ಯುಪಿ ಮಾತ್ರವಲ್ಲದೇ ಹರಿಯಾಣಕ್ಕೂ ಲಗ್ಗೆ ಇಟ್ಟ ‘ನಂದಿನಿ’ ಹಾಲು

Date:

‌ದೆಹಲಿ ಮಾರುಕಟ್ಟೆಗೆ ಕಾಲಿಟ್ಟ ನಂತರ ಉತ್ತರ ಭಾರತದಲ್ಲಿ ತನ್ನ ಮಾರುಕಟ್ಟೆಯ ಜಾಲವನ್ನು ವಿಸ್ತರಿಸಿಕೊಳ್ಳುತ್ತಿರುವ ಕನ್ನಡಿಗರ ಹೆಮ್ಮೆಯ ಹಾಲಿನ ಬ್ರ್ಯಾಂಡ್ ‘ನಂದಿನಿ’ ಈಗ ಉತ್ತರ ಪ್ರದೇಶ ಮಾತ್ರವಲ್ಲದೇ ಹರಿಯಾಣಕ್ಕೂ ಲಗ್ಗೆ ಇಟ್ಟಿದೆ.

- Advertisement -

ಶೀಘ್ರವೇ ಹರಿಯಾಣದಲ್ಲಿ ‘ನಂದಿನಿ’ ಹಾಲು ಮಾರಾಟ ಆರಂಭಿಸಲಾಗುವುದು ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (ಕೆಎಂಎಫ್) ಗುರುವಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೆಹಲಿ ಮಾರುಕಟ್ಟೆ ನಂತರ ‘ನಂದಿನಿ’ ಉತ್ತರ ಭಾರತದ ಆಗ್ರಾ, ಮಥುರಾ, ಮೀರತ್ ಹಾಗೂ ಅಲಿಗರ್ ಪ್ರದೇಶಗಳಲ್ಲೂ ಹಾಲು-ಮೊಸರು ಮಾರಾಟವನ್ನು ಪ್ರಾರಂಭಿಸಿದೆ. ಈ ಸಂಬಂಧ ಉತ್ತರಪ್ರದೇಶದ ‘ಹತ್ರಾಸ್’ ಜಿಲ್ಲೆಯಲ್ಲಿ ನೂತನ ಹಾಲು ಸಂಸ್ಕರಣಾ ಘಟಕವನ್ನು ಸ್ಥಾಪಿಸಿದೆ.

“ಉತ್ತರ ಭಾರತದ ವ್ಯಾಪ್ತಿಯಲ್ಲಿ ನಂದಿನಿ ಹಾಲು ಮಾರಾಟದ ಜಾಲವನ್ನು ಮತ್ತಷ್ಟು ಸದೃಢಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕೆ ಪೂರಕವಾಗಿ ವಿತರಕರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಗ್ರಾಹಕರಲ್ಲಿ ಅರಿವು ಮೂಡಿಸಲು ‘ಹರ್ ಘರ್ ನಂದಿನಿ’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ” ” ಎಂದು ಕೆಎಂಎಫ್‌ನ ಉತ್ತರ ಭಾರತದ ಮುಖ್ಯಸ್ಥ ಅಮಿತ್ ಸಿಂಗ್ ಹೇಳಿದ್ದಾರೆ.

ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ರಾಷ್ಟ್ರದಲ್ಲಿಯೇ ಎರಡನೇಯ ದೊಡ್ಡ ಹಾಲು ಸಹಕಾರ ಸಂಸ್ಥೆಯಾಗಿದೆ.

ಕೆಎಂಎಫ್ ಸಂಸ್ಥೆಯು ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26 ಲಕ್ಷಕ್ಕೂ ಹೆಚ್ಚಿನ ಹೈನುಗಾರ ರೈತರಿಂದ ಹಾಲನ್ನು ಖರೀದಿಸಿ. ಸಂಸ್ಕರಿಸಿ ‘ಗೋವಿನಿಂದ ಗ್ರಾಹಕರವರೆಗೆ’ ಎಂಬ ಶೀರ್ಷಿಕೆಯನ್ನು ಹೊತ್ತು ‘ನಂದಿನಿ’ ಬ್ರ್ಯಾಂಡ್‌ ಅಡಿಯಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಗಳಲ್ಲಿ ಕಳೆದ 05 ದಶಕಗಳಿಂದ ಮಾರಾಟ ಮಾಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...