ನಿತೀಶ್ ಕುಮಾರ್ ಅನುಚಿತ ವರ್ತನೆ; ಕ್ಷಮೆಯಾಚಿಸಲು ಜನವಾದಿ ಮಹಿಳಾ ಸಂಘಟನೆ ಆಗ್ರಹ

Date:

ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರು, ಮುಸ್ಲಿಂ ಮಹಿಳೆಯ ಹಿಜಾಬ್ ಅನ್ನು ಎಳೆದು ಅವಮಾನಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.

- Advertisement -

ಹಿಜಾಬ್ ಕೇವಲ ಬಟ್ಟೆಯ ತುಂಡು ಅಲ್ಲ; ಇದು ನಂಬಿಕೆ, ಗುರುತಿನ ಅಭಿವ್ಯಕ್ತಿ ಮತ್ತು ವೈಯಕ್ತಿಕ ಆಯ್ಕೆಯಾಗಿದೆ. ಮಹಿಳೆ ಏನು ಧರಿಸಬೇಕೆಂದು ನಿರ್ಧರಿಸುವ ಹಕ್ಕಿನಲ್ಲಿ ಹಸ್ತಕ್ಷೇಪ ಮಾಡಲು ರಾಜ್ಯ ಸರ್ಕಾರ ಮಾಡುವ ಯಾವುದೇ ಪ್ರಯತ್ನವು ಭಾರತೀಯ ಸಂವಿಧಾನದ 14, 19, 21 ಮತ್ತು 25 ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ. ರಾಜ್ಯದ ಅತ್ಯುನ್ನತ ಹುದ್ದೆಯನ್ನು ಹೊಂದಿರುವ ವ್ಯಕ್ತಿ, ಅಸಭ್ಯ ರೀತಿಯಲ್ಲಿ ವರ್ತಿಸುವುದು ಗಂಭೀರ ಸ್ವರೂಪದ ಪ್ರಮಾದವಾಗಿದೆ. ಈ ಅವಮಾನಕರ ಮತ್ತು ನಾಚಿಕೆಗೇಡಿನ ಕೃತ್ಯಕ್ಕಾಗಿ ನಿತೀಶ್ ಕುಮಾರ್ ಅವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖ್ಯಮಂತ್ರಿಯ ಈ ನೀಚ ಕೃತ್ಯವು ಸಾಂವಿಧಾನಿಕ ಮೌಲ್ಯಗಳು, ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಮಹಿಳೆಯರ ಸ್ವಾಯತ್ತತೆಯ ಮೂಲತತ್ವಗಳಿಗೆ ಸಂಪೂರ್ಣ ವಿರುದ್ದವಾಗಿದೆ. ತಮ್ಮ ಉಡುಪನ್ನು ನಿರ್ಧರಿಸುವ, ಮಹಿಳೆಯರ ಹಕ್ಕು ,ಅವರ ಘನತೆ, ಸ್ವಾಯತ್ತತೆ ಮತ್ತು ಸಮಾನತೆಯಲ್ಲಿ ಅಂತರ್ಗತವಾಗಿರುವಂತಹದ್ದು ಎಂದು ಜನವಾದಿ ಮಹಿಳಾ ಸಂಘಟನೆ ದೃಢವಾಗಿ ಪ್ರತಿಪಾದಿಸುತ್ತದೆ.

ಮಹಿಳೆಯರ ಉಡುಪುಗಳನ್ನು, ವಿಶೇಷವಾಗಿ ಮುಸ್ಲಿಂ ಮಹಿಳೆಯರ ಉಡುಪುಗಳನ್ನು ನಿಯಂತ್ರಿಸಲು ಅಥವಾ ನಿಗಾ ವಹಿಸಲು ರಾಜ್ಯ ಸರ್ಕಾರ ಮಾಡುವ ಯಾವುದೇ ಪ್ರಯತ್ನವು ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಸಂವಿಧಾನಾತ್ಮಕ ಖಾತರಿಗಳ ಉಲ್ಲಂಘನೆಯಾಗಿದೆ. ಇಂತಹ ಅವಮಾನಕರ ನಡವಳಿಕೆಯು, ಸಾಮಾಜಿಕ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ವಿಶೇಷವಾಗಿ ಮುಸ್ಲಿಂ ಮಹಿಳೆಯರನ್ನು ಅತೀವವಾಗಿ ಘಾಸಿಗೊಳಿಸುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?

