ಈ ದೇಶದ ಏಳಿಗೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ನೀಡಿದ ಕನಿಷ್ಠ ಹತ್ತು ಕೊಡುಗೆಗಳನ್ನು ಸಂಸದ ಜಗದೀಶ ಶೆಟ್ಟರ್ ಅವರು ತಿಳಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಜಗದೀಶ ಶೆಟ್ಟರ್ ಅವರು ಇತ್ತೀಚೆಗೆ ಹೇಳಿದ್ದ ಆರ್ಎಸ್ಎಸ್ ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರ ಆಗುತ್ತಿತ್ತು ಎಂಬ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ. ಈ ಕುರಿತ ಪೋಸ್ಟ್ ಅನ್ನು ಎಕ್ಸ್ನಲ್ಲಿ ಹಂಚಿದ್ದಾರೆ.
ಶೆಟ್ಟರ್ ಅವರೇ, ಆರ್ಎಸ್ಎಸ್ ಅಸ್ತಿತ್ವಕ್ಕೆ ಬಂದಿದ್ದು ನೂರು ವರ್ಷಗಳ ಹಿಂದೆ. ಆದರೆ ಸಾವಿರಾರು ವರ್ಷಗಳಿಂದ ‘ಹಿಂದೂ’ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?
ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಆರ್ಎಸ್ಎಸ್ ಹೊಗಳುವುದು ಅನಿವಾರ್ಯವಾಗಿದೆ. ಆರ್ಎಸ್ಎಸ್ ಅವರಿಗಂತೂ ಬಸವಣ್ಣನವರ ತತ್ವದಲ್ಲಿ ನಂಬಿಕೆ ಇಲ್ಲ. ತಮಗೂ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನಿಜವಾಗಿಯೂ ಬಸವ ತತ್ವದಲ್ಲಿ ನಂಬಿಕೆ ಇರುವವರು ಆರ್ಎಸ್ಎಸ್ ಅನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಹಿಂದೆ, ಇಂದು, ಎಂದಿಗೂ ಈ ಭಾರತ ಜಾತ್ಯತೀತ ತತ್ವಗಳ ನೆಲವಾಗಿದೆ, ಮುಂದೆಯೂ ಜಾತ್ಯತೀತ ನೆಲವಾಗಿಯೇ ಇರಲಿದೆ ಎಂದು ಹೇಳಿದ್ದಾರೆ.