ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ: ಪ್ರಲ್ಹಾದ್ ಜೋಷಿ

Date:

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಸ್‌ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಆದರೆ ಯಾವ ಕ್ಷೇತ್ರಗಳು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಇಬ್ಬರು ಪ್ರಭಾವಿ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಆದರೆ ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ನಿರ್ಧರಿಸಲಾಗಿಲ್ಲ. ಇಬ್ಬರೂ ಕರ್ನಾಟಕ ಅಥವಾ ಬೇರೆ ರಾಜ್ಯಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ” ಎಂದು ಪ್ರಲ್ಹಾದ್ ಜೋಷಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭಾ ಸದಸ್ಯರಾಗಿದ್ದಾರೆ.ಜೈಶಂಕರ್ ಕರ್ನಾಟಕದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು, ಆಗಾಗ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಇಂತಹ ಊಹಾಪೋಹಗಳಿಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಇಬ್ಬರು ಕರ್ನಾಟಕದಿಂದ ಸ್ಪರ್ಧಿಸಿದರೆ ಹಾಲಿ ಸಂಸದರು ತಮ್ಮ ಕ್ಷೇತ್ರ ಕಳೆದುಕೊಳ್ಳುತ್ತಾರಾ ಎಂಬ ಪ್ರಶ್ನೆಗೆ, ಇಬ್ಬರು ಸಚಿವರು ಯಾವ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದು ನಿರ್ಧಾರವಾಗಿಲ್ಲ ಎಂದು ಹೇಳಿದರು.

ಕಳೆದ ಬುಧವಾರ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಜೈಶಂಕರ್ ಬುದ್ಧಿಜೀವಿಗಳು, ಕೈಗಾರಿಕೋದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಪ್ರಮುಖ ಗಣ್ಯರೊಂದಿಗೆ ನರೇಂದ್ರ ಮೋದಿ ಸರ್ಕಾರದ 10 ವರ್ಷಗಳ ಸಾಧನೆಯ ಬಗ್ಗೆ ಸಂವಾದ ನಡೆಸಿದರು ಹಾಗೂ ಪ್ರಹ್ಲಾದ್ ಜೋಷಿ ಸಾಧನೆಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಮಂಡ್ಯದಲ್ಲಿಯೇ ಸ್ಪರ್ಧಿಸುವ ಬಗ್ಗೆ ಹೇಳುತ್ತಿರುವ ಸುಮಲತಾ ಅಂಬರೀಶ್ ಅವರ ಬಗ್ಗೆ ಪ್ರಶ್ನೆ ಕೇಳಿದಾಗ ಕೇಂದ್ರ ನಾಯಕರು ಶೀಘ್ರದಲ್ಲಿಯೇ ಎಲ್ಲ ಗೊಂದಲಗಳಿಗೂ ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ತಿಳಿಸಿದರು.

ತಮಗೆ ಮಿತ್ರ ಪಕ್ಷ ಜೆಡಿಎಸ್‌ನೊಂದಿಗೆ ಯಾವುದೇ ಸಮಸ್ಯೆಯಿಲ್ಲ. ದೊಡ್ಡ ಪಕ್ಷಗಳಲ್ಲಿ ಇಂತಹ ವ್ಯತ್ಯಾಸಗಳು ಸಹಜ. ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ ಎಂದು ಪ್ರಲ್ಹಾದ್ ಜೋಷಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...