ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Date:

ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ. ಈ ಹಿಂದೆ ಹೈಕೋರ್ಟ್ ಸಹ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿತ್ತು. ಅದರ ಬೆನ್ನಲ್ಲೇ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಬಸವರಾಜ್ ಪರ ಹಿರಿಯ ವಕೀಲ ಮುಕುಲ್ ರೊಹಟಗಿ ವಾದ ಮಂಡಿಸಿದ್ದು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಇದೊಂದು ಸಿವಿಲ್ ಮ್ಯಾಟರ್. ಅನಗತ್ಯವಾಗಿ ಈ ಪ್ರಕರಣದಲ್ಲಿ ಎಳೆದು ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಭೂ ಮಾಫಿಯ ರಾಜಕೀಯ ಶಕ್ತಿ ಮೇಲೆ ನಡೆಯುತ್ತಿದೆ ಅಲ್ಲವೇ ಎಂದು ಪ್ರಶ್ನಿಸಿದೆ. ನಾನು ವಿರೋಧ ಪಕ್ಷದ ಶಾಸಕ, ನಮ್ಮ ಪಕ್ಷ ಅಧಿಕಾರದಲ್ಲಿಲ್ಲ ಎಂದು ಬಸವರಾಜ್ ಪರ ವಕೀಲರು ಉತ್ತರಿಸಿದ್ದಾರೆ. ಬಳಿಕ, ನಿಯಮಿತ ಜಾಮೀನು ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಶಾಸಕರ ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಿದೆ. ಆ ತಂಡಗಳು ಮಹಾರಾಷ್ಟ್ರಕ್ಕೆ ತೆರಳಿ, ಆರೋಪಿಗಾಗಿ ವಿವಿಧೆಡೆ ಹುಡುಕಾಟ ನಡೆಸುತ್ತಿವೆ. ‘ಬೈರತಿ ಬಸವರಾಜ ಅವರು ಮಹಾರಾಷ್ಟ್ರದ ಸ್ಟಾರ್‌ ಹೋಟೆಲ್‌ವೊಂದರಲ್ಲಿ ವಾಸ್ತವ್ಯ ಹೂಡಿರುವ ಮಾಹಿತಿ ಸಿಕ್ಕಿದೆ. ವಿಶೇಷ ತಂಡಗಳು ಅಲ್ಲಿಗೆ ತೆರಳಿವೆ.

ಅವರು ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ‘ಲುಕ್‍ಔಟ್ ನೋಟಿಸ್’ ಜಾರಿ ಮಾಡಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ. ಕಳೆದ ಡಿಸೆಂಬರ್‌ನಲ್ಲೂ ಬೈರತಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಲೂ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಇದಾದ ಬೆನ್ನಲ್ಲೇ ಶಾಸಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದರು. ಆ ಸಂದರ್ಭದಲ್ಲೂ ಶಾಸಕರು ತಲೆಮರೆಸಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಕಬ್ಬಿಗೆ ಬೆಂಬಲ ಬೆಲೆ: ಬೆಂಗಳೂರಿನಲ್ಲಿ ಕೇಂದ್ರ ತಜ್ಞರ ಸಮಿತಿಗೆ ಕಬ್ಬು ಬೆಳೆಗಾರರ ಅಹವಾಲು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ...

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು...