​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

Date:

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯು ಸ್ಪಷ್ಟಪಡಿಸಿದ್ದಾರೆ. ಪ್ರೊ. ರಾವ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಹರಿದಾಡುತ್ತಿದ್ದ ಸುದ್ದಿಯು ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಅವರು ತಿಳಿಸಿದ್ದಾರೆ.
​
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯದ ಅಂಗವಾಗಿ, ರಾಜ್ಯ ಸ್ವೀಪ್ (SVEEP) ನೋಡಲ್ ಅಧಿಕಾರಿ ಹಾಗೂ ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತರ ಸಮ್ಮುಖದಲ್ಲಿ ಅಧಿಕಾರಿಗಳು ಖುದ್ದಾಗಿ ಪ್ರೊ. ರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಕುಟುಂಬ ಸದಸ್ಯರಿಗೆ ಗಣತಿ ನಮೂನೆ (ಎನ್ಯುಮರೇಷನ್ ಫಾರ್ಮ್) ವಿತರಿಸಿ, ಸ್ಥಳದಲ್ಲೇ ಭರ್ತಿ ಮಾಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
​
ಈ ಹಿಂದಿನ 2002ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ‘ರಾಮ’ ಎಂದು ದಾಖಲಾಗಿತ್ತು. ಆದರೆ, ಪ್ರಸ್ತುತ ಪಟ್ಟಿಯಲ್ಲಿ ‘ಪ್ರೊಫೆಸರ್ ಸಿ.ಎನ್.ರಾವ್. ಎಂ’ ಎಂದು ನಮೂದಾಗಿದೆ. ಹೆಸರಿನಲ್ಲಿದ್ದ ಈ ವ್ಯತ್ಯಾಸವನ್ನು ಗಮನಿಸಿದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಸ್ಥಳ ಪರಿಶೀಲನೆ ನಡೆಸಿದ್ದರು.

- Advertisement -

​ಪರಿಶೀಲನೆಯ ಬಳಿಕ, ಪ್ರೊ. ರಾವ್ ಅವರಿಗೆ ಯಾವುದೇ ನೋಟಿಸ್ ನೀಡದೆ, ನಿಯಮಾನುಸಾರ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಬಿಎಲ್ಒ ಶಿಫಾರಸು ಮಾಡಿದ್ದಾರೆ. ಈಗಾಗಲೇ ಕರಡು ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲೂ ಅಧಿಕೃತವಾಗಿ ಮುಂದುವರಿಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ, ನೋಟಿಸ್ ಜಾರಿ ಮಾಡಲಾಗಿದೆ ಎಂಬುದು ಕೇವಲ ಆಧಾರರಹಿತ ವದಂತಿ ಎಂದು ಚುನಾವಣಾ ವಿಭಾಗವು ದೃಢಪಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...