ಮುರುಘಾ ಮಠದ ಆಸ್ತಿ ವಿವಾದ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌

Date:

ಚಿತ್ರದುರ್ಗದ ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಕೋರಿ ಸಲ್ಲಿಕೆಯಾದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಈ ಕುರಿತು ತನ್ನ ನಿಲುವನ್ನು ತಿಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

- Advertisement -

ಈ ಹಿಂದೆ ಕರ್ನಾಟಕ ಹೈಕೋರ್ಟ್ ಮಠದ ಆಸ್ತಿಯನ್ನು ಮಠದ ಆಡಳಿತ ಮಂಡಳಿಯ ಸುಪರ್ದಿಗೆ ನೀಡುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೆಚ್. ಏಕಾಂತಯ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ನ್ಯಾ. ಪಂಕಜ್ ಮಿಥಲ್ ಅವರ ನೇತೃತ್ವದ ದ್ವಿ ಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿತು. ಮಠದ ಆಸ್ತಿಯನ್ನು ದುರುಪಯೋಗವಾಗದಂತೆ ತಡೆಯಲು ಅದನ್ನು ಸರ್ಕಾರದ ಸುಪರ್ದಿಗೆ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿಚಾರಣೆಯ ಸಂದರ್ಭದಲ್ಲಿ ಮಠದ ಭಕ್ತೆಯೊಬ್ಬರು ಮಧ್ಯಪ್ರವೇಶ ಅರ್ಜಿ ಸಲ್ಲಿಸಿ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ನೀಡಿದ್ದಾರೆ. “ಈಗಾಗಲೇ ಮಠದ ಆಸ್ತಿಯನ್ನು ಮಾರಾಟ ಮಾಡಲು ಸ್ವಾಮೀಜಿ ಯತ್ನಿಸುತ್ತಿದ್ದಾರೆ” ಎಂಬ ಗಂಭೀರ ಆರೋಪವನ್ನು ನ್ಯಾಯಪೀಠದ ಮುಂದಿಟ್ಟಿದ್ದಾರೆ. ಆಸ್ತಿ ಪರಭಾರೆಯಾಗುವ ಮೊದಲೇ ಮಧ್ಯಪ್ರವೇಶಿಸಿ ರಕ್ಷಣೆ ನೀಡಬೇಕು ಎಂದು ಕೋರಿದ ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಅವರನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರಿಸಿಕೊಳ್ಳಲು ಸಮ್ಮತಿ ಸೂಚಿಸಿದೆ.

ಇದನ್ನೂ ಓದಿ: ತ್ರಿಶೂರ್‌ ಪಟಾಕಿ ಅವಘಡ: ಮೃತರ ಕುಟುಂಬಗಳಿಗೆ 14 ಲಕ್ಷ ಪರಿಹಾರ

ರಾಜ್ಯ ಸರ್ಕಾರ ಸುಪ್ರೀಂ ನೋಟಿಸ್‌ಗೆ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...