ಮುಖ್ಯವಾಹಿನಿಗೆ ಬರುವುದಕ್ಕೂ ಮುನ್ನ ಸರ್ಕಾರಕ್ಕೆ ಪತ್ರ ಬರೆದ ನಕ್ಸಲ್ ಹೋರಾಟಗಾರರು; ಅವರ ಶರತ್ತುಗಳಿವು

Date:

ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಸರ್ಕಾರ ಪ್ರಯತ್ನದ ಭಾಗವಾಗಿ ಆರು ಮಂದಿ ಮಾವೋವಾದಿಗಳು ಶರಣಾಗತಿಗೆ ಮುಂದಾಗಿದ್ದಾರೆ. ಬುಧವಾರ ಚಿಕ್ಕಮಗಳೂರಿನಲ್ಲಿ ಸರ್ಕಾರದ ಎದುರು ಶರಣಾಗಲಿದ್ದಾರೆ ಎಂದು ವರದಿಯಾಗಿದೆ. ಶರಣಾಗತಿಗೂ ಮುನ್ನ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿರುವ ನಕ್ಸಲ್ ಹೋರಾಟಗಾರರು ಹಲವು ಬೇಡಿಕೆಗಳನ್ನಿಟ್ಟಿದ್ದಾರೆ.

- Advertisement -

ಮಾವೋವಾದಿ ಹೋರಾಟದಲ್ಲಿದ್ದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಎದುರು ಶರಣಾಗಿದ್ದಾರೆ. ಸರ್ಕಾರಗಳಿಗೆ ಬರೆದ ಪತ್ರದಲ್ಲಿ, ನಿರುದ್ಯೋಗ ಹೋಗಲಾಡಿಸಲು ಉದ್ಯೋಗ ಸೃಷ್ಟಿಗೆ ಆಧ್ಯತೆ ಕೊಡಬೇಕು, ತಮ್ಮ ವಿರುದ್ಧದ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸಬೇಕು ಹಾಗೂ ವಿಕ್ರಂಗೌಡ ಎನ್​​ಕೌಂಟರ್​​ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು ಎಂಬುದು ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ದೇಶದ ಪ್ರಸ್ತುತ ಸಮಯದಲ್ಲಿ ಚಳುವಳಿಗಳು ಪಡೆಯುತ್ತಿರುವ ರೂಪಾಂತರ, ಸಾಮಾಜಿಕ ಅಗತ್ಯಗಳನ್ನು ಗಮನಿಸಿ ಸಶಸ್ತ್ರ ಹೋರಾಟ ಮಾರ್ಗವನ್ನು ತ್ಯಜಿಸಿ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಮರಳುವುದು ಉತ್ತಮವೆಂದು ನಾವು ಅರಿತಿದ್ದೇವೆ. ಯಾವುದೇ ಒತ್ತಡವಿಲ್ಲದೆ, ಸ್ವ-ಇಚ್ಛೆಯಿಂದ ಮುಖ್ಯವಾಹಿನಿಗೆ ಬರಲು ಬಯಸಿದ್ದೇವೆ” ಎಂದು ಹೇಳಿದ್ದಾರೆ. ಜೊತೆಗೆ ಕೆಲವು ಬೇಡಿಕೆಗಳನ್ನು ಸರ್ಕಾರಗಳ ಮುಂದಿಟ್ಟಿದ್ದಾರೆ.

“ನಾವು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯುತವಾಗಿ ನಡೆಯಬೇಕು. ನಮ್ಮ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕೆ ದಕ್ಕೆಯಾಗುವಂತೆ ಯಾವುದೇ ಒತ್ತಡಗಳನ್ನು ಹೇರಬಾರದು. ನಾವು ಜನಪರ ಹೋರಾಟವನ್ನು ಕೈಬಿಡುವುದಿಲ್ಲ. ಪ್ರಜಾತಾಂತ್ರಿಕ ಚಳುವಳಿಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆ ಒಡ್ಡಬಾರದು. ನಮ್ಮ ಬದುಕನ್ನು ಜನತೆಗೆ ಮುಡುಪಿಟ್ಟಿದ್ದೇವೆ. ಜನ ಹಿತಕ್ಕಾಗಿಯೇ ಬದುಕಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಮಣಿಪುರ ಹೊತ್ತಿ ಉರಿದಿದ್ದಕ್ಕೆ ಪ್ರಧಾನಿ ಮೋದಿ ಏಕೆ ಕ್ಷಮೆ ಕೇಳಬೇಕು?

“ನಾವು ಸಶಸ್ತ್ರ ಹೋರಾಟ ತ್ಯಜಿಸಿ ಬಂದ ಬಳಿಕ, ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು. ನಮ್ಮ ಮೇಲೆ ಹಾಕಿರುವ ಹಲವಾರು ಪ್ರಕರಣಗಳು ಸುಳ್ಳು ಪ್ರಕರಣಗಳಾಗಿವೆ. ಅವೆಲ್ಲವನ್ನೂ ರದ್ದುಗೊಳಿಸಬೇಕು. ಸುಳ್ಳು ಪ್ರಕರಣಗಳ ಜಾಲದಿಂದ ನಮಗೆ ಮುಕ್ತಿ ಸಿಗಬೇಕು” ಎಂದು ಒತ್ತಾಯಿಸಿದ್ದಾರೆ.

“ಮುಖ್ಯವಾಹಿನಿಗೆ ಬಂದ ಬಳಿಕ, ಜಾಮೀನು ಪಡೆದ ಹೊರಬರಲು ಸಹಕಾರ ನೀಡಬೇಕು. ಎಲ್ಲ ಪ್ರಕರಣಗಳನ್ನು ಒಂದೇ ನ್ಯಾಯಾಲಯದ ಅಡಿ ತಂದು ತ್ವರಿತ ವಿಚಾರಣೆ ನಡೆಸಬೇಕು. ಪ್ರಕರಣಗಳ ವಿಚಾರಣೆಗೆ ಕಾನೂನು ಹಾಗೂ ಆರ್ಥಿಕ ನೆರವನ್ನು ಸರ್ಕಾರವೇ ಭರಿಸಬೇಕು. ಹೊರ ಬಂದ ನಂತರ ನಮ್ಮ ಜೀವನಕ್ಕೆ ದಾರಿ ಏನು ಎಂಬುದರ ಕುರಿತು ಸ್ಪಷ್ಟತೆ ಬೇಕು” ಎಂದು ಕೇಳಿದ್ದಾರೆ.

“ವಿಕ್ರಮಗೌಡ ಅವರ ಎನ್​ಕೌಂಟರ್​ ಹತ್ಯೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....