ಎಂಎಲ್‌ಸಿ ನಸೀರ್ ಅಹ್ಮದ್‌ ‘ದಿವಾಳಿ’ ಘೋಷಣೆ: ಸದನ ಸದಸ್ಯತ್ವ ಕಳೆದುಕೊಳ್ಳುವ ಭೀತಿ!

Date:

ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್‌ನ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ನಸೀರ್ ಅಹ್ಮದ್ ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಎಲ್‌ಎಂಸಿ ಸ್ಥಾನವನ್ನು ಕಳೆದುಕೊಳ್ಳುವ ಭೀತಿ ನಸೀರ್‌ಗೆ ಎದುರಾಗಿದೆ.

- Advertisement -

ಸುನಿಲ್ ಕುಮಾರ್ ಅಗರ್ವಾಲ್ (ನ್ಯಾಯಾಂಗ ಸದಸ್ಯ) ಮತ್ತು ರಾಧಾಕೃಷ್ಣ ಶ್ರೀಪಾದ (ತಾಂತ್ರಿಕ ಸದಸ್ಯ) ಅವರನ್ನೊಳಗೊಂಡ NCLTಯ ಬೆಂಗಳೂರು ಪೀಠವು ಜೂನ್ 8ರಂದು IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ನಸೀರ್ ಅಹ್ಮದ್ ರಾಜೀನಾಮೆ ಪಡೆದರೆ ಉಗ್ರ ಹೋರಾಟದ ಎಚ್ಚರಿಕೆ: ಎನ್.ಅಂಬರೀಷ್

2019ರಲ್ಲಿಯೇ ಈ ದಿವಾಳಿ ಪ್ರಕ್ರಿಯೆ ಆರಂಭವಾಗಿದೆ. ನಸೀರ್ ಅವರು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕಂಪನಿಯ ಹಿಂದಿನ ನಿರ್ದೇಶಕರಾಗಿ ಸಾಲಕ್ಕೆ ವೈಯಕ್ತಿಕ ನಾಮಿನಿಗಳಾಗಿದ್ದ ಅವರ ಪತ್ನಿ ನುಝತ್ ಆಯಿಷಾ ನಸೀರ್ ಮತ್ತು ಮಗ ಅವೈಜ್ ಅಹ್ಮದ್ ಅವರನ್ನೂ NCLT ‘ದಿವಾಳಿ’ ಎಂದು ಘೋಷಿಸಿದೆ.

ಎಂಎಲ್‌ಸಿ ಸ್ಥಾನ ಕಳೆದುಕೊಳ್ಳುವ ಭೀತಿ

ನಸೀರ್ ‘ದಿವಾಳಿ’ ಎಂದು ಘೋಷಿಸಲಾಗಿರುವ ಕಾರಣ ಐಬಿಸಿಯ ಸೆಕ್ಷನ್ 140 ಮತ್ತು ಸಂವಿಧಾನದ ಆರ್ಟಿಕಲ್ 191(1)(ಸಿ) ಅಡಿಯಲ್ಲಿ ಅವರು ಎಂಎಲ್‌ಸಿ ಹುದ್ದೆಯಿಂದ ಅನರ್ಹರಾಗುತ್ತಾರೆ. ಇನ್ನು ಈಗಾಗಲೇ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ನಸೀರ್ ಅವರನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಲಾಗಿತ್ತು.

ಇದನ್ನು ಓದಿದ್ದೀರಾ? ಕೋಲಾರ | ‘ನಸೀರ್ ಅಹ್ಮದ್‌ರನ್ನು ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿಸಿ’ – ಮುಸ್ಲಿಂ ಮುಖಂಡರ ಪ್ರತಿಭಟನೆ

IBCಯ ಸೆಕ್ಷನ್ 140 ಪ್ರಕಾರ ದಿವಾಳಿ ಎಂದು ಘೋಷಣೆಯಾದವರು ಸಾರ್ವಜನಿಕ ಸೇವಕರು (ಎಂಎಲ್‌ಸಿ, ಶಾಸಕ ಮೊದಲಾದ ಸ್ಥಾನ) ನೇಮಕಗೊಳ್ಳಲು ಅಥವಾ ಕಾರ್ಯನಿರ್ವಹಿಸಲು ಅನರ್ಹರು. ಹಾಗೆಯೇ ಯಾವುದೇ ಟ್ರಸ್ಟ್, ಎಸ್ಟೇಟ್ ಪ್ರತಿನಿಧಿಯಾಗಿ ನೇಮಕಗೊಳ್ಳಲು ಅಥವಾ ಕಾರ್ಯನಿರ್ವಹಿಸಲು, ಯಾವುದೇ ಸರ್ಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸಲು, ಸ್ಥಳೀಯ ಪ್ರಾಧಿಕಾರದ ಸದಸ್ಯರಾಗಿ ಚುನಾಯಿತರಾಗುವ ಅರ್ಹತೆಯನ್ನು ಹೊಂದಿರುವುದಿಲ್ಲ.

ಇನ್ನು ಯಾವುದೇ ಕಂಪನಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುವುದನ್ನು ಅಥವಾ ಬಡ್ತಿ, ರಚನೆ ಅಥವಾ ನಿರ್ವಹಣೆಯಲ್ಲಿ ಭಾಗಿಯಾಗುವ ಹಕ್ಕೂ ನಸೀರ್ ಅವರಿಗೆ ಇನ್ಮುಂದಿಲ್ಲ. ಇನ್ನು ವೃತ್ತಿಪರರಾದ ರವೀಂದ್ರ ಬೆಲೆಯೂರ್ ಅವರನ್ನು ದಿವಾಳಿತನ ಟ್ರಸ್ಟಿ (BT) ಆಗಿ NCLT ನೇಮಿಸಿದೆ. ಈ ದಿವಾಳಿತನ ಟ್ರಸ್ಟಿಯ ಅನುಮತಿಯಿಲ್ಲದೆ ನಸೀರ್ ಸಾಲ ಪಡೆಯುವಂತಿಲ್ಲ. ವಹಿವಾಟುಗಳ ಮೊದಲು ತಾನು ದಿವಾಳಿ ಎಂದು ಘೋಷಿತನಾದವನು ಎಂದು ಪಾಲುದಾರರಿಗೆ ತಿಳಿಸುವುದು ಕಡ್ಡಾಯವಾಗಿದೆ. ಅನುಮತಿಯಿಲ್ಲದೆ ವಿದೇಶ ಪ್ರವಾಸ ಮಾಡುವಂತಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....