ಪೊಲೀಸ್ ಸಿಬ್ಬಂದಿಗೆ ನೂತನ ಪೀಕ್ ಕ್ಯಾಪ್ ವಿತರಣೆ

Date:

56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ‌ ಹೊಸದಾಗಿ ನೀಡಲಾಗುತ್ತಿರುವ ಪಿ-ಕ್ಯಾಪ್‌ನಲ್ಲಿ ಬದಲಾವಣೆ ಅಷ್ಟೇ ಅಲ್ಲದೆ ದಕ್ಷತೆ‌ ಮೆರೆಯುವ ಮೂಲಕ ವೃತ್ತಿಯಲ್ಲಿ ಬದಲಾವಣೆಯಾಗಬೇಕು. ಈ ಮೂಲಕ ಸಮಾಜದಲ್ಲಿ‌ ನಡೆಯುವ ಅಪರಾಧಗಳನ್ನು ಕಡಿಮೆ ಮಾಡಬೇಕು ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

- Advertisement -

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಹಲವು ವರ್ಷಗಳಿಂದ ಕಾನ್‌ಸ್ಟೇಬಲ್​ಗಳು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಬದಲು ಪಿ ಕ್ಯಾಪ್ ಆಯ್ಕೆ ಮಾಡಿದ್ದು ನಾನೇ. 56 ವರ್ಷಗಳಿಂದ ಇದ್ದ ಕ್ಯಾಪನ್ನು ಇಂದು ಬದಲಾವಣೆ ಮಾಡಿದ್ದೇನೆ. ದಕ್ಷತೆಯಿಂದ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ.‌ ಕ್ಯಾಪ್ ಬದಲಾವಣೆಯಷ್ಟೇ ಅಲ್ಲದೆ, ವೃತ್ತಿಯಲ್ಲಿಯೂ ದಕ್ಷತೆಯಿಂದ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆ‌ ಕಾಣಬೇಕು” ಎಂದು ತಿಳಿಸಿದರು.

ಕರ್ನಾಟಕದಲ್ಲಿ ಸ್ಲೋಚ್ ಹ್ಯಾಟ್ ಬದಲಿಗೆ ‘ಪೀಕ್ ಕ್ಯಾಪ್’ ಬರಲಿದೆ. ಹಿಂದೆ ಕರ್ನಾಟಕದ ಕಾನ್‌ಸ್ಟೆಬಲ್‌ ಮತ್ತು ಹೆಡ್‌ ಕಾನ್‌ಸ್ಟೆಬಲ್‌ ಸ್ಲೋಚ್ ಹ್ಯಾಟ್ ಕ್ಯಾಪ್​​​ಗಳನ್ನು ಹಾಕುತ್ತಿದ್ದರು. ಇದೀಗ ಇದರಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಮುಂದಾಗಿದೆ.

ಕೇರಳದಲ್ಲಿ ‘ಪೀಕ್ ಕ್ಯಾಪ್’​ ಧರಿಸಲಾಗುತ್ತಿದೆ. ಇದು ನೀಲಿ ಬಣ್ಣವನ್ನು ಹೊಂದಿದ್ದು, ಇದು ಸಾರ್ವಜನಿಕ ಮನ್ನಣೆ ಮತ್ತು ಅಧಿಕಾರ ಪ್ರಜ್ಞೆಯನ್ನು ಸಂಕೇತವಾಗಿದ್ದು, ಇದು ಬಿಸಿಲು ಮತ್ತು ಮಳೆಯಿಂದ ರಕ್ಷಿಸುವ ಕೂಡ ಸಹಾಯವಾಗಿದೆ. ಚಪ್ಪಟೆಯಾದ ಮೇಲ್ಭಾಗ, ಬಾಗಿದ ಮುಖವಾಡ ಮತ್ತು ಮುಂಭಾಗದಲ್ಲಿ ಕೇರಳ ಪೊಲೀಸ್ (ಕೆಪಿ) ಲಾಂಛನವನ್ನು ಹೊಂದಿದೆ.

