ನಾಗರಹೊಳೆ, ಬಂಡೀಪುರದಲ್ಲಿ ಇಂದಿನಿಂದ ಸಫಾರಿ, ಚಾರಣ ಬಂದ್: ಸಚಿವ ಈಶ್ವರ ಖಂಡ್ರೆ

Date:

ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

- Advertisement -

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ಹೇಳಿದ್ದಾರೆ.

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...