ತೆರೆದ ವಾಹನದಲ್ಲಿ ಆರ್‌ಸಿಬಿ ಮೆರವಣಿಗೆ ಇಲ್ಲ, ಸ್ಟೇಡಿಯಂ ಸಂಭ್ರಮಾಚರಣೆ: ಗೃಹ ಸಚಿವ ಪರಮೇಶ್ವರ್

Date:

Advertisements

18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್‌ಶಿಪ್ ಆಗಿರುವ ಆರ್‌ಸಿಬಿ ತಂಡಕ್ಕೆ ನನ್ನ ಅಭಿನಂದನೆಗಳು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರು ದೇಶಕ್ಕೆ ಮಾತ್ರವಲ್ಲದೇ, ಇಡೀ ವಿಶ್ವಕ್ಕೆ ಮಾದರಿ‌ ಕ್ರೀಡಾಪಟುವಾಗಿ ಹೊರ ಹೊಮ್ಮಿರುವುದು ಸಂತೋಷದಾಯಕ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್‌ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕೂ ಹೆಮ್ಮೆ ಅನ್ನಿಸುತ್ತದೆ. 18 ವರ್ಷಗಳಿಂದ ಸತತ ಆರ‌ಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ‌ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ‌. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ‌” ಎಂದರು.

“ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್‌ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್‌ನಲ್ಲೇ ವಾಪಸ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಭಿನಂದಿಸುತ್ತಾರೆ. ಆರ್‌ಸಿಬಿ ತಂಡದ ಪರವಾಗಿ ಇಬ್ಬರು ಮಾತನಾಡಲಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಕಾರ್ಯಕ್ರಮಗಳಿಲ್ಲ” ಎಂದು ಹೇಳಿದರು.

Advertisements

ಮೆರವಣಿಗೆ ಇಲ್ಲ

“ಭದ್ರತಾ ದೃಷ್ಟಿಯಿಂದ ಆಟಗಾರರು ತೆರೆದ ವಾಹನದಲ್ಲಿ ಸ್ಟೇಡಿಯಂಗೆ ಹೋಗುತ್ತಿಲ್ಲ. ಕೆಎಸ್‌ಸಿಎ ವತಿಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಿಕೊಳ್ಳಲಿದ್ದಾರೆ. ಅಗತ್ಯ ಪೊಲೀಸ್ ಭದ್ರತೆ, ಟ್ರಾಫಿಕ್ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಕಾನೂನು ಬಿಟ್ಟವರಿಗೆ ಭಯವಾಗಬೇಕು

“ದಕ್ಷಿಣ‌ ಕನ್ನಡ‌ ಜಿಲ್ಲೆಯಲ್ಲಿ ಯಾರು ಆತಂಕ‌ ಪಡಬೇಕಿಲ್ಲ‌ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ‌. ಯಾರು ಕಾನೂನು ಮತ್ತು ಜನ ಸಮುದಾಯಕ್ಕೆ ವಿರುದ್ಧವಾಗಿ ಕೆಲಸ‌ ಮಾಡುತ್ತಾರೆ ಅವರಿಗೆ ಆತಂಕವಿರಬಹುದು. ಅದನ್ನು ಬಿಟ್ಟರೆ ಸಾಮಾನ್ಯ ಜನರಿಗೆ ತೊಂದರೆಯಾಗುವುದಕ್ಕೆ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಕರಾವಳಿ ಭಾಗದಲ್ಲಿ ಇನ್ನು ಕೂಡ‌‌ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಇರಬಹುದು. ರಾತ್ರಿ ಗಸ್ತು ಹೆಚ್ಚು ಮಾಡುವುದು, ಮನೆಮನೆಗೆ ಹೋಗಿ ಜನರನ್ನು ಸಹಕರಿಸಲು ದೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಗಲಭೆ ಹಬ್ಬಿಸುವವರು ಇದ್ದರೆ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಯಾರಿಗು ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಈ‌ ಮೂಲಕ ಭರವಸೆ ನೀಡುತ್ತೇನೆ” ಎಂದರು.

“ನಾವು ಯಾರನ್ನು ಟಾರ್ಗೆಟ್ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು. ಈಗಾಗಲೇ ತೀರ್ಮಾನ ಮಾಡಿದಂತೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರಕ್ಕೆ ಇದೆ. ಅದಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾನಾಗಲಿ ಅಥವಾ‌ ಮುಖ್ಯಮಂತ್ರಿಯವರಾಗಲಿ ಪೊಲೀಸ್ ಅಧಿಕಾರಿಗಳಿಗೆ ದಿನನಿತ್ಯ ಗಂಟೆಗೊಮ್ಮೆ ಸೂಚನೆಗಳನ್ನು ಕೊಡುವುದಿಲ್ಲ. ಏನಾದರು ಘಟನೆಗಳು ನಡೆದಾಗ ಅಧಿಕಾರಿಗಳನ್ನು ನಾವು ಕೇಳುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X