ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ದೆಹಲಿ ಹೈಕೋರ್ಟ್

Date:

ದೆಹಲಿ ಪೊಲೀಸರು ದಾಖಲಿಸಿರುವ ದ್ವೇಷದ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

- Advertisement -

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ಖಾನ್‌ಗೆ ಕೋರ್ಟ್ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ರಾಷ್ಟ್ರ ರಾಜಧಾನಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದೆ.ಇದಲ್ಲದೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಖಾನ್ ಕೋರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಎಂಬ ಗ್ರೇಟ್ ಇಂಡಿಯನ್ ವಾಶಿಂಗ್ ಮಶೀನ್!

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...