ಕುರ್ಚಿ ಉಳಿಸಿಕೊಳ್ಳಲು ಮೈಸೂರು ಸಮಾವೇಶ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

Date:

Advertisements

ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ. ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ” ಎಂದು ಪ್ರಶ್ನಿಸಿದರು.

“ಆರ್‌ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು. ಸಿಐಡಿ ಹಾಗೂ ನ್ಯಾ.ಡಿಕುನ್ಹ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ್ರದ ಬಗ್ಗೆ ಹೇಳದೆ, ಪೊಲೀಸರ ಮೇಲೆ ಆರೋಪ ಮಾಡಲಾಗಿದೆ. ಪೊಲೀಸರಿಗೆ ಆದೇಶ ಕೊಟ್ಟ ಸರ್ಕಾರದ ತಪ್ಪಿನ ಬಗ್ಗೆ ಎಲ್ಲೂ ಹೇಳಿಲ್ಲ. ಇಂತಹ ಸಮಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಇದೇ ರೀತಿ ಡಿ.ಕೆ.ಶಿವಕುಮಾರ್‌ ಕನಕಪುರದಲ್ಲಿ ಸಮಾವೇಶ ನಡೆಸಿದರೆ ಆಗ ಯಾರ ಬಲ ಹೆಚ್ಚಿದೆ ಎಂದು ತೀರ್ಮಾನಿಸಬಹುದು. ಇಲ್ಲಿ ಪರಸ್ಪರ ಸ್ಪರ್ಧೆ ನಡೆಯುತ್ತಿದೆ” ಎಂದರು.

“ತನಿಖಾ ಆಯೋಗಗಳನ್ನು ನೇಮಕ ಮಾಡುವಾಗ ಪದೇ ಪದೆ ಇಬ್ಬರನ್ನೇ ನೇಮಕ ಮಾಡಲಾಗುತ್ತದೆ. ಇದರಿಂದಾಗಿ ಜನರಿಗೆ ಸರ್ಕಾರದ ಮೇಲೆ ನಂಬಿಕೆ ಹೋಗಿದೆ. ವಿರೋಧ ಪಕ್ಷದ ಶಾಸಕರಾದ ಬೈರತಿ ಬಸವರಾಜ್‌ ಅವರನ್ನು ಬಗ್ಗುಬಡಿಯಲು ಪೊಲೀಸರೇ ಎಫ್‌ಐಆರ್‌ನಲ್ಲಿ ಅವರ ಹೆಸರು ಬರೆದಿದ್ದಾರೆ. ದೂರು ಕೊಟ್ಟ ಮಹಿಳೆಯೇ ಮುಂದೆ ಬಂದು ಶಾಸಕರ ಹೆಸರನ್ನು ಹೇಳಿಲ್ಲ ಎಂದಿದ್ದಾರೆ. ಆದರೂ ಸರ್ಕಾರದ ದ್ವೇಷ ಸಾಧಿಸುತ್ತಿದೆ” ಎಂದು ಹೇಳಿದರು.

ಅಭಿವೃದ್ಧಿ ಕಾರ್ಯಗಳಿಲ್ಲ

“ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ” ಎಂದರು.

“ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನವಾಗುತ್ತದೆ. ಒಡೆಯುವುದು ಕಾಂಗ್ರೆಸ್‌ನ ಬುದ್ಧಿ. ಅಭಿವೃದ್ಧಿ ಮಾಡುವುದರ ಬದಲು ಒಡೆಯುವುದು ಸರಿಯಲ್ಲ. ಬ್ರ್ಯಾಂಡ್‌ ಬೆಂಗಳೂರಿನ ಹೆಸರಲ್ಲಿ ಇದುವರೆಗೆ ಒಂದು ಯೋಜನೆಯೂ ಜಾರಿಯಾಗಿಲ್ಲ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X