ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

Date:

ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಮಹಾನ್ ನಾಯಕ ಎನ್ ರಾಚಯ್ಯ ಅವರು ಕರ್ನಾಟಕದ ಸಾಮಾಜಿಕ ನ್ಯಾಯ ಚಳವಳಿಯ ಪ್ರಮುಖ ಶಕ್ತಿಯಾಗಿದ್ದರು. ಮಾಜಿ ಸಚಿವರು, ಸಂಸದರು, ಸಮಾಜಸೇವಕರು ಹಾಗೂ ದೂರದೃಷ್ಟಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಎನ್ ರಾಚಯ್ಯ ಅವರ 107ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರ ಸಾಧನೆಗಳು ಮತ್ತೊಮ್ಮೆ ಸ್ಮರಿಸಲ್ಪಡುತ್ತಿವೆ.

- Advertisement -

1920ರ ಮೇ 8ರಂದು ಅಂದಿನ ಮೈಸೂರು ಸಂಸ್ಥಾನದ ಭಾಗವಾಗಿದ್ದ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಎನ್ ರಾಚಯ್ಯ ಅವರು ಜನಿಸಿದರು. ತಾಯಿಯ ತವರೂರಾದ ಈ ಗ್ರಾಮದಲ್ಲೇ ಅವರು ಜನ್ಮತಾಳಿದರು. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಗೋಪಾಲಪುರ ನಿವಾಸಿಗಳಾದ ನರಸಿಂಹಯ್ಯ ಮತ್ತು ಮಾದಮ್ಮ ದಂಪತಿಗೆ ಒಂಭತ್ತು ಮಕ್ಕಳಲ್ಲಿ ಮೊದಲ ಮಗನಾಗಿ ಜನಿಸಿದ ರಾಚಯ್ಯ ಅವರು ಬಾಲ್ಯದಿಂದಲೇ ಹೋರಾಟದ ಬದುಕನ್ನು ಅಪ್ಪಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸಾಮಾಜಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿದ ಕುಟುಂಬದಲ್ಲಿ ಜನಿಸಿದರೂ ಶಿಕ್ಷಣವೇ ಬದುಕಿನ ಬದಲಾವಣೆಗೆ ದಾರಿ ಎಂಬ ಅರಿವನ್ನು ತಂದೆ-ತಾಯಿ ಮಕ್ಕಳಲ್ಲಿ ಮೂಡಿಸಿದ್ದರು. ಅವರ ಪ್ರೋತ್ಸಾಹದೊಂದಿಗೆ ಎನ್ ರಾಚಯ್ಯ ಅವರು ಮೈಸೂರಿನ ನಜರ್‌ಬಾದ್‌ನ ಡಿಪ್ರೆಸ್ಡ್ ಕ್ಲಾಸ್ ಹಾಸ್ಟೆಲ್‌ನಲ್ಲಿ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದರು. ಬಳಿಕ ಬೆಂಗಳೂರಿನ ನರಸಿಂಹರಾಜ ಹಾಸ್ಟೆಲ್ ಹಾಗೂ ಮಾಗಡಿ ರಸ್ತೆಯ ಬಾಪೂಜಿ ವಿದ್ಯಾರ್ಥಿ ನಿಲಯದಲ್ಲಿ ವಾಸವಿದ್ದುಕೊಂಡು ಪ್ರೌಢಶಾಲಾ ಶಿಕ್ಷಣ ಮುಂದುವರಿಸಿದರು.

ವಿದ್ಯಾರ್ಥಿ ಜೀವನದಲ್ಲೇ ಸಾಮಾಜಿಕ ಹೋರಾಟದ ಮನೋಭಾವ ಬೆಳೆಸಿಕೊಂಡ ರಾಚಯ್ಯ ಅವರು ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಲೇ ವಿದ್ಯಾಭ್ಯಾಸ ಮುಂದುವರಿಸಿದರು. ದಿವಂಗತ ಚಿಕ್ಕ ಹನುಮಂತಯ್ಯ ಸ್ಥಾಪಿಸಿದ್ದ ಬಾಪೂಜಿ ವಿದ್ಯಾರ್ಥಿ ನಿಲಯದಲ್ಲಿ ಕೆಲಕಾಲ ವಾರ್ಡನ್ ಆಗಿ ಸೇವೆ ಸಲ್ಲಿಸಿದರು. ಇದೇ ಅವಧಿಯಲ್ಲಿ ಸಮಾಜ ಸೇವೆಯತ್ತ ಅವರ ಒಲವು ಮತ್ತಷ್ಟು ಗಾಢವಾಯಿತು.

