‘ಮ್ಯೂಲ್ ಅಕೌಂಟ್’ ಸೈಬರ್ ದಂಧೆ: ರಾಜ್ಯಾದ್ಯಂತ 13 ಮಂದಿ ಬಂಧನ

Date:

‘ಮ್ಯೂಲ್ ಅಕೌಂಟ್’ಗಳನ್ನು ಬಳಸಿಕೊಂಡು ಸೈಬರ್ ವಂಚನೆ ಎಸಗಿದ್ದ ಪ್ರಕರಣವನ್ನು ‘ಸಿಐಡಿ’ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಅಧಿಕಾರಿಗಳು ದಾಳಿ ನಡೆಸಿದ್ದು, 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಮನಿ ಲಾಂಡರಿಂಗ್, ಆನ್‌ಲೈನ್ ಸ್ಕ್ಯಾಮ್ ಹಾಗೂ ಹವಾಲಾ ವಹಿವಾಟುಗಳನ್ನು ನಡೆಸಲು ಅಮಾಯಕ ಜನಸಾಮಾನ್ಯರ ಹೆಸರಿನಲ್ಲಿ ‘ಮ್ಯೂಲ್‌ ಅಕೌಂಟ್‌’ ಸೃಷ್ಟಿಸಿ, ಅವುಗಳನ್ನು ವಂಚನೆ ಮತ್ತು ಇತರ ಸೈಬರ್ ಅಪರಾಧಗಳನ್ನು ಎಸಗಲಾಗುತ್ತದೆ. ಇಂತಹ ಅಪರಾಧಗಳನ್ನು ಎಸಗುತ್ತಿದ್ದ ಜಾಲವನ್ನು ಸಿಐಡಿ ಪೊಲೀಸರು ಭೇದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಂಗಳೂರು, ಚಿತ್ರದುರ್ಗ, ಗದಗ, ಕೊಪ್ಪಳ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ನೂರಾರು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದ ಸಿಐಡಿ ಅಧಿಕಾರಿಗಳು, ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳನ್ನ ಪತ್ತೆ ಹಚ್ಚಿದ್ದಾರೆ. ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದ್ದಾರೆ.

ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ, ಸೈಬರ್ ಅಪರಾಧಗಳಿಂದ ಬಂದ ಹಣವನ್ನು ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು. ಆದರೆ, ತಮ್ಮ ಖಾತೆಗಳ ವಿವರ ನೀಡುತ್ತಿದ್ದ ಅಮಾಯಕರಿಗೆ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿದೆ.

ಸೈಬರ್ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಅಮಾಯಕರ ಬ್ಯಾಂಕ್ ಖಾತೆಗಳಿಗೆ ಹಣ ನೀಡಿ, ಅವರಿಗೆ ತಿಳಿಯದೆ ಸೈಬರ್ ವಂಚಕರಿಗೆ ನೀಡುತ್ತಿರುವ ಬಗ್ಗೆ ಮುಂದಿನ ದಿನಗಳಲ್ಲಿ ಬಿಗಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...