ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯ: ಗೃಹ ಸಚಿವ ಡಾ. ಜಿ ಪರಮೇಶ್ವರ್

Date:

ಹೊರ ರಾಜ್ಯಗಳಿಂದ ಬಂದವರಿಂದಲೇ ಕರ್ನಾಟಕದಲ್ಲಿ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ. ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

- Advertisement -

ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ರಿತೇಶ್‌ ಕುಮಾರ್ ಎಂಬಾತ ಬಾಲಕಿಯನ್ನು ಹತ್ಯೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ವಿಚಾರವಾಗಿ ಸೋಮವಾರ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣ ದಾಖಲಾಗಿದ್ದು ನೋಡುತ್ತಿದ್ದೇವೆ. ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸುತ್ತೇವೆ” ಎಂದು ಪರಮೇಶ್ವರ್ ತಿಳಿಸಿದರು.

ಪೊಲೀಸರ ಗುಂಡೇಟಿಗೆ ಬಲಿ

ಐದು ವರ್ಷದ ಬಾಲಕಿಯ ಜೀವ ತೆಗೆದಿದ್ದ ಬಿಹಾರ ಮೂಲದ ಯುವಕ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಬಿಹಾರ ಮೂಲದ ಆರೋಪಿ ರಿತೇಶ್‌ ಕುಮಾರ್‌ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದನು. ಆಗ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್​ ಮಾಡಿದ್ದರು. ಮಹಿಳಾ ಪಿಎಸ್‌ಐ ಗುಂಡೇಟು ನೀಡಿದ್ದರು. ಗುಂಡು ತಾಗಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿಯನ್ನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದಿದ್ದರಿಂದ ಜೀವ ಹೋಗಿದೆ.

ವಿಚಾರಣೆ ಮಾಡುವಾಗ ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಈ ವೇಳೆ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಮಿಷನರ್‌ ಶಶಿಕುಮಾರ್‌ ಅವರು ಕಿಮ್ಸ್​ ಆಸ್ಪತ್ರೆಗೆ ಹೋಗಿ ಗಾಯಗೊಂಡಿರುವ ಮಹಿಳಾ ಪಿಎಸ್‌ಐ ಅನ್ನಪೂರ್ಣ ಹಾಗೂ ಸಿಬ್ಬಂದಿ ಆರೋಗ್ಯ ಹೇಗಿದೆ ಎಂದು ನೋಡಿಕೊಂಡು ಬಂದಿದ್ದಾರೆ.

ಆರೋಪಿ ಹುಬ್ಬಳ್ಳಿಯ ತಾರಿಹಾಳ ಬಳಿ ವಾಸವಿದ್ದನು ಎನ್ನುವ ಮಾಹಿತಿ ಆಧರಿಸಿ ಬಂಧಿಸಲೆಂದು ಪೊಲೀಸರು ಹೋಗಿದ್ದರು. ಆಗ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದನು. ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು. ಆದರೆ ಆರೋಪಿ ಓಡಿ ಹೋಗಲು ಪ್ರಯತ್ನಿಸಿದಾಗ ಫೈರಿಂಗ್ ಮಾಡಲಾಗಿದ್ದು, ಆರೋಪಿ ಬೆನ್ನಿಗೆ ಗುಂಡು ಹೊಕ್ಕಿದೆ. ಆದ್ರೆ ಆಸ್ಪತ್ರೆಯಲ್ಲಿ ​ಚಿಕಿತ್ಸೆ ಫಲಕಾರಿಯಾಗದೆ ಜೀವ ಹೋಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...