1936ರಲ್ಲಿ ಚಿಕ್ಕ ಹನುಮಂತಯ್ಯ ಅವರೊಂದಿಗೆ ಕೈಜೋಡಿಸಿ ‘ಆದಿಜಾಂಬವ ಅಭಿವೃದ್ಧಿ ಸಂಘ’ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವರು ಆದಿಜಾಂಬವ ಸಮುದಾಯದ ಜನರನ್ನು ಸಂಘಟಿಸಲು ಗ್ರಾಮಾಂತರ ಪ್ರದೇಶಗಳಿಗೆ ತೆರಳಿ ಜಾಗೃತಿ ಮೂಡಿಸಿದರು. ಸಮುದಾಯದ ಶಿಕ್ಷಣ, ಸಾಮಾಜಿಕ ಹಕ್ಕುಗಳು ಮತ್ತು ಸಂಘಟಿತ ಹೋರಾಟದ ಅಗತ್ಯತೆಯನ್ನು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಕೈಗೊಂಡರು.

1940ರಲ್ಲಿ ಕೆಇಬಿ ಇಲಾಖೆಯಲ್ಲಿ ಗುಮಾಸ್ತರಾಗಿ ಸರ್ಕಾರಿ ಸೇವೆಗೆ ಸೇರಿದ ಅವರು, ಕೆಲವು ಕಾರಣಗಳಿಂದ ಆ ಉದ್ಯೋಗವನ್ನು ತೊರೆದರು. ನಂತರ ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪೂರ್ಣಗೊಳಿಸಿ, ಬೆಂಗಳೂರಿನ ಸೆಂಟ್ರಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ಬಳಿಕ ವಕೀಲ ವೃತ್ತಿ ಆರಂಭಿಸಿ ಸಮಾಜದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸುವ ದಿಸೆಯಲ್ಲಿ ಕೆಲಸ ಮಾಡಿದರು.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ರಾಚಯ್ಯ ಅವರಿಗೆ ಅಂದಿನ ರಾಜಕೀಯ ಮುಖಂಡ ಸಾಹುಕಾರ್ ಚೆನ್ನಯ್ಯ ಅವರ ಆತ್ಮೀಯತೆ ದೊರೆಯಿತು. ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಬೋರ್ಡ್ ಸಮಿತಿ ಸದಸ್ಯರಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡರು.

1948ರಲ್ಲಿಯೇ ‘ಹಕ್ಕು ಯಾರದ್ದು’ ಎಂಬ ಬೃಹತ್ ಜನಾಂದೋಲನವನ್ನು ರೂಪಿಸಿ, ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ಆರಂಭಿಸಿದರು. ಅದೇ ವರ್ಷ ‘ಅಸ್ಪೃಶ್ಯತೆ ವಿರೋಧಿ ವೇದಿಕೆ’ ಎಂಬ ಪಾಕ್ಷಿಕ ಪತ್ರಿಕೆಯನ್ನು ಸ್ಥಾಪಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಂಡರು. ಮೌಢ್ಯ, ಅಸ್ಪೃಶ್ಯತೆ ಮತ್ತು ಕಂದಾಚಾರಗಳ ವಿರುದ್ಧ ಅವರು ನಡೆಸಿದ ಹೋರಾಟ ಸಾಮಾಜಿಕ ಪರಿವರ್ತನೆಗೆ ದಿಕ್ಕು ತೋರಿತು.

