ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

Date:

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ. ನಂದಿನ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 8 ರೂ. ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೊಸ ದರಗಳು ನವೆಂಬರ್ 1ರಿಂದಲೇ ಜಾರಿಗೆ ಬರಲಿವೆ ಎಂದು ಸರ್ಕಾರ ತಿಳಿಸಿದೆ.

- Advertisement -

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪರಿಷ್ಕರಣೆಗೆ ಅಧಿಕೃತ ಒಪ್ಪಿಗೆ ನೀಡಲಾಗಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, “ಪ್ರತಿ ಲೀಟರ್ ಹಾಲಿನ ಮೇಲೆ ಹೆಚ್ಚಿಸಲಾಗಿರುವ 8 ರೂ.ಗಳ ಪೈಕಿ 7 ರೂ.ಗಳನ್ನು ನೇರವಾಗಿ ಹಾಲು ಉತ್ಪಾದಕರಿಗೆ (ರೈತರಿಗೆ) ತಲುಪಿಸಲಾಗುತ್ತದೆ. ಉಳಿದ 1 ರೂಪಾಯಿಯನ್ನು ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಬೆಲೆ ಏರಿಕೆಯಿಂದ ಹಾಲಿನ ಉತ್ಪಾದನೆಯ ವೆಚ್ಚ ಹೆಚ್ಚಳದಿಂದಾಗಿ ಸಂಕಷ್ಟದಲ್ಲಿದ್ದ ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರಿಗೆ ಆರ್ಥಿಕವಾಗಿ ಹೆಚ್ಚಿನ ನೆರವು ಸಿಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಕಳೆದ ತಿಂಗಳು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದ ಕೆಎಂಎಫ್‌ ನಿಯೋಗವು ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಲೀಟರ್‌ಗೆ 8 ರೂ.ನಿಂದ 10 ರೂ.ಗಳಷ್ಟು ಹೆಚ್ಚಿಸುವಂತೆ ಮನವಿ ಮಾಡಿತ್ತು. ಕೆಎಂಎಫ್‌ ಮನವಿಯನ್ನು ಪರಿಶೀಲಿಸಿದ್ದ ಡಿ.ಕೆ ಶಿವಕುಮಾರ್, “ಕಳೆದ 10 ವರ್ಷಗಳಲ್ಲಿ ಪಶು ಆಹಾರದ ಬೆಲೆಯಲ್ಲಿ ಉಂಟಾದ ಏರಿಕೆ, ಪ್ರತಿ ಲೀಟರ್ ಹಾಲು ಉತ್ಪಾದಿಸಲು ರೈತರಿಗೆ ತಗಲುವ ವೆಚ್ಚ, ಜಿಲ್ಲಾವಾರು ಹಾಲಿನ ಸಂಗ್ರಹಣೆ ಹಾಗೂ ನೆರೆಯ ರಾಜ್ಯಗಳಲ್ಲಿರುವ ಖರೀದಿ ಮತ್ತು ಮಾರಾಟ ದರದ ವಿವರಗಳನ್ನು ಒಳಗೊಂಡ ಸಮಗ್ರ ವರದಿ ಸಿದ್ದಪಡಿಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ, ಸಚಿವ ಸಂಪುಟವು ಬೆಲೆ ಏರಿಕೆಗೆ ಅಂತಿಮ ಅನುಮೋದನೆ ನೀಡಿದೆ.

ಈ ಲೇಖನ ಓದಿದ್ದೀರಾ?: ಗಡಿಯಲ್ಲಿ ಚೀನಾ ಅತಿಕ್ರಮಣ; ಮೌನಕ್ಕೆ ಸರಿದ 56 ಇಂಚಿನ ಎದೆಯ ಮೋದಿ!

ಸರ್ಕಾರಿ ಅಧಿಕಾರಿಗಳು ನೀಡಿದ ಅಂಕಿಅಂಶಗಳ ಪ್ರಕಾರ, ದರ ಏರಿಕೆಯ ಹೊರತಾಗಿಯೂ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ. ಕರ್ನಾಟಕದಲ್ಲಿ ಪ್ರಸ್ತುತ ಒಕ್ಕೂಟವು ರೈತರಿಂದ ಟೋನ್ಡ್ ಹಾಲನ್ನು ಲೀಟರ್‌ಗೆ 35 ರೂ.ಗೆ ಖರೀದಿಸುತ್ತಿದೆ. ಆದರೆ, ನೆರೆಯ ಆಂಧ್ರಪ್ರದೇಶದಲ್ಲಿ 41.50 ರೂ., ಕೇರಳದಲ್ಲಿ 41.80 ರೂ., ಮಹಾರಾಷ್ಟ್ರದಲ್ಲಿ 41 ರೂ. ಹಾಗೂ ತಮಿಳುನಾಡಿನಲ್ಲಿ 42.24 ರೂ.ಗೆ ಖರೀದಿಸಲಾಗುತ್ತಿದೆ. ಅದೇ ರೀತಿ ಹಾಲಿನ ಗರಿಷ್ಠ ಮಾರಾಟ ದರದಲ್ಲೂ (MRP) ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಲೀಟರ್‌ಗೆ ಕನಿಷ್ಠ 12 ರೂ.ಗಳಷ್ಟು ವ್ಯತ್ಯಾಸವಿತ್ತು ಎಂದು ಹೇಳಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಡಿ: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಅಂತ್ಯಕ್ರಿಯೆಯಲ್ಲಿ ಯಾರೂ ಪಾಲ್ಗೊಳ್ಳಬಾರದು, ಮೃತದೇಹಗಳನ್ನು ಪ್ರಾಣಿಗಳು...

ಅಸ್ಸಾಂ: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ ತೀವ್ರ, 500ಕ್ಕೂ ಹೆಚ್ಚು ಮಂದಿ ಬಂಧನ

ಅಸ್ಸಾಂನಲ್ಲಿ ಬಾಲ್ಯವಿವಾಹದ ವಿರುದ್ಧ ರಾಜ್ಯ ಸರ್ಕಾರವು ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ...

ಗುಜರಾತ್‌ ಗೋಮಾಂಸ ಪ್ರಕರಣ: ಮನುಸ್ಮೃತಿಯ ಶ್ಲೋಕ ಉಲ್ಲೇಖಿಸಿ ಮೂವರಿಗೆ ಜೀವಾವಧಿ ಶಿಕ್ಷೆ!

ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್ ಸೆಷನ್ಸ್ ನ್ಯಾಯಾಲಯವು 277 ಕೆ.ಜಿ. ಗೋಮಾಂಸ...