ಗ್ರಾಮ ಪಂಚಾಯತಿ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ

Date:

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯು ಪ್ರಕಟಗೊಂಡಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

- Advertisement -

ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ ರಾಜ್ಯ ಚುನಾವಣಾ ಆಯೋಗದಿಂದ ಈವರೆವಿಗೂ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ‌ ಎಂದು ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯ ಚುನಾವಣಾ ಆಯೋಗವು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಮೂಲಕ ಪತ್ರಿಕಾ ಗೋಷ್ಠಿಯನ್ನು ಕರೆದು ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುತ್ತದೆ. ಅದುದರಿಂದ, ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿಯು ಸುಳ್ಳು ಮಾಹಿತಿಯಾಗಿರುವುದಾಗಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಒಬಿಸಿಗಳಿಗೆ ಸಿಗಬೇಕಿದೆ ಶಾಸನಸಭೆಗಳಲ್ಲಿ ಮೀಸಲಾತಿ

ಕಳೆದ ಕೆಲವು ದಿನಗಳಿಂದ ವಾಟ್ಸ್‌ಆಪ್, ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ನಕಲಿ ವೇಳಾಪಟ್ಟಿ ಹರಿದಾಡುತ್ತಿದೆ. ಈ ನಕಲಿ ದಾಖಲೆಯ ಪ್ರಕಾರ, ಅಕ್ಟೋಬರ್ 15ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿ, ನವೆಂಬರ್ 20ರಂದು ಮತದಾನ ನಡೆಯಲಿದೆ ಎಂದು ಉಲ್ಲೇಖಿಸಲಾಗಿದೆ. ಆದರೆ ಇದು ಸಂಪೂರ್ಣವಾಗಿ ಆಯೋಗದ ಹೆಸರಿನಲ್ಲಿ ನಿರ್ಮಿಸಲಾದ ನಕಲಿ ದಾಖಲೆಯಾಗಿದೆ. ಈ ಮಾಹಿತಿಯು ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಗೊಂದಲ ಸೃಷ್ಟಿಸಿದ್ದು, ಸಾವಿರಾರು ಆಕಾಂಕ್ಷಿ ಅಭ್ಯರ್ಥಿಗಳು ಮತ್ತು ಮತದಾರರು ತಪ್ಪು ಮಾಹಿತಿಯಿಂದ ಪ್ರಭಾವಿತರಾಗಿದ್ದಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ.

“ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಕೇವಲ ಅಧಿಕೃತ ಮಾಧ್ಯಮಗಳ ಮೂಲಕ ಮಾತ್ರ ಪ್ರಕಟಿಸುತ್ತದೆ. ಪತ್ರಿಕಾ ಗೋಷ್ಠಿಗಳು, ದೃಶ್ಯ ಮಾಧ್ಯಮಗಳು ಮತ್ತು ಆಯೋಗದ ಅಧಿಕೃತ ವೆಬ್‌ಸೈಟ್ (karsec.gov.in) ಮೂಲಕ ಮಾತ್ರ ಇಂತಹ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅನಧಿಕೃತ ಮಾಹಿತಿಗೆ ಕಿವಿಗೊಡಬಾರದು. ಇಂತಹ ಸುಳ್ಳು ಸುದ್ದಿಗಳು ಚುನಾವಣಾ ಪ್ರಕ್ರಿಯೆಗೆ ಹಾನಿಕರವಾಗಬಹುದು,” ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...