​ಮೈಸೂರು ವಿವಿ ಎಸ್‌ಸಿ-ಎಸ್‌ಟಿ ಸಂಶೋಧಕರಿಗೆ ಶಿಷ್ಯವೇತನ: ಬಿಕ್ಕಟ್ಟು ಬಗೆಹರಿಸಿದ ಸಚಿವ ಯತೀಂದ್ರ

Date:

ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ (ಸ್ಕಾಲರ್‌ಶಿಪ್) ಸಮಸ್ಯೆಗೆ ಪರಿಹಾರವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚಿಸಿದ್ದಾರೆ.

- Advertisement -

ಶಿಷ್ಯವೇತನದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಅಧಿಕಾರಿಗಳ ಸಭೆ ಜರುಗಿತು. ಸಚಿವರ ಗೃಹ ಕಛೇರಿ ‘ಕಾವೇರಿ’ಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಸಚಿವರು, ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ​ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟು 116 ವಿದ್ಯಾರ್ಥಿಗಳಿಗೂ ಪ್ರವೇಶಾತಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಮೈಸೂರು | ಶಿಷ್ಯವೇತನ ಮಂಜೂರಿಗೆ ಆಗ್ರಹಿಸಿ ಶಿಷ್ಯವೇತನ ರಹಿತ ಸಂಶೋಧಕರ ಪ್ರತಿಭಟನೆ

ಮಂಡ್ಯ ಮತ್ತು ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕಗೊಂಡಿರುವುದರಿಂದ ಮೈಸೂರು ವಿಶ್ವವಿದ್ಯಾಲಯಕ್ಕೆ ಆರ್ಥಿಕ ಸಂಪನ್ಮೂಲಗಳ ಕೊರತೆ ಎದುರಾಗಿದೆ. ಈ ಕಾರಣದಿಂದಾಗಿ ಇಷ್ಟೊಂದು ದೊಡ್ಡ ಮಟ್ಟದ ಆರ್ಥಿಕ ಹೊರೆಯನ್ನು ಸಂಪೂರ್ಣವಾಗಿ ಭರಿಸಲು ಹಾಗೂ ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗುವುದಿಲ್ಲ ಎಂದು ಮೈಸೂರು ವಿವಿ ಕುಲಪತಿಗಳು ಸಭೆಯಲ್ಲಿ ಅಸಹಾಯಕತೆ ವ್ಯಕ್ತಪಡಿಸಿದರು.

​ಇದಕ್ಕೆ ಪರ್ಯಾಯ ಮಾರ್ಗ ಸೂಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಒಟ್ಟು ವಿದ್ಯಾರ್ಥಿಗಳಲ್ಲಿ 58 ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ ಉಳಿದ 58 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಸ್ಕಾಲರ್‌ಶಿಪ್ ಹಂಚಿಕೆ ಮಾಡಿ ನೀಡುವಂತೆ ಜಂಟಿ ತೀರ್ಮಾನಕ್ಕೆ ಬರಲು ಸೂಚಿಸಿದರು. ಸಚಿವರ ಈ ನಿರ್ಧಾರಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪೂರಕವಾಗಿ ಪ್ರತಿಕ್ರಿಯಿಸಿದರು.

​ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಶೋಧಕ ವಿದ್ಯಾರ್ಥಿಗಳ ಸಂಘದ ಮುಖಂಡರೊಂದಿಗೆ ಮಾತನಾಡಿದ ಸಚಿವರು, “ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗೈಡ್‌ಗಳು (ಮಾರ್ಗದರ್ಶಕರು) ತಮ್ಮ ಸಾಮರ್ಥ್ಯ ಮೀರಿ ವಿದ್ಯಾರ್ಥಿಗಳನ್ನು ಸಂಶೋಧನೆಗೆ ತಗೆದುಕೊಂಡಿದ್ದಾರೆ. ಆ ಕಾರಣದಿಂದಾಗಿಯೇ ಪ್ರಸ್ತುತ ಈ ಸಮಸ್ಯೆ ಉದ್ಭವಿಸಿದೆ. ಮುಂದಿನ ವರ್ಷಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸಹ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಸಹಕಾರ ನೀಡಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ​ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ, ​ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರಾಜ್, ​ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳು ಡಾ. ಲೋಕನಾಥ್, ​ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...