ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭಾರಿ ಮಳೆ: ಹವಾಮಾನ ಇಲಾಖೆ

Date:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೆಯೇ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.

ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ಕಾರಣಕ್ಕೆ ಇಂದು ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಅ.23ರಂದು ಗುರುವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಕಟ್ಟಡ ದುರಂತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರಿನ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು...

545 ಪಿಎಸ್ಐ ಹುದ್ದೆ | ನಮ್ಮ ಹೋರಾಟಕ್ಕೆ ಕೊನೆಗೂ ಜಯ: ಸಚಿವ ಪ್ರಿಯಾಂಕ್‌ ಖರ್ಗೆ

ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ, ಅಂದು ಬಿಜೆಪಿ...

ಕರ್ನಾಟಕಕ್ಕೆ ತೆರಿಗೆ ಅನ್ಯಾಯ | ಕೇಂದ್ರ ಸಮರ್ಥಿಸುವ ಆರ್‌ ಅಶೋಕ್‌, ನಾಚಿಕೆ ಆಗಲ್ವಾ?

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ತೆರಿಗೆ ಅನ್ಯಾಯದ ಬಗ್ಗೆ ಸರ್ಕಾರ ಮತ್ತು...

ಚುನಾವಣೆ ಅಗ್ನಿಪರೀಕ್ಷೆ ನಿಜ, ಹಾಗಂತ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಕುಮಾರಸ್ವಾಮಿ ನೇರ ಮಾತು

ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ...