ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

Date:

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಶವಗಳ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ಬಗ್ಗೆ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ನ್ಯಾಯಾಲಯ ಮೊರೆ ಹೋಗಿದ್ದಾರೆ.

- Advertisement -

‘ಧರ್ಮಸ್ಥಳಕ್ಕೆ ಕಳಂಕ ತರುವ ಪಿತೂರಿಯ ಹಿಂದಿನ ರೂವಾರಿ ಶಶಿಕಾಂತ ಸೆಂಥಿಲ್’ ಎಂದು ಆರೋಪಿಸಿದ್ದ ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ ಸೆಂಥಿಲ್ ಅವರು ಬೆಂಗಳೂರಿನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಬೆಳಿಗ್ಗೆ ಖುದ್ದು ಹಾಜರಾಗಿದ್ದರು. ಶಶಿಕಾಂತ ಸೆಂಥಿಲ್ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಸಂಜಯ ಯಾದವ್, ದೂರನ್ನು ದಾಖಲು ಮಾಡಿಕೊಳ್ಳುವಂತೆ ಮ್ಯಾಜಿಸ್ಟ್ರೇಟ್ ಕೆ.ಎನ್.ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಇದೇ ಸೆ.11ಕ್ಕೆ ದೂರಿನ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೆಂಥಿಲ್, “ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಿಂದಿನ ಚಿತ್ರಕಥೆಗಾರ ಮತ್ತು ಮಾಸ್ಟರ್ ಮೈಂಡ್ ಎಂದು ತಮ್ಮನ್ನು ತಪ್ಪಾಗಿ ಬಿಂಬಿಸಲಾಗಿದೆ. ಆರಂಭದಲ್ಲಿ, ನಾನು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದೆ. ಜನಾರ್ದನ ರೆಡ್ಡಿಯವರು ಆರೋಪ ಮಾಡಿದ ಸಂದರ್ಭದಲ್ಲಿ ನಾನು ಸಂಸತ್ತು ಅಧಿವೇಶನದಲ್ಲಿ ಭಾಗಿಯಾಗಿದ್ದೆ. ಅವರ ಆರೋಪಗಳು ಬಾಲಿಶವಾಗಿವೆ” ಎಂದರು.

“ಈ ಪ್ರಕರಣದಲ್ಲಿ ನನ್ನ ಹೆಸರನ್ನು ನಿತ್ಯವೂ ಎಳೆದು ತರಲಾಗುತ್ತಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ನಾನು ಬಲಪಂಥೀಯ ಚಟುವಟಿಕೆಗಳ ಬಗ್ಗೆ ಹೊಂದಿರುವ ನಿಲುವಿನಿಂದಾಗಿಯೇ ಕೆಲವರು ಇಂತಹ ಗುಲ್ಲೆಬ್ಬಿಸುತ್ತಿದ್ದಾರೆ. ಕರ್ನಾಟಕದ ಜನತೆಗೆ ಟೋಪಿ ಹಾಕುತ್ತಿದ್ದಾರೆ. ಜನಾರ್ದನ ರೆಡ್ಡಿ ಗಣಿ ಲೂಟಿ ಹೊಡೆದ ವ್ಯಕ್ತಿ. ಆತ ನ್ಯಾಯಮೂರ್ತಿಗಳನ್ನೇ ಬಿಟ್ಟಿಲ್ಲ” ಎಂದು ಕಿಡಿಕಾರಿದರು.

“ನನ್ನನ್ನು ಕ್ರಿಶ್ಚಿಯನ್ ಎಂದು ಪ್ರಚಾರ ಮಾಡಲಾಗುತ್ತಿದೆ. ಅಸಲಿಗೆ ಸುಬ್ರಹ್ಮಣ್ಯನ ಮತ್ತೊಂದು ಹೆಸರೇ ಸೆಂಥಿಲ್ ಎಂಬುದು ಇವರಿಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾರೇ ಆಗಲಿ ಯಾವುದೇ ರೀತಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಅಂಥವರ ವಿರುದ್ಧ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ಇದೇ ವೇಳೆ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...