ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ನವೆಂಬರ್ 16 ರಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ “ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಆಶಯ ಭಾಷಣ ಮಾಡಲಿದ್ದು, ಅಜೀಂ ಪ್ರೇಂಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ನಾರಾಯಣ ಅವರು ಪ್ರಧಾನ ಭಾಷಣ ಮಾಡುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಉಪಸ್ಥಿತರಿರುವರು ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು
ಭಾರತೀಯ ಪತ್ರಿಕಾ ಮಂಡಳಿಯ ಸ್ಥಾಪನೆಯ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ 16 ರಂದು ದೇಶದಾದ್ಯಂತ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಮಂಡಳಿಯು “ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ಎಂಬ ವಿಷಯವನ್ನು ನಿಗದಿಪಡಿಸಿದೆ ಎಂದು ಅವರು ತಿಳಿಸಿದ್ದಾರೆ.
