ತನ್ನ ಮಾರುಕಟ್ಟೆಯನ್ನು ಹಿಗ್ಗಿಸಿಕೊಳ್ಳುತ್ತಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಬ್ರಾಂಡ್ ಅಡಿಯಲ್ಲಿ ದೋಸೆ, ಇಡ್ಲಿ ಹಿಟ್ಟುಗಳನ್ನೂ ಮಾರುಕಟ್ಟೆಗೆ ಬಿಟ್ಟಿದೆ. ಈ ನಡುವೆಯೇ, ನಂದಿನಿ ಹಾಲಿನ ದರವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಂದಾಗಿದೆ. ಹೊಸ ವರ್ಷದಿಂದ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದೆ ಎಂದು ವರದಿಯಾಗಿದೆ.
ಆರು ತಿಂಗಳ ಹಿಂದೆ ಪ್ರತಿ ಲೀಟರ್ ನಂದಿನಿ ಹಾಲಿಗೆ 2 ರೂ. ಏರಿಕೆ ಮಾಡಲಾಗಿತ್ತು. ಇದೀಗ, ಮತ್ತೆ ದರ ಏರಿಕೆಗೆ ಕೆಎಂಎಫ್ ಮುಂದಾಗಿದೆ. ‘ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರವು ಬೆಲೆ ಏರಿಕೆ ಬಗ್ಗೆ ನಿರ್ಧಾರ ತೆಗೆದುಕೊಳುವುದು ಬಾಕಿ ಇದೆ’ ಎಂದು ಕೆಎಂಎಫ್ ಅಧ್ಯಕ್ಷ ಎಲ್. ಭೀಮಾನಾಯ್ಕ ತಿಳಿಸಿರುವುದಾಗಿ ವರದಿಯಾಗಿದೆ.
ಅಲ್ಲದೆ, ಈ ಹಿಂದೆ, ಹೆಚ್ಚುವರಿಯಾಗಿ ಒಂದು ಲೀಟರ್ ಹಾಲಿನ ಜೊತೆಗೆ 50 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿತ್ತು. ಈಗ, ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ ಹಾಲನ್ನು ಸ್ಥಗಿತಗೊಳಿಸಿ, 2 ರೂಪಾಯಿ ಕಡಿತಗೊಳಿಸುವ ಪ್ರಸ್ತಾಪವನ್ನೂ ಕೆಎಂಎಫ್ ಸರ್ಕಾರದ ಮುಂದಿಟಿದೆ ಎಂದು ತಿಳಿದುಬಂದಿದೆ.