ಸಾರ್ವಜನಿಕ ಜೀವನದ ಆರಂಭದಲ್ಲಿ 1947ರಂದು ಜಲಪುರಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. 1949ರ ಚುನಾವಣೆಯಲ್ಲಿ ಮೈಸೂರು ಪುರಸಭಾ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾದರು. 1950-53ರವರೆಗೆ ಮೈಸೂರು ಪುರಸಭೆ ಸದಸ್ಯ ಹಾಗೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಚಿಂತನೆಗಳಿಂದ ಪ್ರೇರಿತರಾದ ರಾಚಯ್ಯ 1952ರಲ್ಲಿ ನಡೆದ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಳೇ ಮೈಸೂರು ಪ್ರಾಂತ್ಯದಿಂದ ಆಯ್ಕೆಯಾದ ಮೊದಲ ಸಂಸದರಾದ ಕೀರ್ತಿಗೆ ಪಾತ್ರರಾದರು.

1957ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಎನ್ ರಾಚಯ್ಯ ಅವರು ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು. ಬಳಿಕ 1959ರಲ್ಲಿ ಅಂದಿನ ಮುಖ್ಯಮಂತ್ರಿ ಬಿ ಡಿ ಜತ್ತಿಯವರ ಮಂತ್ರಿಮಂಡಲದಲ್ಲಿ ಸಮಾಜ ಕಲ್ಯಾಣ, ಅಬಕಾರಿ ಹಾಗೂ ಕೃಷಿ ಇಲಾಖೆಗಳ ಕ್ಯಾಬಿನೆಟ್ ಸಚಿವರಾಗಿ ಕಾರ್ಯನಿರ್ವಹಿಸಿದರು.

ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಬಿ ಡಿ ಜತ್ತಿ, ಕೆಂಗಲ್ ಹನುಮಂತಯ್ಯ, ಎಸ್. ನಿಜಲಿಂಗಪ್ಪ ಹಾಗೂ ಡಿ. ದೇವರಾಜ ಅರಸು ಅವರ ಸಂಪುಟದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸೃಷ್ಟಿಕರ್ತರಾಗಿ, ಮೊದಲ ಬಾರಿಗೆ ವಿದ್ಯಾರ್ಥಿ ನಿಲಯಗಳ ಪರಿಕಲ್ಪನೆ ಜಾರಿಗೆ ತಂದು, ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿ ತೆರೆದರು. ಶಾಲಾ ಮಕ್ಕಳಿಗೆ ವಿದ್ಯಾರ್ಥಿವೇತನ ವ್ಯವಸ್ಥೆಯನ್ನು ಆರಂಭಿಸಿದವರಲ್ಲೂ ಅವರು ಪ್ರಮುಖರು. ಎಸ್‌ಸಿ/ಎಸ್‌ಟಿ ಸಮುದಾಯಗಳ ಸಬಲೀಕರಣಕ್ಕಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಅಂದಿನ ಕಾಲಘಟ್ಟದಲ್ಲಿ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯಕ್ಕೆ ಒತ್ತು ನೀಡಿದರು.

ಡಿ. ದೇವರಾಜ ಅರಸು ಅವರ ಸಂಪುಟದಲ್ಲಿ ಸಚಿವರಾಗಿ ಕೃಷಿ ಕ್ಷೇತ್ರಕ್ಕೆ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿದ ರಾಚಯ್ಯನವರು ಪ್ರಮುಖವಾಗಿ ಸಾಮಾಜಿಕ ನ್ಯಾಯ ಮತ್ತು ಭೂ ಸುಧಾರಣೆ ಕಾರ್ಯಕ್ರಮಗಳಿಗೆ ಉತ್ತೇಜನ ಕೊಡುವ ಸಲುವಾಗಿ ‘ಉಳುವವನೇ ಭೂಮಿ ಒಡೆಯ’ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಯಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅಲ್ಲದೆ, ಕೃಷಿ ಉತ್ಪನ್ನ ಮಾರುಕಟ್ಟೆಗಳ ಅಭಿವೃದ್ಧಿ, ಆಧುನಿಕ ಕೃಷಿ ಯಂತ್ರೋಪಕಾರಣ ಪರಿಚಯ, 1959ರಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಿದ ಹೆಗ್ಗಳಿಕೆ ಇವರದ್ದಾಗಿದೆ.

