ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Date:

ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ(ಏ.12) ಆರಂಭವಾಗಲಿದೆ.

- Advertisement -

ಮೊದಲ ದಿನವೇ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬಳ್ಳಾರಿ  ಮೀಸಲು ಕ್ಷೇತ್ರದಲ್ಲಿಈ.ತುಕಾರಾಂ ಅವರೂ ಶುಕ್ರವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಹಾಗೂ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿದ್ದು, ಇವರು ಸೇರಿದಂತೆ ಹಲವು ಪ್ರಮುಖರು 2ನೇ ಹಂತದ ಈ ಚುನಾವಣೆ ಎದುರಿಸುತ್ತಿದ್ದಾರೆ.

ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಮಧ್ಯ ಕರ್ನಾಟಕದ ದಾವಣಗೆರೆ, ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಬಿಜೆಪಿ–ಜೆಡಿಎಸ್ ನಡುವೆ ಲೋಕಸಭಾ ಚುನಾವಣಾ ಮೈತ್ರಿಯಾಗಿ ಕ್ಷೇತ್ರಗಳ ಹಂಚಿಕೆ ಮಾಡಿಕೊಂಡಿವೆ. ಜೆಡಿಎಸ್ಗೆ ಬಿಟ್ಟುಕೊಟ್ಟ ಯಾವ ಕ್ಷೇತ್ರಗಳೂ ಎರಡನೇ ಹಂತದಲ್ಲಿ ಇಲ್ಲ. ಹೀಗಾಗಿ, ಎಲ್ಲ 14 ಕ್ಷೇತ್ರಗಳಲ್ಲೂ ಕಾಂಗ್ರೆಸ್–ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಆದರೆ, ನಾಲ್ಕು ಕ್ಷೇತ್ರಗಳಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಶಿವಮೊಗ್ಗ ಹಾಗೂ ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿಗೆ, ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಕಾವು ಎದುರಾಗಿದೆ.

2ನೇ ಹಂತದ ಚುನಾವಣೆ ಕ್ಷೇತ್ರಗಳು

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ

ಚುನಾವಣಾ ವೇಳಾಪಟ್ಟಿ ಏನು?

ಏ.12 – ಅಧಿಸೂಚನೆ

ಏ.19 – ನಾಮಪತ್ರ ಸಲ್ಲಿಸಲು ಕೊನೆ ದಿನ

ಏ.20 – ನಾಮಪತ್ರಗಳ ಪರಿಶೀಲನೆ

ಏ.22 – ನಾಮಪತ್ರ ಹಿಂಪಡೆಯಲು ಕೊನೆ ದಿನ

ಮೇ 7 – ಮತದಾನ

ಜೂ.4 – ಮತ ಎಣಿಕೆ

ಸುರಪುರ ಉಪ ಚುನಾವಣೆ

ಸುರಪುರ ಎಸ್ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಗೂ ಶುಕ್ರವಾರ (ಏ.12) ಅಧಿಸೂಚನೆ ಹೊರಬೀಳಲಿದೆ. ರಾಜ್ಯದಲ್ಲಿನ ಸಾರ್ವತ್ರಿಕ ಚುನಾವಣೆ 2ನೇ ಹಂತದ ವೇಳಾಪಟ್ಟಿಯೇ ಈ ಉಪಚುನಾವಣೆಗೆ ಅನ್ವಯವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...