ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರೂ: ಸಿಎಂ ಸಿದ್ದರಾಮಯ್ಯ

Date:

  • ‘ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಜವಾಹರಲಾಲ್ ನೆಹರೂ’
  • ‘ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರು ಬದುಕಿನ ಮೌಲ್ಯಗಳು’

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರು ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

“ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು” ಎಂದು ವಿವರಿಸಿದರು.

“ನೆಹರೂ ಅವರು ಪ್ರಧಾನಿಯಾಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು. ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು. ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ? ಈ ಸಾಧನೆಗಳನ್ನು ಕುಮಾರಸ್ವಾಮಿಗೆ ಸಹಿಸಲು ಆಗುತ್ತಿಲ್ಲ. ಇದೇ ಕಾರಣಕ್ಕೇ ಅವರು ಪರದಾಡುತ್ತಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿರುಗೇಟು ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಕಮಲಾ ಹಂಪನಾ ಅಂತಿಮ ದರ್ಶನ ಪಡೆದ ಸಿಎಂ

"ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು...

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್, ಬೆಟ್ಟಿಂಗ್ ಚಟುವಟಿಕೆಗೆ ಹೈಕೋರ್ಟ್ ನಿಷೇಧ

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ(ಬಿಟಿಸಿ) ಆನ್‌ ಕೋರ್ಸ್‌, ಆಫ್‌ ಕೋರ್ಸ್‌ ರೇಸ್‌ ಹಾಗೂ...

ಸೂರಜ್ ರೇವಣ್ಣ ಪ್ರಕರಣ | ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ: ಸಚಿವ ಪರಮೇಶ್ವರ್

ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟ ಹಾಗೆ...

ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

ನೀಟ್‌ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ...