ನಕಲಿ ಸ್ಯಾಂಡಲ್ ಸೋಪ್ ತಯಾರಿಕೆ | ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿಯವರು: ಪ್ರಿಯಾಂಕ್ ಖರ್ಗೆ

Date:

ಹೈದರಾಬಾದ್​ನಲ್ಲಿ ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಆರೋಪಿಗಳಿಬ್ಬರು ಬಿಜೆಪಿ ನಾಯಕರು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು ಹಾಗೂ ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಸಚಿವ ಎಂಬಿ ಪಾಟೀಲ್ ಅವರಿಗೆ ಅನಾಮಿಕನೊಬ್ಬ ಕರೆ ಮಾಡುತ್ತಾನೆ. ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಎಂ.ಬಿ ಪಾಟೀಲ್​ ಅವರು ಇಲ್ಲಿನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟದ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡುತ್ತಾರೆ. ನಂತರ ನಮ್ಮ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾದರು ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಬಳಿಕ ನಮ್ಮ ಅಧಿಕಾರಿಗಳು ಹೈದರಾಬಾದ್​ಗೆ ತೆರಳಿ 25 ಲಕ್ಷ ರೂ. ಆರ್ಡರ್ ಇದೆ ಅಂತ ಹೇಳುತ್ತಾರೆ. ಬಹಳ ದೊಡ್ಡ ಆರ್ಡರ್ ಇರುವುದರಿಂದ ಕಾರ್ಖಾನೆಗೆ ಬರುತ್ತೇವೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಾರೆ. ಬಹಳ ಸೂಕ್ಷ್ಮವಾಗಿ ಈ ಕಾರ್ಯಾಚರಣೆ ನಡೆಯುತ್ತದೆ. ನಕಲಿ ಎಂದು ಖಚಿತವಾದ ಮೇಲೆ, ನಮ್ಮ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ನಕಲಿ ಸೋಪ್​ ಮತ್ತು ಕವರ್​ಗಳು ಪತ್ತೆಯಾಗಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಕಿ ಖಟ್ಲೆಗಳ ಭಾರದಡಿ ಕುಸಿದಿರುವ ನ್ಯಾಯಾಂಗ ಮತ್ತು ಸಿನಿಕ ಸಾರ್ವಜನಿಕರು

ಪ್ರಕರಣ ಸಂಬಂಧ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಹಾಗೂ ಮಾಜಿ ಶಾಸಕರ ಪುತ್ರನ ಜೊತೆ ಆರೋಪಿತರ ಸಂಪರ್ಕವಿದೆ. ಕಾರ್ಯಾಚರಣೆ ನಡೆದಿರುವುದು ರಾಜ್ಯದ ಆಸ್ತಿ ಉಳಿಸಿಕೊಳ್ಳುವುದಕ್ಕಾಗಿ. ಇದರಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ. ಬಿಜೆಪಿಯವರು ದುಡ್ಡು ಮಾಡುವುದಕ್ಕೆ ಯಾವುದಕ್ಕೂ ಹೇಸುವುದಿಲ್ಲ ಎಂದು ವಾಗ್ದಾಳಿ ಮಾಡಿದರು.

ಬಿಜೆಪಿಯ ಎಂಎಲ್ಎಗಳ ಜೊತೆಗೆ ನಕಲಿ ಸೋಪ್ ತಯಾರಕ ಮಹಾವೀರ್ ಜೈನ್ ಇದ್ದಾನೆ. ಕನ್ನಡಿಗರು ಕಷ್ಟಪಟ್ಟು ಬೆವರು ಸುರಿಸಿ ಬಂಡವಾಳ ಹಾಕಿದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯ ಅಧಿಕೃತ ಪದಾಧಿಕಾರಿಗಳ ಜೊತೆಗೆ ಮಹಾವೀರ್ ಜೈನ್ ಇದ್ದಾನೆ. ಮಣಿಕಂಠ ರಾಥೋಡ್​ಗೂ ನಕಲಿ ಸೋಪ್ ತಯಾರಿಕರಿಗೂ ಏನು ನಂಟು? ಪೃಥ್ವಿ ಸಿಂಗ್ ಸಲುವಾಗಿ ಎರಡು ದಿನ ಕಲಾಪ ಹಾಳು ಮಾಡಿದರು. ಈ ಪೃಥ್ವಿ ಸಿಂಗ್ ಪೊಲೀಸ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಯಾಕೆ ಇವರೆಲ್ಲ ಬಿಜೆಪಿಯವರೇ ಆಗಿರುತ್ತಾರೆ? ಎಂದು ಪ್ರಶ್ನಿಸಿದರು.

ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂಬುದೆಲ್ಲ ಸತ್ಯ ಇರಬೇಕು. ರಾಜ್ಯದ ಆಸ್ತಿ ಮಾರಾಟ ಮಾಡುವವರಿಗೆ ಬಿಜೆಪಿ ಟಿಕೆಟ್ ನೀಡುತ್ತದೆ. ಯಾದಗಿರಿಯಲ್ಲಿ 700 ಕ್ವಿಂಟಾಲ್ ಗರೀಬ್ ಕಲ್ಯಾಣ್ ಅಕ್ಕಿ ಬಿಜೆಪಿಯವರ ಗೋಡೌನ್​ನಲ್ಲಿ ಸಿಕ್ಕಿದೆ. ಅಕ್ಕಿ ಕದ್ದವರ‌ನ್ನು ಪ್ರಧಾನಿ ಮೋದಿ ಪಕ್ಷದಲ್ಲಿ ಯಾಕೆ ಇಟ್ಕೊಂಡಿದ್ದೀರಿ? ಇವರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ತೆಲಂಗಾಣ ಡಿಸಿಎಂ ಜೊತೆಗೆ ತನಿಖೆ ಮಾಡುವ ಬಗ್ಗೆ ಮಾತನಾಡಿದ್ದೇವೆ. ಆರೋಪಿತರ ತಪ್ಪಿಲ್ಲ ಅಂತ ಬಿಜೆಪಿಯವರು ಸಾಬೀತುಪಡಿಸಲಿ ಎಂದು ಸವಾಲು ಎಸೆದರು.

ಬಿಜೆಪಿಯವರು ಯಾರೂ ರಾಮಾಯಣ ಓದಿಲ್ಲ. ಬಿಜೆಪಿಯವರಿಗೆ 4 ಸಾಲು ಹನುಮಾನ್ ಚಾಲೀಸಾ ಕೂಡ ಬರಲ್ಲ. ಬಿಜೆಪಿಯವರಿಗೆ ಪ್ರಾಣ ಪ್ರತಿಷ್ಠಾಪನೆಯ ಅರ್ಥವೇ ಗೊತ್ತಿಲ್ಲ. ಶಂಕರಾಚಾರ್ಯರ ಪೀಠದ ಶ್ರೀಗಳ ಪ್ರಶ್ನೆಗೆ ಉತ್ತರ ಕೊಡಲಿ ಸಾಕು. ಬಿಜೆಪಿ ನಾಯಕರಿಗೆ ಕಾಂಗ್ರೆಸ್​ನವರು ಪ್ರಶ್ನೆ ಕೇಳುತ್ತಿಲ್ಲ. ಶಂಕರಾಚಾರ್ಯರು ಕೇಳಿದ ಪ್ರಶ್ನೆಗೆ ಬಿಜೆಪಿಯವರು ಉತ್ತರ ಕೊಡಲಿ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನಿಮ್ಮ ಪಕ್ಷದ ಸದಸ್ಯರು ಯಾವ ಯಾವ ನಕಲಿ ತಯಾರಿಕೆಯಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದು ಒಮ್ಮೆ ಅವಲೋಕಿಸಿ, ಏನೋ ದೊಡ್ಡ ಘನಂದಾರಿ ಕೆಲಸ ಸಾಧಿಸಿದ ಹಾಗೆ ಹೇಳಿಕೊಳ್ಳುತ್ತಿರುವಿರಿ, ಅಧಿಕಾರಕ್ಕೆ ಬಂದು ಎಂಟು ತಿಂಗಳು ಕಳೆದಿವೆ ಯಾವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಅದರ ಬಗ್ಗೆ ಗಮನ ಕೊಡಿ ಹಾಗೂ ರಾಜ್ಯದ ಜನಗಳ ಕುಂದು ಕೊರತೆಗಳ ಬಗ್ಗೆ ಗಮನ ಹರಿಸಿ ಮತ್ತು ತಮ್ಮ ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರ ಆಶೀರ್ವಾದ ಇರೋವರೆಗೂ ನಮ್ಮ ಸರ್ಕಾರವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ...

ದಸರಾಗೆ ಚಾಲನೆ | ಚುನಾಯಿತ ಸರ್ಕಾರಗಳನ್ನು ಉರುಳಿಸುವ ದುರ್ಬುದ್ಧಿ ಬಾರದಿರಲಿ; ಚಾಮುಂಡಿ ದೇವಿಗೆ ಹಂಪನಾ ಪ್ರಾರ್ಥನೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ಗುರುವಾರ ಅದ್ಧೂರಿ ಚಾಲನೆ ದೊರೆಯಿತು. ಖ್ಯಾತ ಸಾಹಿತಿ...

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ...

50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ...