ಯುಜಿ ನೀಟ್‌ ಕೌನ್ಸಿಲಿಂಗ್‌: ನೋಂದಣಿ ಆರಂಭ

Date:

2025ರಲ್ಲಿ ಯುಜಿ ನೀಟ್‌ ಪರೀಕ್ಷೆ ಬರೆದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆನ್‌ಲೈನ್‌ ಕೌನ್ಸಿಲಿಂಗ್‌ ಮೂಲಕ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ (ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ)ನ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ನಿನ್ನೆ(ಜುಲೈ 5) ಅಧಿಸೂಚನೆಯೊಂದನ್ನು ಪ್ರಕಟಿಸಿದೆ.

- Advertisement -

ಈಗಾಗಲೇ ಯುಜಿಸಿಇಟಿ 2025 ಪರೀಕ್ಷೆ ಬರೆದು ಅಥವಾ ನೋಂದಣಿ ಮಾಡಿ, ದಾಖಲೆಗಳ ಪರಿಶೀಲನಾ ಚೀಟಿ ಡೌನ್‌ಲೋಡ್‌ ಮಾಡಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿರುವ ‘ನೀಟ್‌ ರೋಲ್‌ ನಂಬರ್‌ ದಾಖಲಾತಿ’ ಲಿಂಕ್‌ ಬಳಸಿ, ಯುಜಿ ನೀಟ್‌ ರೋಲ್‌ ಸಂಖ್ಯೆಯನ್ನು ನಮೂದಿಸಿ, ಯುಜಿ ನೀಟ್‌ ಕೌನ್ಸಿಲಿಂಗ್‌ಗೆ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಜುಲೈ 8ರ ಬೆಳಿಗ್ಗೆ 11.00ವರೆಗೆ ನೋಂದಣಿಗೆ ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನು ಓದಿದ್ದೀರಾ? ನೀಟ್-ಯುಜಿ 2024 | ವಿವಾದ ನಡುವೆಯೇ ಆಗಸ್ಟ್‌ 14ರಿಂದ ಕೌನ್ಸೆಲಿಂಗ್

ಯುಜಿಸಿಇಟಿ-2025ಕ್ಕೆ ಈಗಾಗಲೇ ನೋಂದಣಿ ಮಾಡಿರುವ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್‌ನಲ್ಲಿ ನೀಟ್ ರೋಲ್‌ ಸಂಖ್ಯೆಯನ್ನು ನಮೂದಿಸಿದ ನಂತರ ಅರ್ಜಿಯನ್ನು ಡೌನ್‌ಲೋಡ್‌ ಮಾಡಿ, ಮುದ್ರಿತವಾಗಿರುವ ನೀಟ್‌ ರೋಲ್‌ ಸಂಖ್ಯೆಯನ್ನು ಪರಿಶೀಲಿಸಿಕೊಳ್ಳಬೇಕು. ಬಳಿಕ ಯುಜಿ ನೀಟ್‌ ವೆರಿಫಿಕೇಶನ್‌ ಸ್ಲಿಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು. ಈಗಾಗಲೇ ಆನ್‌ಲೈನ್ ಮುಖಾಂತರ ಪರಿಶೀಲನೆ ಮಾಡಿರುವ ಹಿನ್ನಲೆಯಲ್ಲಿ ಯುಜಿ ನೀಟ್‌ಗೆ ಪ್ರತ್ಯೇಕ ದಾಖಲೆಗಳ ಪರಿಶೀಲನೆ ಇರುವುದಿಲ್ಲ ಹಾಗೂ ಹೊಸದಾಗಿ ಕ್ಲೇಮ್‌ ಮಾಡಲು ಅವಕಾಶವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಎನ್‌ಆರ್‌ಐ ವಾರ್ಡ್ ಅಭ್ಯರ್ಥಿಗಳಿಗೆ ಸೂಚನೆ:

ಯುಜಿ ಸಿಇಟಿ-2025ರ ಅರ್ಜಿಯಲ್ಲಿ ಎನ್‌ಆರ್‌ಐ ವಾರ್ಡ್ ಕ್ಲೇಮ್ಸ್ ಇರುವ ಎಲ್ಲಾ ಅಭ್ಯರ್ಥಿಗಳು, ಪ್ರಾಧಿಕಾರದ ವೆಬ್ಸೈಟ್‌ನ ನಿಗದಿತ ಲಿಂಕ್‌ ಬಳಸಿ, ನೀಟ್ ರೋಲ್ ನಂಬರ್‌ ನಮೂದಿಸಿದ ನಂತರ ಕ್ಲೇಮ್‌ಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಮಲ್ಲೇಶ್ವರಂ, ಬೆಂಗಳೂರು ಇಲ್ಲಿ ಆಫ್‌ಲೈನ್ ವೆರಿಫಿಕೇಶನ್‌ಗೆ ಎಲ್ಲಾ ಮೂಲ ದಾಖಲೆಗಳೊಂದಿಗೆ(ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ) ದಾಖಲಾತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು. ಎನ್‌ಆರ್‌ಐ ವಾರ್ಡ್‌ ದಾಖಲೆಗಳ ಪರಿಶೀಲನೆಯು ಜುಲೈ 8ರಿಂದ ಜುಲೈ 10ರ ತನಕ ನಡೆಯಲಿರುವುದು.

ಸೈಂಟ್‌ ಜಾನ್ಸ್‌ ಮೆಡಿಕಲ್‌ ಕಾಲೇಜು ಮೀಸಲಾತಿ ಪರಿಶೀಲನೆ:

ಸೈಂಟ್‌ ಜಾನ್ಸ್‌ ಮೆಡಿಕಲ್‌ ಕಾಲೇಜಿನಲ್ಲಿ ಕ್ಯಾಟಗರಿ 2ರಿಂದ 8 ರ ತನಕ ಕ್ಲೇಮ್‌ ಮಾಡಿ, ಮೀಸಲಾತಿ ಬಯಸುವ ಯುಜಿ ನೀಟ್‌ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗಾಗಿ ಮೆಡಿಕಲ್‌ ಕಾಲೇಜು ಕೌನ್ಸಿಲ್‌ ಕೊಠಡಿ, ನೆಲ ಅಂತಸ್ತು, ಸೈಂಟ್‌ ಜಾನ್ಸ್‌ ಮೆಡಿಕಲ್‌ ಕಾಲೇಜು, ಕೋರಮಂಗಲ, ಬೆಂಗಳೂರು ಇಲ್ಲಿಗೆ ಜುಲೈ 9 ಅಥವಾ 10ರಂದು ಎಲ್ಲ ಅಗತ್ಯ ಮೂಲ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಬೇಕು. ಕ್ಯಾಟಗರಿ 1 ಮತ್ತು 9 ಅಭ್ಯರ್ಥಿಗಳು ಪರಿಶೀಲನೆಗೆ ಹಾಜರಾಗಬೇಕಾಗಿಲ್ಲ.

ಹೊಸದಾಗಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ:

ಯುಜಿ ಸಿಇಟಿ ನೋಂದಣಿ ಮಾಡದಿರುವ ಯುಜಿ ನೀಟ್‌ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಹೊಸದಾಗಿ ನೋಂದಣಿ ಮಾಡುವ ವಿಧಾನ, ಯಾವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು ಮತ್ತು ಇತರೆ ವಿವರವಾದ ಸೂಚನೆಗಳನ್ನು ಸದ್ಯದಲ್ಲಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಯುಜಿ ಸಿಇಟಿ ಮತ್ತು ಯುಜಿ ನೀಟ್‌ ವಿದ್ಯಾರ್ಥಿಗಳು ಪ್ರತಿ ಕ್ಷಣದ ಮಾಹಿತಿಗಳಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ ಅನ್ನು ಕನಿಷ್ಟ ದಿನಕ್ಕೆರಡು ಬಾರಿ ನೋಡಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...