ಮುಡಾ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ನಿರ್ಧಾರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದೀಗ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

- Advertisement -

ಸ್ನೇಹಮಯಿ ಕೃಷ್ಣ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, “ಈ ಪ್ರಕರಣವನ್ನು ಮುಂದಿನ ತನಿಖೆ ಅಥವಾ ಮರು ತನಿಖೆಗಾಗಿ ಸಿಬಿಐಗೆ ವಹಿಸಲು ಸೂಚಿಸುವ ಯಾವುದೇ ರೀತಿಯ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ತೀರ್ಪು ಪ್ರಕಟವಾದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, “ಲೋಕಾಯುಕ್ತ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ತನಿಖೆಗೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಹೋಗುತ್ತೇವೆ. ಹೈಕೋರ್ಟ್ ಆದೇಶದ ಪ್ರತಿ ಇನ್ನು ದೊರೆತಿಲ್ಲ. ಪ್ರತಿ ದೊರೆತ ಬಳಿಕ, ಅದನ್ನು ಪರಿಶೀಲಿಸಿ, ನಂತರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು...