ನಟರಾಜ್ ಹೊನ್ನವಳ್ಳಿ ಮತ್ತು ಆರ್. ದಿಲೀಪ್‌ ಕುಮಾರ್‌ಗೆ ಶಾ. ಬಾಲುರಾವ್ ಪ್ರಶಸ್ತಿ

Date:

ಬಿ.ಎಂ.ಶ್ರೀ. ಪ್ರತಿಷ್ಠಾನ ಕೊಡಮಾಡುವ ‘ಶಾ.ಬಾಲುರಾವ್ಅನುವಾದ ಪ್ರಶಸ್ತಿ’ಗೆ ನಟರಾಜ್ ಹೊನ್ನವಳ್ಳಿ ಅವರ ‘ಆ ಲಯ ಈ ಲಯ’ ನಾಟಕ ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ. ಶಾಂತರಾಜು ತಿಳಿಸಿದ್ದಾರೆ.

- Advertisement -

ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ ಪ್ರಶಸ್ತಿ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಬಿ.ಎಂ.ಶ್ರೀ. ಪ್ರತಿಷ್ಠಾನದಿಂದ ಅತ್ಯುತ್ತಮ ಅನುವಾದಿತ ಕೃತಿಗಳಿಗೆ ‘ಶಾ.ಬಾಲುರಾವ್ ಅನುವಾದ ಪ್ರಶಸ್ತಿ’ ಮತ್ತು  ಯುವ ಲೇಖಕರ ಅತ್ಯುತ್ತಮ ಕೃತಿಗೆ ‘ಶಾ.ಬಾಲುರಾವ್ ಯುವ ಬರಹಗಾರ’ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ಪ್ರತಿಷ್ಠಾನದಿಂದ 2024ರ ಶಾ.ಬಾಲುರಾವ್ಅನುವಾದ ಪ್ರಶಸ್ತಿಗೆ ನಟರಾಜ್ ಹೊನ್ನವಳ್ಳಿ ಅವರನ್ನು ಮತ್ತು ಶಾ.ಬಾಲುರಾವ್ ಯುವ ಬರಹಗಾರ ಪ್ರಶಸ್ತಿಗೆ ಆರ್. ದಿಲೀಪ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ದಿಲೀಪ್ ಕುಮಾರ್ ಅವರ ‘ಶಬ್ದ ಸೋಪಾನ’ ಕೃತಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಗಳು ತಲಾ 25,000 ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ” ಎಂದು ಮಾಹಿತಿ ನೀಡಿದ್ದಾರೆ.

“ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನ ಸಭಾಂಗಣದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲರು ಹಾಗೂ ಅನುವಾದಕರು ಆದ ವಿ. ಕೃಷ್ಣಮೂರ್ತಿರಾವ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ಬಸವರಾಜ ಕಲ್ಗುಡಿ, ಕಮಲಿನಿ ಶಾ. ಬಾಲುರಾವ್ ಅವರು ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

“ಅನುವಾದ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಡಾ. ಡಾ.ಬಸವರಾಜ ಕಲ್ಗುಡಿ, ಪ್ರೊ. ಕೃಷ್ಣಮೂರ್ತಿರಾವ್‌ ವಿ ಹಾಗೂ ಯುವ ಬರಹಗಾರ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ.ಪದ್ಮನಿ ನಾಗರಾಜು ಹಾಗೂ ಡಾ. ಡಿ. ಭರತ್‌ ಇದ್ದರು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ...

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ...

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...