1975ರಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳ ಪರಿಕಲ್ಪನೆಯನ್ನು ಜಾರಿಗೆ ತರುವ ಮೂಲಕ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆದರು. 1957ರಿಂದ 1967ರವರೆಗೆ ಕರ್ನಾಟಕದಲ್ಲಿ ಮದ್ಯಪಾನ ನಿಷೇಧ ಜಾರಿಗೆ ತರಲು ಅವರು ಶ್ರಮಿಸಿದರು.

ಸಾಮಾಜಿಕ ನ್ಯಾಯದ ಪ್ರಶ್ನೆಯಲ್ಲಿ ದೂರದೃಷ್ಟಿ ಹೊಂದಿದ್ದ ಎನ್ ರಾಚಯ್ಯ ಅವರು ಒಳಮೀಸಲಾತಿಯ ಅಗತ್ಯತೆಯನ್ನು ಬಹಳ ಹಿಂದೆಯೇ ಗುರುತಿಸಿದ್ದರು. 1978ರಲ್ಲಿ ಹಾವನೂರು ವರದಿ ವಿರೋಧಿಸಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಅವರ ನಿಲುವು ಇಂದು ಮತ್ತಷ್ಟು ಪ್ರಸ್ತುತವಾಗುತ್ತಿದೆ.

1974ರಲ್ಲಿ ನಾಗರಿಕ ಹಕ್ಕು ಸಮಿತಿಯನ್ನು ರಚಿಸಿ, ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಹೋರಾಟಕ್ಕೆ ವೇದಿಕೆ ನಿರ್ಮಿಸಿದರು. ಇದೇ ಸಂಸ್ಥೆ ನಂತರ ಡಿಸಿಆರ್‌ಇ(DCRE) ರೂಪದಲ್ಲಿ ಬೆಳವಣಿಗೆ ಕಂಡಿತು. 1977ರಲ್ಲಿ ಎಸ್‌ಸಿ/ಎಸ್‌ಟಿ ನಿಗಮ ಸ್ಥಾಪನೆಗೆ ಕಾರಣಕರ್ತರಾಗಿದ್ದು, ಅದು ಇಂದಿನ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವಾಗಿ ಕಾರ್ಯನಿರ್ವಹಿಸುತ್ತಿದೆ.

ರಾಜಕೀಯ ಕ್ಷೇತ್ರದಲ್ಲಿಯೂ ಅನೇಕ ನಾಯಕರನ್ನು ಬೆಳೆಸಿದ ರಾಚಯ್ಯ ಅವರು ಬಿ. ಬಸವಲಿಂಗಪ್ಪ, ಮಾಜಿ ಶಾಸಕ ಸೋಸಲೆ ಸಿದ್ಧಯ್ಯ ಹಾಗೂ ಮಾಜಿ ಶಾಸಕ ಕಾಳಿಹುಂಡಿ ಮಲ್ಲಿಕಾರ್ಜುನ ಅವರನ್ನು ರಾಜಕೀಯಕ್ಕೆ ಪರಿಚಯಿಸಿದ ಮಾರ್ಗದರ್ಶಕರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡು ರಾಜ್ಯಪಾಲರ ನಡೆ ಕೆಟ್ಟ ಪರಂಪರೆಯೊಂದರ ಮುಂದುವರಿಕೆ

ಬೌದ್ಧ ಧರ್ಮದ ಅನುಯಾಯಿಯಾಗಿದ್ದ ಎನ್ ರಾಚಯ್ಯ ಅವರು ಸಮಾನತೆ, ಮಾನವತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಪ್ರತಿಪಾದಿಸಿದರು. ಶೋಷಿತರ ಪರ ಗಟ್ಟಿಯಾಗಿ ಧ್ವನಿಯೆತ್ತಿದ ಈ ಮಹಾನ್ ನಾಯಕನ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ.

WhatsApp Image 2025 02 05 at 18.09.20
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...