ಮುಡಾದಲ್ಲಿ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ. ನಾಗರಭಾವಿ ನಿವಾಸಿ ಹೈಕೋರ್ಟ್ ವಕೀಲ ಎಸ್ ಪಿ ಪ್ರದೀಪ್ ಕುಮಾರ್ ಈ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.
“ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದರೆ, ನಮ್ಮ ವಾದವನ್ನು ಆಲಿಸದೆ ಯಾವುದೇ ಆದೇಶವನ್ನು ನೀಡಬಾರದು” ಎಂದು ಕೇವಿಯಟ್ ಅರ್ಜಿದಾರರು ಮನವಿ ಮಾಡಿದ್ದಾರೆ.
ಏನಿದು ಕೇವಿಯಟ್ ಅರ್ಜಿ?
ನಮ್ಮ ವಾದವನ್ನು ಆಲಿಸದೆ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡಬಾರದು ಎಂದು ಕೋರ್ಟ್‌ಗೆ ಸಲ್ಲಿಸುವ ಮನವುಯನ್ನು ಕೇವಿಯಟ್ ಅರ್ಜಿ ಎಂದು ಕರೆಯಲಾಗುತ್ತದೆ.
ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಯಾವುದೇ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯ ವಾದದ ಆಧಾರದಲ್ಲಿ ಆದೇಶ ನೀಡಬಾರದು. ಎರಡೂ ಕಡೆಗಳ ವಾದ ವಿವಾದವನ್ನು ಕೇಳಿ ಆದೇಶ ನೀಡಬೇಕು ಎಂಬ ಉದ್ದೇಶದಿಂದ ಈ ಅರ್ಜಿಯನ್ನು ಸಲ್ಲಿಸಲಾಗುತ್ತದೆ.