ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

Date:

ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ
ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? U19 ಮಹಿಳೆಯರ ಏಷ್ಯಾಕಪ್: ಭಾರತ ತಂಡ ಚಾಂಪಿಯನ್

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿ ಭಾಗದಲ್ಲಿ ನಿರ್ಮಾಣವಾಗಿದ್ದ ಹವಾಮಾನ ವೈಪರಿತ್ಯವು ಕರಾವಳಿಯತ್ತ ಬಂದಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿದ್ದ ವಾಯುಭಾರ ಕುಸಿತವು ಚಂಡಮಾರುತ ಪರಿಚಲನೆಯಾಗಿ ಬದಲಾಗಿದೆ. ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಭಾಗದತ್ತ ಬಿರುಗಾಳಿ ಬೀಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...