ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗಿಲ್ಲ: ಸಿಎಂ ಡಿ ಕೆ ಶಿವಕುಮಾರ್

Date:

“ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗೆ ಇಲ್ಲ. ಅವರಿಗೆ ಆಶಾ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ನೀಡಬೇಕಿರುವ ಹಣದ ಬಗ್ಗೆ ಧ್ವನಿ ಎತ್ತಲಿ. ಇದುವರೆಗೂ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಕಿಡಿಕಾರಿದರು.

- Advertisement -

ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಆಶಾ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಎನ್ ಡಿಎ ನಾಯಕರ ಹೇಳಿಕೆಗಳ ಬಗ್ಗೆ ಕೇಳಿದಾಗ, “ನಾನು ಎನ್ ಡಿಎನ ಯಾವುದೇ ನಾಯಕರ ಹೇಳಿಕೆಗೆ ಉತ್ತರ ನೀಡುವುದಿಲ್ಲ. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಈವರೆಗೂ 1 ರೂ. ಹೆಚ್ಚಳ ಮಾಡಿಲ್ಲ. ಅವರ ವೇತನ ಹೆಚ್ಚಳ ಮಾಡಿರುವುದು ನಾವು. ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ. ಆಶಾ ಕಾರ್ಯಕರ್ತೆಯರ ಯೋಜನೆ ತಂದಿದ್ದು ಮನಮೋಹನ್ ಸಿಂಗ್ ಅವರು. ಆಶಾ ಕಾರ್ಯಕರ್ತೆಯರ ಪರವಾಗಿ ಕಾಂಗ್ರೆಸ್ ಸರ್ಕಾರ ಇದೆ ಎಂದು ಬಿಜೆಪಿಗೆ ಅವರ ಬಗ್ಗೆ ದ್ವೇಷ ಇದೆ. ಹೀಗಾಗಿ ನಾನು ಹೆಚ್ಚು ಮಾತನಾಡುತ್ತಿಲ್ಲ” ಎಂದರು.

“ನಿಮ್ಮ ಮೇಲೆ ನಮಗೆ ನಂಬಿಕೆ ಇದೆ. ನಮಗೆ ಅವಕಾಶ ಕೊಟ್ಟರೆ ನಾವು ಹೋಗಿ ನಮ್ಮ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅನೇಕ ಆಶಾ ಕಾರ್ಯಕರ್ತೆಯರು ಕರೆ ಹಾಗೂ ಸಂದೇಶದ ಮೂಲಕ ನನಗೆ ಹೇಳುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಲ್ಲೇ ಬಿರುಕು ತರಬಾರದು ಎಂಬ ಉದ್ದೇಶಕ್ಕೆ ನಾನು ಕೂಡ ಮೌನವಾಗಿದ್ದೇನೆ. ನಿಮ್ಮ ಕಷ್ಟಗಳ ಬಗ್ಗೆ ನಮಗೆ ಅರಿವಿದೆ. ನೀವು ನಿಮ್ಮ ಕೆಲಸದಲ್ಲಿ ನಿರತರಾಗಿ. ನೀವು ಸೇವೆಯ ಉದ್ದೇಶದಿಂದ ಬಂದಿದ್ದು, ಹೋರಾಟಕ್ಕಲ್ಲ. ಹೋರಾಟ ಎಲ್ಲರ ಹಕ್ಕು ಇದೆ. ನಾವು ನಿಮ್ಮ ಜತೆ ಚರ್ಚೆ ಮಾಡುತ್ತೇನೆ. ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರು ನಿಮ್ಮ ಜತೆ ಏನು ಮಾತನಾಡಿದ್ದಾರೆ ಎಂಬ ಅರಿವು ನನಗಿದೆ. ಆದರೆ ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಅದು ಸಾಧ್ಯವಿಲ್ಲ. ನನ್ನ ಮೇಲೆ ವಿಶ್ವಾಸ ಇಟ್ಟರೆ ನಾನು ಖಂಡಿತವಾಗಿ ಸಹಾಯ ಮಾಡುವೆ” ಎಂದು ಭರವಸೆ ನೀಡಿದರು.

ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ರಾಜಕಾರಣ ಮಾಡುವವರು ರಾಜಕಾರಣ ಮಾಡಲಿ. ನನ್ನ ಅಭ್ಯಂತರವಿಲ್ಲ. ನನಗೆ ಈ ವಿಚಾರದಲ್ಲಿ ರಾಜಕಾರಣದ ಅವಶ್ಯಕತೆ ಇಲ್ಲ. ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು. ಅವರ ಹಿತದ ಬಗ್ಗೆ ನಮಗೆ ಕಾಳಜಿ ಇದೆ. ನೀವು ಪ್ರತಿಭಟನೆ ಕೈಬಿಡಿ ಎಂದು ನಾನು ಮತ್ತೊಮ್ಮೆ ವಿನಯದಿಂದ ಮನವಿ ಮಾಡುವೆ. ನಾನು ಎಲ್ಲರನ್ನು ಕರೆದು ತೀರ್ಮಾನ ಮಾಡುವೆ” ಎಂದರು.

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಿರಿ ಎಂದು ಕೇಳಿದಾಗ, “ಹೌದು, ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ನಾವು ನುಡಿದಂತೆ ನಡೆಯುತ್ತೇವೆ. ಕೇಂದ್ರ ಸರ್ಕಾರ ತನ್ನ ಪಾಲಿನ ಮೊತ್ತವನ್ನು ಹೆಚ್ಚಳ ಮಾಡಲು ಅವರು ಒತ್ತಡ ಹಾಕಲಿ” ಎಂದು ಸವಾಲೆಸೆದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಜನಗಣತಿಗೆ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಇತ್ಯಾದಿ ಬಾಹ್ಯ...

ಶಿವಮೊಗ್ಗ |ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ ಅಗತ್ಯ: ಉಪವಿಭಾಗಾಧಿಕಾರಿ ಡಾ. ಮೈತ್ರಿ ಕರೆ

ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರ ಕಲುಷಿತತೆಯನ್ನು ತಡೆಗಟ್ಟಲು ಆಹಾರ...

ವಿಜಯಪುರ |ಸಂವಿಧಾನವೇ ಭಾರತದ ನಿಜವಾದ ಹಬ್ಬ ;ನ್ಯಾಯಾಧೀಶ ಅರವಿಂದ ಹಾಗರಗಿ

ಜಾತಿ, ಧರ್ಮದ ಭೇದ ಮರೆತು ಒಗ್ಗಟ್ಟಿನಿಂದ ಬದುಕುವ ಸಂದೇಶ ಸಾರುವ ಮೂಲಕ...

ವಿಜಯಪುರ |ಕನಕದಾಸ ಚಿಂತನೆ ಜಾತಿ ಮೀರಿದ ಮಾನವೀಯತೆಯ ಸಂದೇಶ; ಡಾ ಔದ್ರಾಮ

ಕನಕದಾಸ ಭಕ್ತಿ, ಸಮಾನತೆ ಮತ್ತು ಮಾನವೀಯತೆಯ ಸಂದೇಶಗಳನ್ನು ಜಯಂತಿ ಆಚರಣೆಗೆ ಸೀಮಿತಗೊಳಿಸದೆ,...