ಕಾಂಗ್ರೆಸ್‌ ಪ್ರಣಾಳಿಕೆಯ ಭರವಸೆ ಈಡೇರಿಕೆಗೆ ಮುಸ್ಲಿಂ ಒಕ್ಕೂಟ ಪಟ್ಟು: ಸಚಿವರೊಂದಿಗೆ ಸಭೆ

Date:

2023ರ ವಿಧಾನಸಭಾ ಚುನಾವಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್‌ ನೀಡಿದ್ದ ಪ್ರಮುಖ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ (ಕೆಆರ್‌ಎಂಒ) ಆಗ್ರಹಿಸಿದೆ. ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಮತ್ತು ಆಹಾರ ಸಚಿವ ರಿಝ್ವಾನ್ ಅರ್ಶದ್ ಸೇರಿದಂತೆ ಮುಸ್ಲಿಂ ಶಾಸಕರು ಮತ್ತು ಸಚಿವರೊಂದಿಗೆ ಒಕ್ಕೂಟವು ಸಭೆ ನಡೆಸಿದೆ.

- Advertisement -

ಈ ಹಿಂದೆ ಒಕ್ಕೂಟವು ‘ಕಾಂಗ್ರೆಸ್‌ ಸರ್ಕಾರ ಹೇಳಿದ್ದೇನು? ಮಾಡಿದ್ದೇನು? ಮುಂದೇನು?’ ಎಂಬ ಶೀರ್ಷಿಕೆಯ ವರದಿ ಮತ್ತು ಬೇಡಿಕೆಗಳ ಪಟ್ಟಿಯನ್ನು ತಂದಿತ್ತು. ಅದರ ಪ್ರತಿಯನ್ನು ಸಚಿವರಿಗೆ ಒಕ್ಕೂಟದ ಮುಖಂಡರು ಗುರುವಾರದ ಸಭೆಯಲ್ಲಿ ಹಸ್ತಾಂತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಹಿಂದಿನ ಬಿಜೆಪಿ ಸರ್ಕಾರ ರದ್ದುಗೊಳಿಸಿದ್ದ 2ಬಿ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು, ಮತಾಂತರ ನಿಷೇಧ ಕಾಯ್ದೆ ಹಾಗೂ ಕರ್ನಾಟಕ ಜಾನುವಾರು ವಧೆ ತಡೆ ಮತ್ತು ಸಂರಕ್ಷಣಾ ಕಾಯ್ದೆ-2020ಅನ್ನು ರದ್ದುಪಡಿಸಬೇಕು ಅಥವಾ ಸೂಕ್ತ ತಿದ್ದುಪಡಿ ತರಬೇಕು” ಎಂದು ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ.

ಜೊತೆಗೆ, “ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವರ್ಷಕ್ಕೆ 10 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು, ವಕ್ಫ್‌ ಆಸ್ತಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಶಿಫಾರಸುಗಳನ್ನು ಜಾರಿಗೆ ತರಬೇಕು, ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳಿಗೆ ಕಡಿವಾಣ ಹಾಕಬೇಕು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಶಾಸನಸಭೆ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕು” ಎಂದು ಒಕ್ಕೂಟ ಬಲವಾಗಿ ಆಗ್ರಹಿಸಿದೆ

ಒಕ್ಕೂಟದ ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಯು.ಟಿ. ಖಾದರ್, “ನಾವು ಪರಸ್ಪರ ಜೊತೆಯಾಗಿ ಸಾಗಬೇಕಿದೆ. ಸಮುದಾಯದ ಶಾಸಕರು ಮತ್ತು ಸಚಿವರು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಸಮಾಜದಲ್ಲಿ ಸೌಹಾರ್ದತೆ ಸ್ಥಾಪಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ. 2ಬಿ ಮೀಸಲಾತಿ ಮರುಸ್ಥಾಪನೆ ಮತ್ತು ಜಾನುವಾರು ಕಾಯ್ದೆ ವಾಪಸ್ ಪಡೆಯಲು ನಾವು ಬದ್ಧರಾಗಿದ್ದೇವೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೊಂದಿಗೆ ಚರ್ಚಿಸಿ ವಿಶೇಷ ಸಭೆ ಕರೆಯಲಾಗುವುದು” ಎಂದು ಭರವಸೆ ನೀಡಿದ್ದಾರೆ.

771677969 4381826958795239 72711

ಇದೇ ವೇಳೆ ಮಾತನಾಡಿದ ಆಹಾರ ಸಚಿವ ರಿಝ್ವಾನ್ ಅರ್ಶದ್, “ಪ್ರಜಾಪ್ರಭುತ್ವದಲ್ಲಿ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಹಿಜಾಬ್‌ ಸಮಸ್ಯೆಯನ್ನು ಈಗಾಗಲೇ ಬಗೆಹರಿಸಲಾಗಿದೆ. ವಿಧಾನ ಪರಿಷತ್ತಿನಲ್ಲಿ ಬಹುಮತ ಇಲ್ಲದ ಕಾರಣ ಕೆಲವು ಕಾಯ್ದೆಗಳ ಹಿಂಪಡೆಯುವಿಕೆ ವಿಳಂಬವಾಗಿತ್ತು, ಈಗ ಬಹುಮತ ದೊರೆತಿದ್ದು ಶಾಸಕರ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ದ್ವೇಷ ಭಾಷಣ ತಡೆಯುವ ವಿಧೇಯಕವನ್ನು ಸರ್ಕಾರ ಅಂಗೀಕರಿಸಿದ್ದು, ಅದು ರಾಜ್ಯಪಾಲರ ಅಂಕಿತಕ್ಕೆ ಬಾಕಿ ಇದೆ. ಅಲ್ಲದೆ, ಶೀಘ್ರವೇ ಆರಂಭವಾಗಲಿರುವ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯಸಮ್ಮತ ಪಾಲು ದೊರೆಯುವಂತೆ ನೋಡಿಕೊಳ್ಳಲಾಗುವುದು” ಎಂದು ಆಶ್ವಾಸನೆ ನೀಡಿದ್ದಾರೆ.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಬಲ್ಕೀಸ್ ಬಾನು, ಕೆ.ಅಬ್ದುಲ್ ಜಬ್ಬಾರ್, ಕೆಆರ್‌ಎಂಒ ಸಂಚಾಲಕರಾದ ಮುಹಮ್ಮದ್ ಯಾಸೀನ್ ಮಲ್ಪೆ, ಸುಹೇಲ್ ಅಹ್ಮದ್ ಮರೂರು, ಯಹ್ಯಾ ದಾಮೂದಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

ಅಂದಹಾಗೆ, ಒಕ್ಕೂಟವು ಇತ್ತೀಚೆಗೆ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಸರ್ಕಾರದ ಸಾಧನೆಗಳ ಕುರಿತು ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಗಳು ಕಳೆದರೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಗಳು ಈಡೇರಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತವಾಗಿತ್ತು.

ಆ ವರದಿಯಲ್ಲಿ; 2ಬಿ ಮೀಸಲಾತಿ ಮರುಸ್ಥಾಪನೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವಿಕೆ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಹಿರಂಗಪಡಿಸಲಾಗಿತ್ತು.

ಮುಸ್ಲಿಂ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳದೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳನ್ನು ತಕ್ಷಣವೇ ಒದಗಿಸಬೇಕು ಎಂದು ಟೌನ್‌ಹಾಲ್‌ ಸಮಾವೇಶದಲ್ಲಿ ಮುಸ್ಲಿಂ ಮುಖಂಡರು ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...