ಒಂದು ಕಾಲದಲ್ಲಿ ಸಾಮಾಜಿಕ ನ್ಯಾಯ ಮತ್ತು ಧರ್ನಿರಪೇಕ್ಷತೆ ಯನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದ ನಿತೇಶ್ ಕುಮಾರ್ ಅವರು ಈಗ ಬಹುಸಂಖ್ಯಾತವಾದ ಮತ್ತು ಹೊರಗಿಡುವ ಕಾರ್ಯಸೂಚಿಗಳಿಗೆ ಅನುಗುಣವಾದ ನೀತಿಗಳನ್ನು ಅನುಕರಿಸುತ್ತಿರುವುದು ತೀವ್ರ ದುರದೃಷ್ಟಕರ. ಶಿಸ್ತು, ಏಕರೂಪತೆ ಅಥವಾ ಆಡಳಿತದ ನೆಪದಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಳ್ಳುವುದು ಸಾಂಸ್ಥಿಕ ತಾರತಮ್ಯವಲ್ಲದೆ ಬೇರೇನೂ ಅಲ್ಲ. ಈ ಹಿನ್ನೆಲೆಯಲ್ಲಿ ಬಿಹಾರ ಸಂಪುಟ ಸಚಿವ ಸಂಜಯ್ ನಿಶಾದ್ ಮತ್ತು ಬಿಜೆಪಿ ನಾಯಕರು ನೀಡಿದ ಹೇಳಿಕೆಗಳು ಕೂಡ ಅತ್ಯಂತ ಆಕ್ಷೇಪಾರ್ಹ ಹಾಗೂ ಅಸಹ್ಯಕರವಾಗಿವೆ. ಈ ಅನುಚಿತ ವರ್ತನೆ ಮೂಲಕ ನಿತೇಶ್ ಕುಮಾರ್ ಅವರು ತಮ್ಮ ಕೋಮುವಾದಿ ಮತ್ತು ಪಿತೃಪ್ರಧಾನ ಮುಖವನ್ನು ಪ್ರತಿಗಾಮಿ ಆರ್‌ಎಸ್‌ಎಸ್ ಮನುವಾದಿ ಆಳ್ವಿಕೆಯೊಂದಿಗೆ ಹೊಂದಿಸಿಕೊಳ್ಳುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಸ್ಪಷ್ಟ ಮತ್ತು ನಿಸ್ಸಂದಿಗ್ಧವಾದ ಸ್ಪಷ್ಟೀಕರಣವನ್ನು ಬಿಹಾರ ಸರ್ಕಾರವು ತಕ್ಷಣವೇ ಹೊರಡಿಸಬೇಕೆಂದು ಮತ್ತು ಯಾವುದೇ ಮಹಿಳೆ ಅಥವಾ ಹುಡುಗಿ ತನ್ನ ಉಡುಪಿನ ಆಧಾರದ ಮೇಲೆ ಶಿಕ್ಷಣ ಅಥವಾ ಸಾರ್ವಜನಿಕ ಸೇವೆಗಳನ್ನು ನಿರಾಕರಿಸದಂತೆ ನೋಡಿಕೊಳ್ಳಬೇಕು. ಈ ಅನುಚಿತ ವರ್ತನೆಯ ಬಲಿಪಶು ಆಗಿರುವ ಡಾ. ನುಸ್ರತ್ ಪರ್ವೀನ್ ರವರಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬೆಂಬಲ ವ್ಯಕ್ತಪಡಿಸುತ್ತದೆ ಮತ್ತು ಬಿಹಾರ ಮುಖ್ಯಮಂತ್ರಿಯ ಸಂವಿಧಾನಬಾಹಿರ ವರ್ತನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಸಂಘಟನೆಗಳು, ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ನಾಗರಿಕ ಸಮಾಜವು ಒಗ್ಗಟ್ಟಿನಿಂದ ಒತ್ತಾಯಿಸಬೇಕೆಂದು ಕರೆ ನೀಡುತ್ತದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸುತ್ತದೆ ಎಂದು ಅಧ್ಯಕ್ಷರಾದ ಚಂದ್ರಕುಮಾರಿ ಪ್ರಧಾನ ಕಾರ್ಯದರ್ಶಿಯಾದ ದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...