ಮುಡಾ ಪ್ರಕರಣ | ನವೆಂಬರ್ 23ರಂದು ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ

Date:

ಮುಡಾ ಪ್ರಕರಣದಲ್ಲಿ ತನ್ನ ವಿರುದ್ದ ರಾಜ್ಯಪಾಲರು ತನಿಖೆಗೆ ಆದೇಶಿಸಿರುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇದೇ ನವೆಂಬರ್ 23ಕ್ಕೆ ವಿಚಾರಣೆ ನಡೆಸಲಿದೆ.

- Advertisement -

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಜಾಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸಚಿವ ಜಮೀರ್‌ ಅಹಮದ್‌ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ

ಈ ತೀರ್ಪನ್ನು ಪ್ರಶ್ನಿಸಿ ಸಿಎಂ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಸಲ್ಲಿಸಿದ್ದು, ಈ ರಿಟ್ ಮೇನ್ಮನವಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ ಬೆಳಿಗ್ಗೆ ಮನವಿ ಸಲ್ಲಿಸಿದರು.

ಈ ಮೇಲ್ಮನವಿಯನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 23ಕ್ಕೆ ನಿಗದಿಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...