ಎಚ್ಎಂ‌ಪಿ ವೈರಸ್‌ನಿಂದ ತೊಂದರೆ ಇಲ್ಲ, ಕಠಿಣ ಕ್ರಮದ ಅಗತ್ಯವೂ ಇಲ್ಲ: ದಿನೇಶ್‌ ಗುಂಡೂರಾವ್

Date:

Advertisements

ರಾಜ್ಯದಲ್ಲಿ ಹ್ಯೂಮನ್ ಮೆಟಾ ನ್ಯೂಮೊ ವೈರಸ್‌ (ಎಚ್ಎಂ‌ಪಿವಿ) ಎರಡು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿರುವ ಎಚ್‌ಎಂಪಿವಿ ಹೊಸದಲ್ಲ. ಇದು 2001ರಿಂದ ನಮ್ಮ ದೇಶದಲ್ಲಿದೆ. ಇದರಿಂದ ಯಾವುದೇ ಅಪಾಯವಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದರು.

“ಸಾಮಾನ್ಯವಾಗಿ ಐಎಲ್‌ಐ ಪ್ರಕರಣಗಳಲ್ಲಿ ಶೇ.1 ರಷ್ಟು ಜನರಲ್ಲಿ ಈ ವೈರಸ್ ಕಂಡು ಬರುತ್ತದೆ. ಇಂಥದ್ದೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಕ್ಕಳನ್ನು ಪರೀಕ್ಷೆ ಮಾಡಿದಾಗ, ಎಚ್‌ಎಂಪಿ ವೈರಾಣು ಪತ್ತೆಯಾಗಿದೆ. ಇಬ್ಬರು ಮಕ್ಕಳಲ್ಲಿ ಮೂರು ತಿಂಗಳ ಮಗು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಎಂಟು ತಿಂಗಳ ಮಗು ಇವತ್ತು ಅಥವಾ ನಾಳೆ ಬಿಡುಗಡೆಯಾಗುತ್ತದೆ. ವೈರಸ್ ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

Advertisements

“ಈ ಸಂಬಂಧ ರಾಜ್ಯದಲ್ಲಿ ಆರೋಗ್ಯ ಇಲಾಖೆ ಯಾವುದೇ ಕಠಿಣಕ್ರಮಗಳನ್ನು ಕೈಗೊಳ್ಳುವುದಿಲ್ಲ. ಕೇಂದ್ರದಿಂದಲೂ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಸೂಚನೆಗಳಿಲ್ಲ. ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಐಸಿಎಂಆರ್ ಸೂಚನೆಗಳನ್ನು ಅನುಸರಿಸುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? HMP ವೈರಸ್‌ | ರೋಗ ಲಕ್ಷಣಗಳೇನು, ಮುನ್ನೆಚ್ಚರಿಕಾ ಕ್ರಮಗಳೇನು? ಆತಂಕಬೇಡ, ಎಚ್ಚರವಿರಲಿ

“ಚೀನಾದಲ್ಲಿ ಕಾಣಿಸಿಕೊಂಡಿರುವ ವೈರಸ್ ಬಗ್ಗೆ ಮಾಹಿತಿ ಇಲ್ಲ. ಇಲ್ಲಿ ಕಾಣಿಸಿರುವ ವೈರಸ್ ಅಪಾಯಕಾರಿಯಲ್ಲ. ಆದರೆ ಉಸಿರಾಟದ ಸಮಸ್ಯೆ ಇರುವವರು, ಮಕ್ಕಳು, ಹಿರಿಯ ನಾಗರಿಕರ ಬಗ್ಗೆ ಎಚ್ಚರವಹಿಸಬೇಕು. ಇದು ಮಾರಣಾಂತಿಕವೂ ಅಲ್ಲ. ಉಸಿರಾಟದ ತೊಂದರೆ ಇರುವವರಿಗೆ, ನ್ಯುಮೋನಿಯಾ ಸಮಸ್ಯೆ ಇರುವವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಮತ್ತು ಹಿರಿಯರಲ್ಲಿ ಈ ವೈರಸ್‌ನಿಂದ ಸ್ವಲ್ಪ ತೊಂದರೆಯಾಗಬಹುದು. ಅಷ್ಟನ್ನು ಹೊರತುಪಡಿಸಿ, ಬೇರೆ ಯಾವುದೇ ಸಮಸ್ಯೆ ಇಲ್ಲ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X