ಮಹಾರಾಷ್ಟ್ರ ಪೊಲೀಸ್ ಕಾನ್ಸ್ಟೇಬಲ್ ಕ್ಯಾಪ್​​​​ ‘ಪೀಕ್ ಕ್ಯಾಪ್’ ಅಥವಾ ಸಾಂಪ್ರದಾಯಿಕ ಪೊಲೀಸ್ ಕ್ಯಾಪ್ ಎಂದು ಕರೆಯಲಾಗುತ್ತದೆ. ಇದು ಕಡು ನೀಲಿ ಬಣ್ಣದ ಟೋಪಿಯಾಗಿದ್ದು, ಚಪ್ಪಟೆಯಾದ ಮೇಲ್ಭಾಗ ಮತ್ತು ಬಾಗಿದ ವಿನ್ಯಾಸವನ್ನು ಹೊಂದಿದೆ. ಕ್ಯಾಪ್​​​ನ ಮುಂಭಾಗದಲ್ಲಿ ಮಹಾರಾಷ್ಟ್ರ ಪೊಲೀಸ್ ಲಾಂಛನವಿದ್ದು, ಇದು ನಕ್ಷತ್ರ ಮತ್ತು ರಕ್ಷಣೆಯನ್ನು ಸೂಚಿಸಲು ಎರಡು ವೃತ್ತವನ್ನು ಒಳಗೊಂಡಿದೆ.

ಆಂಧ್ರಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ಕ್ಯಾಪ್​​ನ್ನು ಪೀಕ್ ಕ್ಯಾಪ್ ಎಂದು ಕರೆಯಲಾಗುತ್ತದೆ. ಪೀಕ್ ಕ್ಯಾಪ್ ನೀಲಿ ಬಣ್ಣವನ್ನು ಹೊಂದಿದೆ. ಗೋವಾದಲ್ಲಿ “ಪೀಕ್ ಕ್ಯಾಪ್​​” ಧರಿಸಿಕೊಳ್ಳಲಾಗುತ್ತದೆ. ಈ ಕ್ಯಾಪ್‌ನ ಮುಂಭಾಗದಲ್ಲಿ ಸಾಮಾನ್ಯವಾಗಿ ಪೊಲೀಸ್ ಪಡೆಯ ಲಾಂಛನ ಇದೆ. ಈ ಲಾಂಛನವು ಅಧಿಕಾರ ಮತ್ತು ಜವಾಬ್ದಾರಿಯ ಸಂಕೇತವಾಗಿದೆ.

ತೆಲಂಗಾಣದಲ್ಲಿ ಕಾನ್‌ಸ್ಟೆಬಲ್‌ ಮತ್ತು ಹೆಡ್‌ ಕಾನ್‌ಸ್ಟೆಬಲ್​​ಗಳು ‘ನೇವಿ ಬ್ಲೂ ಪೀಕ್ ಕ್ಯಾಪ್​’ಬಳಸುತ್ತಾರೆ. ಇದೀಗ ಕರ್ನಾಟಕಕ್ಕೂ ಕೂಡ ಈ ಕ್ಯಾಪ್​​​ಗಳನ್ನು ಬಳಸಲಾಗುತ್ತದೆ. ಇದು ಬಿಗಿಯಾದ ಫಿಟ್, ಸುಧಾರಿತ ವಿನ್ಯಾಸ ಮತ್ತು ವೃತ್ತಿಪರ ನೋಟವನ್ನು ನೀಡುತ್ತದೆ.

ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ: ಸಿಎಂ

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ” ಎಂದು ಸಿಎಂ ಇದೇ ವೇಳೆ ಕರೆ ನೀಡಿದರು.

“ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ. ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ” ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.

“ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ. ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ” ಎಂದು ಕರೆ ನೀಡಿದರು.

“ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ” ಎಂದು ಸಿ.ಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...