ನಂದಿನಿ ಉತ್ಪನ್ನಗಳ ಸೇವನೆ-ಸುರಕ್ಷತೆ ಕುರಿತು ವದಂತಿ; ಸುಳ್ಳುಗಳಿಗೆ ಕಿವಿಗೊಡಬೇಡಿ ಎಂದ ಕೆಎಂಎಫ್

Date:

ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಗಳು ವೈರಲ್ ಆಗುತ್ತಿವೆ. ನಂದಿನ ಉತ್ಪನ್ನಗಳ ಕುರಿತು ವಂದತಿಗಳು ಹರಿದಾಡುತ್ತಿವೆ. ಈ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಕೆಎಂಎಫ್, “ವದಂತಿಗಳು, ಸುಳ್ಳು ಪ್ರಚಾರಗಳು ಆಧಾರರಹಿತ ಆರೋಪಗಳಾಗಿವೆ. ನಂದಿನಿ‌ ಉತ್ಪನ್ನಗಳು ಆರೋಗ್ಯಕರವಾಗಿವೆ.‌ ಬಾಲ್ಯದಿಂದಲೇ ನಂದಿನಿ ಬ್ರಾಂಡ್‌ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರು ಸುಳ್ಳು ಆರೋಪಗಳಿಗೆ ಕಿವಿಗೊಡಬಾರದು” ಎಂದು ಹೇಳಿದೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೆಎಂಎಫ್, “ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ ಹಾಲು ಮಹಾಮಂಡಳಿಯು ಭರವಸೆಯನ್ನು ನೀಡುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕರ್ನಾಟಕ ಹಾಲು ಮಹಾಮಂಡಳಿಯು ಆಧಾರರಹಿತ, ತಪ್ಪು ದಾರಿಗೆಳೆಯುವ ಮತ್ತು ಬ್ಯಾಂಡ್‌ನ ಮಾನಹಾನಿಕರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದು, ಇಂತಹ ದುರುದ್ದೇಶಪೂರಿತ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...