ನೀಟ್ ಪರೀಕ್ಷೆ ದಿನ ಸಮಾವೇಶ: ತೇಜಸ್ವಿ ಸೂರ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

Date:

ನೀಟ್ (NEET) ಪರೀಕ್ಷೆಯ ದಿನವೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜಿಸಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವಂತಾಯಿತು ಎಂದು ಆರೋಪಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

- Advertisement -

ಸಂಸದರ ಆರೋಪಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂಬುದಕ್ಕಾಗಿ ತೇಜಸ್ವಿ ಸೂರ್ಯ ಮೊದಲು ಕ್ಷಮೆಯಾಚಿಸಬೇಕು. ಕೇವಲ ಮೂವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿರುವುದಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರವನ್ನು ದೂಷಿಸುವುದಾದರೆ, ದೆಹಲಿ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಾರಲ್ಲಾ; ಹಾಗಾದರೆ ಅಲ್ಲಿನ ರಾಜ್ಯ ಸರ್ಕಾರಗಳೇ ಇದಕ್ಕೆ ಹೊಣೆಯೇ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಬೆಂಗಳೂರಿನಲ್ಲಿ ಒಟ್ಟು 3 ವಿದ್ಯಾರ್ಥಿಗಳು ಮಾತ್ರ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಅವರಲ್ಲಿ ಒಬ್ಬರು ಮಾಗಡಿ ರಸ್ತೆಯಿಂದ ತಡವಾಗಿ ಬಂದರು, ಮತ್ತೊಬ್ಬರು ಹಳೆಯ ಪರೀಕ್ಷಾ ಪ್ರವೇಶ ಪತ್ರ (ಹಾಲ್ ಟಿಕೆಟ್) ತಂದಿದ್ದರು ಮತ್ತು ಇನ್ನೊಬ್ಬರು ಆರ್.ಟಿ. ನಗರದಿಂದ ತಡವಾಗಿ ಬಂದಿದ್ದರು. ಬೆಳಿಗ್ಗೆ 11 ಗಂಟೆಗೆ ಗೇಟ್‌ಗಳು ತೆರೆಯುತ್ತವೆ. ಮಧ್ಯಾಹ್ನ 1:30ರ ಒಳಗೆ ವರದಿ ಮಾಡಿಕೊಳ್ಳಬೇಕು. ಅಲ್ಲಿ ಬಯೋಮೆಟ್ರಿಕ್ಸ್ ಮತ್ತು ಕಟ್ಟುನಿಟ್ಟಿನ ನಿಯಮಗಳಿರುತ್ತವೆ. ಆದರೂ, ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕರ್ನಾಟಕ ಸರ್ಕಾರವು ಮುಂಚಿತವಾಗಿಯೇ ಸಂಚಾರ ಸಲಹೆ ಹಾಗೂ ಸಹಾಯವಾಣಿಯನ್ನು ಬಿಡುಗಡೆ ಮಾಡಿತ್ತು. ಯಾವ ಬಿಜೆಪಿ ಸರ್ಕಾರ ಈ ರೀತಿ ಮಾಡಿದೆ ಎಂಬುದನ್ನು ತೋರಿಸಿ” ಎಂದು ಖರ್ಗೆ ಸವಾಲು ಹಾಕಿದರು.

ಇದನ್ನು ಓದಿದ್ದೀರಾ? ಟಿ20 ಮಹಿಳಾ ವಿಶ್ವಕಪ್‌: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 95 ರನ್‌ಗಳ ಭರ್ಜರಿ ಜಯ

ಬೆಂಗಳೂರಿನ ಸಂಚಾರ ದಟ್ಟಣೆಯ ಕುರಿತು ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯ ಸಮಸ್ಯೆ ಇರುವುದು ಎಲ್ಲರಿಗೂ ತಿಳಿದಿರುವ ವಾಸ್ತವ. ಅದಕ್ಕಾಗಿಯೇ ನಾವು ಮೊದಲೇ ಸಂಚಾರ ಸಲಹೆಯನ್ನು ನೀಡಿದ್ದೆವು. ನಾವು ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತಿದ್ದರೆ ನೀವು ನಮ್ಮನ್ನು ದೂಷಿಸಬಹುದಿತ್ತು. ನಮ್ಮ ಸಹಾಯವಾಣಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆದಿದ್ದಾರೆ. ಆದರೂ, ಒಬ್ಬನೇ ಒಬ್ಬ ವಿದ್ಯಾರ್ಥಿ ಪರೀಕ್ಷೆ ತಪ್ಪಿಸಿಕೊಂಡರೂ ಅದು ದುರದೃಷ್ಟಕರವೇ. ನಾವು ಅವರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೆ, ವಿದ್ಯಾರ್ಥಿಯೊಬ್ಬ ಸರಿಯಾದ ಹಾಲ್ ಟಿಕೆಟ್ ತರದಿದ್ದರೆ ಅದಕ್ಕೆ ನಾನು ಹೇಗೆ ಹೊಣೆಯಾಗುತ್ತೇನೆ? ಮಾಗಡಿಯಿಂದ ವಿದ್ಯಾರ್ಥಿ ಸರಿಯಾದ ಬಸ್ ಹಿಡಿಯದಿದ್ದರೆ ಸರ್ಕಾರವನ್ನು ಹೊಣೆ ಮಾಡಬಹುದೇ?” ಎಂದು ಪ್ರಶ್ನಿಸಿದರು.

“ನಿಮಗೆ ಇದರಲ್ಲೂ ರಾಜಕೀಯ ಮಾಡಬೇಕು ಎಂದಿದ್ದರೆ, ನಾವೂ ಅದಕ್ಕೆ ಸಿದ್ಧರಿದ್ದೇವೆ. ಆದರೆ ಅದಕ್ಕೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ನೀವು ಕ್ಷಮೆಯಾಚಿಸಿ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಅಧ್ಯಕ್ಷರು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಕೊಡಿಸಿ. ಆಮೇಲೆ ಬಂದು ನನ್ನೊಂದಿಗೆ ಮಾತನಾಡಿ” ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...