ಯಾವುದೇ ಸಂದೇಶ ಕೊಡಲು ದುಬೈ ಪ್ರವಾಸ ಹೊರಟಿಲ್ಲ: ಸತೀಶ್‌ ಜಾರಕಿಹೊಳಿ

Date:

  • ‘ಐಟಿ‌ ದಾಳಿಗೆ ಒಳಗಾದವರು ಮಂತ್ರಿಯೂ ಅಲ್ಲ,‌ ಶಾಸಕರೂ ಅಲ್ಲ’
  • ‘ಬಿಜೆಪಿಯವರು ಮಾಡುವ ಆರೋಪವನ್ನು ತಾವು ಸಾಬೀತು ಮಾಡಲಿ’

ಕಾಂಗ್ರೆಸ್‌ಗೂ ಐಟಿ ದಾಳಿಗೆ ಒಳಗಾದವರಿಗೂ ಯಾವುದೇ ನೇರ ಸಂಪರ್ಕ ಇಲ್ಲ. ಐಟಿ‌ ದಾಳಿಗೆ ಒಳಗಾದವರು ಮಂತ್ರಿಯೂ ಅಲ್ಲ,‌ ಶಾಸಕರೂ ಅಲ್ಲ. ಕಲೆಕ್ಷನ್ ಮಾಡಿ ಎಂದು ಹೈಕಮಾಂಡ್ ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

- Advertisement -

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯವರು ಮಾಡುವ ಆರೋಪವನ್ನು ತಾವು ಸಾಬೀತು ಮಾಡಲಿ. ಐಟಿ ಇಲಾಖೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಐಟಿ ಇಲಾಖೆ ರಾಜ್ಯದ್ದಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದುಡ್ಡು ಬಹಳಷ್ಟಿದೆ. ಎಕರೆಗೆ 10-20-40 ಕೋಟಿ ಇದೆ. ಈಗಾಗಲೇ ಐಟಿ ದಾಳಿಗೆ ಒಳಗಾದವರು ಆ ದುಡ್ಡು ನಮ್ಮದೇ ಅಂತ ಒಪ್ಪಿಕೊಂಡಿದ್ದಾರೆ. ಆರೋಪ ಬಂದ ತಕ್ಷಣ ಉತ್ತರ ಕೊಡಬೇಕಾಗಿಲ್ಲ” ಎಂದು ಹೇಳಿದರು.

“ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಆರೋಪ ಮಾಡುತ್ತಾರೆ. ಈ ಹಿಂದೆ ಡಿಕೆ ರವಿ ಪ್ರಕರಣ ಏನಾಯ್ತು? ಗಣಪತಿ ಕೇಸ್ ಏನಾಯ್ತು? ಪರೇಶ್ ಮೆಸ್ತಾ ಕೇಸ್ ಏನಾಯ್ತು? ಒಂದು ವರ್ಷ ಆ ಎಲ್ಲ ವಿಷಯ ಓಡಿಸಿದ್ರು. ಸಿಬಿಐ ತನಿಖೆ ಆದಮೇಲೆ ವ್ಯತಿರಿಕ್ತವಾದ ರಿಪೋರ್ಟ್ ಬಂತು” ಎಂದರು.

“ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ ವೇಣುಗೋಪಾಲ್ ರಾಜ್ಯ ಪ್ರವಾಸದ ಹಿಂದೆ ಬೇರೆ ಯಾವ ಉದ್ದೇಶ ಇಲ್ಲ. ಮಂಡಳಿ, ಬೋರ್ಡ್ ಹಾಗೂ ಕಾರ್ಪೊರೇಷನ್ ಆಯ್ಕೆ ಕುರಿತು ಅವರು ಬಂದಿದ್ದಾರೆ.‌ ಆ ಬಗ್ಗೆ ಸಭೆ ಇತ್ತು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

ಸಿಎಂ ವಿರುದ್ದ ‘ಕಲೆಕ್ಷನ್ ಮಾಸ್ಟರ್’ ಎಂದು ಬಿಜೆಪಿ ಪೋಸ್ಟರ್ ಹಾಕಿದೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಈ ಹಿಂದೆ ಪೋಸ್ಟರ್ ನಾವು ಮಾಡಿದ್ದೆವು. ಈಗ ಬಿಜೆಪಿಯವರೂ ಮಾಡಿದ್ದಾರೆ.‌ ಇದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ” ಎಂದರು.

ಕಾಂಗ್ರೆಸ್ಸಿನ ಸುಮಾರು 20 ಶಾಸಕರೊಂದಿಗೆ ಅವರು ದುಬೈ ಪ್ರವಾಸಕ್ಕೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ, “ಚಿತ್ರದುರ್ಗ, ಬಾಗಲಕೋಟೆ, ಧಾರವಾಡ, ಬೆಳಗಾವಿ ವಲಯದ ಶಾಸಕರೊಂದಿಗೆ ಪ್ರವಾಸ ಹೊರಟಿದ್ದೇವೆ. ತಾವು ಯಾವುದೇ ಸಂದೇಶ ಕೊಡಲು ದುಬೈ ಪ್ರವಾಸ ಹೊರಟಿಲ್ಲ” ಎಂದು ಇದೇ ವೇಳೆ ಸತೀಶ್ ಜಾರಕಿಹೊಳಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...