ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗ ಇನ್ನಾರಿಂದಲೂ ಸಾಧ್ಯವಿಲ್ಲ: ಸಚಿವ ಪರಮೇಶ್ವರ್

Date:

Advertisements

ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ‌ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಪಹಲ್ಗಾಮ್ ಘಟನೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ತೋರುತ್ತಿದ್ದಾರೆ ಎಂಬುದರ ಕುರಿತ ಮಾಧ್ಯಮದವರ ಪ್ರಶ್ನೆಗೆ ಬೆಂಗಳೂರನಲ್ಲಿ ಮಂಗಳವಾರ ಪ್ರತಿಕ್ರಿಯಿಸಿ, “ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ” ಎಂದು ಪ್ರಶ್ನಿಸಿದರು.

“ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಹೆಚ್ಚಿನಂಶ ಯಾರು ಅಧಿಕಾರದಲ್ಲಿರುತ್ತಾರೆ, ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ. ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ” ಎಂದರು.

Advertisements

“ಪಹಲ್ಗಾಮ್ ಘಟನೆಯ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಾನೊಂದು ಹೇಳುವುದು, ಇನ್ನೊಬ್ಬರೊಂದು ಹೇಳುವುದು ಬಾಯಿಗೆ ಬಂದಂತೆ ಹೇಳುತ್ತ ಹೋದರೆ ಮಹತ್ವ ಹೋಗುತ್ತದೆ. ನಾವು ಯಾರು ಕೂಡ ಹೆಚ್ಚು ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ. ಹೈಕಮಾಂಡ್ ಎಚ್ಚರಿಕೆ ನೀಡಿರುವ ವಿಚಾರ ಗೊತ್ತಿಲ್ಲ. ಇದು ದೇಶದ ಭದ್ರತೆ ವಿಚಾರ. ಪಕ್ಷಾತೀತವಾಗಿ ಈ ಘಟನೆಯನ್ನು ನೋಡಬೇಕು. ಪಕ್ಷಾತೀತವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹಿಂದೆಯೇ ಹೇಳಿದ್ದೇನೆ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ನಮ್ಮ ಸಹಕಾರ ಇದೆ. ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರಲಿದೆ ಎಂಬುದನ್ನು ಎಐಸಿಸಿ ಅಧಿಕೃತವಾಗಿ ಹೇಳಿದೆ” ಎಂದು ಸ್ಪಷ್ಟಪಡಿಸಿದರು.

ಯುದ್ಧ ಬೇಡ ಹೇಳಿಕೆಗೆ ಸಿಎಂ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿ, “ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿದ್ದೇನೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. ಅಗತ್ಯ ಬಿದ್ದಾಗ ಯುದ್ಧ ಮಾಡಲು ಹಿಂದೆ ನೋಡಬಾರದು ಎಂಬುದನ್ನೂ ಹೇಳಿದ್ದಾರೆ” ಎಂದು ಹೇಳಿದರು.

ಎಸ್‌ಪಿ ಮೇಲೆ ಮುಖ್ಯಮಂತ್ರಿಗಳು ಕೈ ಮಾಡಲು ಹೋಗಿರುವುದು ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗುತ್ತಿರುವ ಕುರಿತು‌ ಮಾತನಾಡಿ, “ನನಗೆ ಸಂಪೂರ್ಣವಾದಂತ ಮಾಹಿತಿ ಇಲ್ಲ. ನಡೆದಿರುವ ಘಟನೆ ಏನು, ಯಾತಕ್ಕೆ ಕೋಪಗೊಂಡರು ಎಂಬುದು ಸರಿಯಾದ ಮಾಹಿತಿ ತೆಗೆದುಕೊಂಡಿಲ್ಲ. ಪೂರ್ಣ ಮಾಹಿತಿ ತೆಗೆದುಕೊಂಡ ಬಳಿಕ ನಾನು ಪ್ರತಿಕ್ರಿಯೆ ಮಾಡುತ್ತೇನೆ” ಎಂದರು.

“ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

“ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X