ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಜಾತ್ಯತೀತವಾಗಿ ಉಳಿದಿದೆಯೇ?‌
  • ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಅನ್ನು ಏನೆಂದು ಕರೆಯಬೇಕು?

ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಾಮರಾಜನಗರದ ಕೋಣನಕೆರೆ ಬಳಿಯ ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿದ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, “ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜೆಡಿಎಸ್, ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್‌ ಅನ್ನು ಏನೆಂದು ಕರೆಯಬೇಕು. ಜೆಡಿಎಸ್ – ಜಾತ್ಯತೀತ ಎಂದು ಹೇಳಿಕೊಳ್ಳಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಜೊತೆ ಮೈತ್ರಿ | ಜೆಡಿಎಸ್ ತೊರೆದ ಮತ್ತೊಬ್ಬ ಮುಸ್ಲಿಂ ನಾಯಕ

Advertisements

2004ರಲ್ಲಿ ಸಿದ್ದರಾಮಯ್ಯರವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ “ಅಡ್ವಾನಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ” ಎಂದು ತಿಳಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲೈ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗದಲ್ಲಿ ಕೋಣನಕೆರೆಯ ಸರ್ಕಾರಿ ಗಿರಿಜನ ಆಶ್ರಮ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳೊಂದಿಗೆ ಸಂವಾದ ನಡೆಸಿ, ಊಟದ ಗುಣಮಟ್ಟ, ಗ್ರಂಥಾಲಯ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಅಧಿಕಾರಿಗಳು ಜತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸಂಸದ ಯದುವೀರ್ ಒಡೆಯರ್ ಸ್ವಾಗತ

ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್...

Download Eedina App Android / iOS

X