ಮುಡಾ ಹಗರಣ | ಸಿಎಂಗೆ ದೊಡ್ಡ ಹಿನ್ನಡೆ: ಇ.ಡಿ ನೋಟಿಸ್‌ ಸಮರ್ಥಿಸಿಕೊಂಡ ವಿಜಯೇಂದ್ರ, ಸಿ ಟಿ ರವಿ

Date:

Advertisements

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಬೇಗನೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿಹಾಕುವ ಪ್ರಯತ್ನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ. ಲೋಕಾಯುಕ್ತ ಸಂಸ್ಥೆಯ ತನಿಖೆಯನ್ನು ಮಾಧ್ಯಮಗಳೇ ತೋರಿಸಿವೆ. ರಾತ್ರಿ 8- 9 ಗಂಟೆಗೆ ಸಿದ್ದರಾಮಯ್ಯನವರ ಬಾಮೈದ ನೋಟಿಸ್ ಕೊಡದೆ ಇದ್ದರೂ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು” ಎಂದು ಆಕ್ಷೇಪಿಸಿದರು.

“ಸಿಎಂ ಕುಟುಂಬಕ್ಕೆ ಎಷ್ಟು ಮುಕ್ತ ವ್ಯವಸ್ಥೆ ಇತ್ತೆಂದು ಅವತ್ತು ಕೂಡ ಬಹಿರಂಗವಾಗಿದೆ. ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಪಾದಯಾತ್ರೆ ಮಾಡಿದ್ದವು. ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳ ಧರ್ಮಪತ್ನಿಯವರು 14 ನಿವೇಶನ ಹಿಂತಿರುಗಿಸುತ್ತೇವೆ ಎಂದು ರಾತ್ರೋರಾತ್ರಿ ಮೂಡಕ್ಕೆ ಪತ್ರ ಬರೆದಿದ್ದರು. ಆ ಪತ್ರದ ಮೂಲಕ ಮೂಲಕ ಹಗರಣದಿಂದ ಹೊರಕ್ಕೆ ಬಂದ ಭ್ರಮೆಯಲ್ಲಿ ಮುಖ್ಯಮಂತ್ರಿಗಳೂ ಇದ್ದರು. ಇವತ್ತಿನ ಇ.ಡಿ. ನೋಟಿಸ್, ಇದರಿಂದ ಆಘಾತ ಆಗಿರುವುದರಲ್ಲಿ ಎರಡು ಮಾತಿಲ್ಲ” ಎಂದರು.

Advertisements

“ಇ.ಡಿಗೆ ಅವರದೇ ಆದ ನಿಯಮಗಳಿರುತ್ತವೆ. ಅದರ ಪ್ರಕಾರ ಅವರು ಮುಂದುವರೆಯುತ್ತಾರೆ. ಇ.ಡಿ. ನೋಟಿಸ್ ರಾಜಕೀಯಪ್ರೇರಿತ ಎಂಬುದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾವಿರಾರು ಕೋಟಿ ಬಡವರ ಪಾಲಾಗಬೇಕಾದ ನಿವೇಶನಗಳ ಅಕ್ರಮ ಹಂಚಿಕೆ ನಡೆದಿತ್ತು. ಈ ದೊಡ್ಡ ಹಗರಣದ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿ ಟಿ ರವಿ ಹೇಳಿದ್ದೇನು?

ಮುಖ್ಯಮಂತ್ರಿಯವರ ಪತ್ನಿ ಆಗದೇ ಇದ್ದಿದ್ದರೆ 30 ವರ್ಷಗಳಷ್ಟು ಹಿಂದೆ ಅಭಿವೃದ್ಧಿ ಹೊಂದಿದ ವಿಜಯನಗರ ಬಡಾವಣೆಯಲ್ಲಿ ನಿವೇಶನ ಸಿಗುತ್ತಿತ್ತಾ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

“ಮುಡಾದಲ್ಲಿ ಅಕ್ರಮ ನಡೆದಿರುವುದು ನಿಜವೆಂದು ಕಾಂಗ್ರೆಸ್ ಪಕ್ಷ ಸೇರಿ ಬಹುತೇಕ ಎಲ್ಲ ಪಕ್ಷಗಳೂ ಒಪ್ಪಿಕೊಂಡಿವೆ. ಯಾರು ಮಾಡಿದ್ದಾರೆ, ಯಾರ ಕಾಲಘಟ್ಟದಲ್ಲಿ ಆಗಿದೆ? ಯಾರು ಲಾಭ ಪಡೆದಿದ್ದಾರೆ ಎಂಬುದು ತನಿಖೆಯಿಂದ ಸಾಬೀತಾಗಬೇಕಿದೆ. ಪ್ರಾಸ್ಪೆಕ್ಟಿವ್ ಮತ್ತು ರೆಟ್ರೋಸ್ಪೆಕ್ಟಿವ್ ನಡುವೆ ಹಿಂದೆ ವಶಪಡಿಸಿಕೊಂಡ ಜಮೀನಿಗೂ ಶೇ 50 ನಿವೇಶನ ಕೊಡುವಂತೆ ಎಲ್ಲೂ ಆದೇಶ ಆಗಿರಲಿಲ್ಲ. ಆದರೆ, ನಿವೇಶನ ಕೊಟ್ಟಿದ್ದು ಅಕ್ರಮವಲ್ಲವೇ? ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಹೇಗಿಲ್ಲವೋ ಮುಡಾದ ಹಗರಣಕ್ಕೂ ಕನ್ನಡಿ ಹಿಡಿಯಬೇಕಾದ ಅವಶ್ಯಕತೆ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X