತೆ) ಇರುವ ಸಾಧ್ಯತೆ ಹೆಚ್ಚಾಗಿದೆ.

ಆದಾಗ್ಯೂ, ಜುಲೈ 16 ಮತ್ತು 17 ರ ಸುಮಾರಿಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವಿಸ್ತರಿತ ಮುನ್ಸೂಚನೆ ತಿಳಿಸಿದೆ.

ಸದ್ಯಕ್ಕೆ ಕರಾವಳಿಯ 3 ಜಿಲ್ಲೆಗಳು ಮತ್ತು ಮಲೆನಾಡಿನ 3 ಜಿಲ್ಲೆಗಳು ಸೇರಿದಂತೆ ರಾಜ್ಯದ ಪ್ರಮುಖ 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜುಲೈ 12ರ ನಂತರವೂ ನಿರಂತರವಾಗಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ದೃಢಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...