ಮುಡಾ | ಮನಿಲಾಂಡ್ರಿಂಗ್ ಬಗ್ಗೆ ಸಾಕ್ಷಿಯಿಲ್ಲ, ಇ.ಡಿ ವರದಿ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

Date:

Advertisements

ಜಾರಿ ನಿರ್ದೇಶನಾಲಯದ ವರದಿ ರಾಜಕೀಯಪ್ರೇರಿತ. ಅಕ್ರಮ ಹಣ ವರ್ಗಾವಣೆೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇ.ಡಿಯವರ ಕ್ರಮ ಕಾನೂನು ಬಾಹಿರ ಮತ್ತು ಮನಿಲಾಂಡ್ರಿಂಗ್ ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇ.ಡಿಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಜ.31) ಮೈಸೂರು ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ. ಕರ್ನಾಟಕ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಶ್ರೀಮತಿಯವರಿಗೆ ಇಡಿಯವರ ನೋಟಿಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ” ಎಂದರು.

ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು” ಎಂದು ಸಿದ್ದರಾಮಯ್ಯ ವಿನಂತಿಸಿದರು.

Advertisements

ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ

ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, “ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ” ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ಕೇಂದ್ರದ ಬಜೆಟ್ ಅಧಿವೇಶನದಿಂದ ರಾಜ್ಯದ ನಿರೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರದವರು ರಾಜ್ಯಕ್ಕೆ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನವನ್ನು ನೀಡಿಲ್ಲ. 2023-24 ರ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಇಳಿಸಿದ್ದಾರೆ.ಡಿದ್ದಾರೆ. ಈ 5300 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನಬಾರ್ಡ್ ನ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿದ್ದು, ಕಳೆದ ವರ್ಷ ನಬಾರ್ಡ್ ನ ಅಡಿ ನೀಡಲಾಗಿದ್ದ 5800 ಕೋಟಿ ರೂ. ,ಈ ವರ್ಷ 2345 ಕೋಟಿ ರೂ. ಇಳಿಸಿದ್ದಾರೆ. ಕರ್ನಾಟಕ 4ಲಕ್ಷ ಕೋಟಿಯಷ್ಟು ಕೇಂದ್ರಕ್ಕೆ ತೆರಿಗೆ ನೀಡಿದರೆ, ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಮರಳಿ ಬರುತ್ತಿದ್ದುದ್ದು, ತೆರಿಗೆ ಹಂಚಿಕೆಯ ಪಾಲಿನಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ” ಎಂದು ಹೇಳಿದರು.

ಬಾಲಿಶ ಹೇಳಿಕೆ

ಕುಂಭಮೇಳದ ಬಗ್ಗೆ ಟೀಕೆ ಮಾಡುವವರು ಅಯೋಗ್ಯರು ಎಂದು ಪ್ರತಿಪಕ್ಷ ನಾಯಕರಾದ ವಿಜಯೇಂದ್ರರವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ತಪ್ಪು ನಡೆದಾಗ ಟೀಕೆ ಮಾಡುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇರುತ್ತದೆ. ವಿಜಯೇಂದ್ರರವರ ಹೇಳಿಕೆ ಬಾಲಿಶವಾಗಿದೆ” ಎಂದರು.

ವರಿಷ್ಠರ ತೀರ್ಮಾನವೇ ಅಂತಿಮ

ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರು ಸಭೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ. ಸತ್ಯಕ್ಕೆ ವಿರುದ್ಧವಾದ ಊಹೆಗಳು ತಪ್ಪು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X